ಬೆಂಗಳೂರು, [ಮಾ.09]:  ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೋನಾ ಶಂಕಿತ ವ್ಯಕ್ತಿ ಪತ್ತೆಯಾಗಿದ್ದಾನೆ.

ಬಂಟ್ವಾಳದ ವಿಟ್ಲ ಸಮೀಪದ ರಂಗರಮಜಲು ಎಂಬಲ್ಲಿ ಪತ್ತೆಯಾಗಿದ್ದಾನೆ. ಸಂಬಂಧಿಕರ ಮನೆಯಲ್ಲಿ ಶಂಕಿತ ಪತ್ತೆಯಾಗಿದ್ದು, ಪೊಲೀಸರು ಹಾಗೂ ವೈದ್ಯರು ಆತನನ್ನ ಮನವವೊಲಿಸಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಮಂಗಳೂರು: ಕೊರೋನ ಶಂಕಿತ ವ್ಯಕ್ತಿ ಆಸ್ಪತ್ರೆಯಿಂದ ಎಸ್ಕೇಪ್

ದುಬೈನಿಂದ ಭಾನುವಾರ ಬಂದಿಳಿದ ಸಂದರ್ಭದಲ್ಲಿ ಜ್ವರದ ಲಕ್ಷಣಗಳು ಕಂಡುಬಂದ ಕಾರಣದಿಂದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಕೋವಿಡ್-19 ಗಾಗಿ ಸ್ಥಾಪಿಸಾಗಿದ್ದ ವಾರ್ಡ್ ನಲ್ಲಿ ನಿಗಾ ಇರಿಸಲಾಗಿತ್ತು. 

ಆದ್ರೆ, ತಡ ರಾತ್ರಿ 1 ಗಂಟೆ ಸುಮಾರಿಗೆ ಆತನ ಕುಟುಂಬದ ಸದಸ್ಯರು ಮತ್ತು ಸಂಬಂಧಿಕರು ವೆನ್ಲಾಕ್ ಆಸ್ಪತ್ರೆಗೆ ಬಂದಿದ್ದರು. ಆ ವ್ಯಕ್ತಿಯನ್ನು ಕಳಿಸಿಕೊಡುವಂತೆ ಗಲಾಟೆ ಮಾಡಿದ್ದರು. ಬಳಿಕ, ತಾನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದಾಗಿ ಹೇಳಿದ ವ್ಯಕ್ತಿ ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾಗಿದ್ದ.

Breaking: ಕೊರೋನಾ ಭೀತಿ, ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ