ಮಂಗಳೂರು: ಕೊರೋನ ಶಂಕಿತ ವ್ಯಕ್ತಿ ಆಸ್ಪತ್ರೆಯಿಂದ ಎಸ್ಕೇಪ್

ಕೊರೋನಾ ವೈರಸ್‌ ಹರಡುವ ಭೀತಿಯಲ್ಲಿರುವಾಗಲೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾನೆ. ಇದು ಜನರಲ್ಲಿ ಇನ್ನಷ್ಟು ಆತಂಕ ಸೃಷ್ಟಿಸಿದೆ.

 

Coronavirus suspect man escapes from Venlakh Hospital In Mangalore

ಮಂಗಳೂರು(ಮಾ.09): ಕೊರೋನಾ ವೈರಸ್‌ ಹರಡುವ ಭೀತಿಯಲ್ಲಿರುವಾಗಲೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾನೆ. ಇದು ಜನರಲ್ಲಿ ಇನ್ನಷ್ಟು ಆತಂಕ ಸೃಷ್ಟಿಸಿದೆ.

"

ಕೊರೊನ ಶಂಕಿತ ವ್ಯಕ್ತಿ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾನ. ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ದುಬೈನಿಂದ ಆಗಮಿಸಿದ ಪ್ರಯಾಣಿಕನಲ್ಲಿ ಕೊರೋನ ಲಕ್ಷಣ

ರಾತ್ರೋರಾತ್ರಿ ಐಸೋಲೇಶನ್ ವಾರ್ಡ್ ವ್ಯಕ್ತಿ ಎಸ್ಕೇಪ್ ಆಗಿದ್ದಾನೆ. ಆರೋಗ್ಯಾಧಿಕಾರಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಕರೆ ಮಾಡಿ ದೂರು ನೀಡಿದ್ದಾರೆ. ಮಂಗಳೂರಿಗೆ ದುಬೈ​ಯಿಂದ ಆಗ​ಮಿ​ಸಿದ ಪ್ರಯಾಣಿಕರೊಬ್ಬರಿಗೆ ಕೊರೋನ ಸೋಂಕು ತಗುಲಿದ ಶಂಕೆ ಹಿನ್ನೆಲೆಯಲ್ಲಿ ಆತನನ್ನು ನಗರದ ವೆನ್ಲಾಕ್‌ ಆಸ್ಪತ್ರೆಗೆ ಭಾನುವಾರ ದಾಖಲಿಸಲಾಗಿತ್ತು.

ಮೀಡಿಯಾಕ್ಕೆ ಹೆದರಿ ಆಸ್ಪತ್ರೆಯಿಂದಲೇ ಕರೋನಾ ಶಂಕಿತ ಪರಾರಿ, ನಮ್ಮ ದೇಶದಲ್ಲೇ!

ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭ ದುಬೈನಿಂದ ಆಗಮಿಸಿದ ಪ್ರಯಾಣಿಕನಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಆತನನ್ನು ವೆನ್ಲಾಕ್‌ ಆಸ್ಪತ್ರೆಯ ವಿಶೇಷ ಘಟಕಕ್ಕೆ ದಾಖಲಿಸಲಾಗಿದೆ.

Latest Videos
Follow Us:
Download App:
  • android
  • ios