Asianet Suvarna News Asianet Suvarna News

ಚುನಾವಣೆ ವೆಚ್ಚದಲ್ಲಿ ಭ್ರಷ್ಟಾಚಾರ: ಆರೋಪ

ಕಳೆದ ಲೋಕಸಭಾ, ವಿಧಾನಸಭಾ ಮತ್ತು ಪಟ್ಟಣ ಪಂಚಾಯಿತಿ ಚುನಾವಣೆ ವೆಚ್ಚಕ್ಕಾಗಿ ಸರ್ಕಾರದಿಂದ ತಾಲೂಕು ಆಡಳಿತಕ್ಕೆ ಬಿಡುಗಡೆಯಾಗಿದ್ದ ಹಣದಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ತನಿಖೆ ನಡೆಸಿ ಶಿಸ್ತು ಕ್ರಮ ಜರುಗಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತಾಲೂಕು ಅಧ್ಯಕ್ಷ ರವಿಕುಮಾರ್‌ ಒತ್ತಾಯಿಸಿದರು.

Corruption in election expenditure: Allegation
Author
First Published Mar 21, 2023, 5:52 AM IST

  ಕೊರಟಗೆರೆ :  ಕಳೆದ ಲೋಕಸಭಾ, ವಿಧಾನಸಭಾ ಮತ್ತು ಪಟ್ಟಣ ಪಂಚಾಯಿತಿ ಚುನಾವಣೆ ವೆಚ್ಚಕ್ಕಾಗಿ ಸರ್ಕಾರದಿಂದ ತಾಲೂಕು ಆಡಳಿತಕ್ಕೆ ಬಿಡುಗಡೆಯಾಗಿದ್ದ ಹಣದಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ತನಿಖೆ ನಡೆಸಿ ಶಿಸ್ತು ಕ್ರಮ ಜರುಗಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತಾಲೂಕು ಅಧ್ಯಕ್ಷ ರವಿಕುಮಾರ್‌ ಒತ್ತಾಯಿಸಿದರು.

ಕೊರಟಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳು ನಡೆದ ಸಂದರ್ಭದಲ್ಲಿ ತುರ್ತಾಗಿ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುವಂತೆ ಅಂದಿನ ತಹಸೀಲ್ದಾರ್‌ಗಳು ಹೇಳಿ ಸುಮಾರು ಏಳೆಂಟು ಸರಬರಾಜುದಾರರಿಂದ ಸಾಮಗ್ರಿಗಳನ್ನು ಸರಬರಾಜು ಮಾಡಿಸಿಕೊಂಡಿದ್ದಾರೆ. ಆದರೆ ಚುನಾವಣೆಗಳ ಅವಧಿ ಮುಗಿಯುತ್ತಾ ಬಂದರು ಹಣ ನೀಡದೆ ಬೋಗಸ್‌ ಬಿಲ್‌ಗಳನ್ನು ಹಾಕಿಕೊಂಡು ಹಣ ಡ್ರಾ ಮಾಡಿದ್ದಾರೆ ಎಂದು ದೂರಿದರು.

ಸರಬರಾಜುದಾರ ದಿನೇಶ್‌ ಮಾತನಾಡಿ, ಚುನಾವಣೆ ಕಾರ್ಯಕ್ಕಾಗಿ ತುರ್ತಾಗಿ ಸಾಮಗ್ರಿಗಳು ಬೇಕಿರುವುದರಿಂದ ಸರಬರಾಜು ಮಾಡಿ ಎಂದು ಮೌಖಿಕವಾಗಿ ತಿಳಿಸಿ ಸಾಮಗ್ರಿಗಳನ್ನು ಪಡೆದರು. ಈ ಅವಧಿಯಲ್ಲಿ ಮೂರು ಜನ ತಹಸೀಲ್ದಾರಗಳು ಬದಲಾವಣೆಯಾಗಿದ್ದು ನಮಗೆ ಅಲ್ಪ ಸ್ವಲ್ಪ ಬಿಲ್‌ ನೀಡಿ ಬಾಕಿ ಹಣ ನೀಡಿರುವುದಿಲ್ಲ. ಆದ್ದರಿಂದ ಜಿಲ್ಲಾಡಳಿತ ಸಮಗ್ರ ತನಿಖೆ ನಡೆಸಿ ನಾವು ಸರಬರಾಜು ಮಾಡಿರುವ ಸಾಮಗ್ರಿಗಳ ಹಣವನ್ನು ಕೊಡಿಸಬೇಕು ಎಂದು ಆಗ್ರಹಿಸಿದರು. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ, ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳಿಗೆ ಲಿಖಿತ ದೂರು ಸಲ್ಲಿಸಿದ್ದು ಈ ಬಗ್ಗೆ ಗಮನ ಹರಿಸಿ ನ್ಯಾಯ ಒದಗಿಸುವಂತೆ ಮನವಿ ಮಾಡಿದರು.

 ಧಾನಸಭೆಯ ಚುನಾವಣೆಗೆ ದಿನಗಳು ಸಮೀಪ

ಬೆಂಗಳೂರು(ಮಾ.19):  ವಿಧಾನಸಭೆಯ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಸಂಪೂರ್ಣ ಸಿದ್ಧತೆಗಳನ್ನು ಈಗಾಲೇ ಕೈಗೊಂಡಿದ್ದು, ಬಹುತೇಕ ಇದೇ ತಿಂಗಳ ಕೊನೆಯ ವಾರದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಮೇ 2ನೇ ವಾರ ಚುನಾವಣೆ ನಡೆವ ನಿರೀಕ್ಷೆಯಿದೆ.

ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ರಾಜ್ಯ ಮುಖ್ಯಚುನಾವಣಾಧಿಕಾರಿ ಕಚೇರಿಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಅಲ್ಲದೇ, ಇತ್ತೀಚೆಗಷ್ಟೇ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ರಾಜ್ಯಕ್ಕೆ ಆಗಮಿಸಿ ಮೂರು ದಿನಗಳ ಸಿದ್ಧತೆಗಳ ಕುರಿತು ಸಂಪೂರ್ಣವಾಗಿ ಪರಿಶೀಲನೆ ನಡೆಸಿದೆ. ದೆಹಲಿಯಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿ ದಿನಾಂಕವನ್ನು ಅಂತಿಮಗೊಳಿಸುವ ಕಾರ್ಯ ನಡೆಯುತ್ತಿದ್ದು, ಇದೇ ತಿಂಗಳ ಕೊನೆಯ ವಾರದಲ್ಲಿ ಅಥವಾ ಏಪ್ರಿಲ್‌ನ ಮೊದಲ ವಾರದಲ್ಲಿ ಅಧಿಕೃತವಾಗಿ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ ಎಂದು ಮೂಲಗಳು ಹೇಳಿವೆ.

ಯುಗಾದಿ ಹಬ್ಬದಂದೇ 126 ಅಭ್ಯರ್ಥಿಗಳ ಕಾಂಗ್ರೆಸ್‌ ಪಟ್ಟಿ ಪ್ರಕಟ?: ಸಂಖ್ಯಾಶಾಸ್ತ್ರ ಆಧರಿಸಿ ಘೋಷಣೆ?

ಪ್ರಸಕ್ತ ಸರ್ಕಾರದ ಕಾರ್ಯಾವಧಿ ಮೇ 24ಕ್ಕೆ ಮುಕ್ತಾಯವಾಗುವ ಕಾರಣ 2018ರ ವೇಳಾಪಟ್ಟಿಯಂತೆಯೇ ಈ ಬಾರಿಯೂ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕಳೆದ ಬಾರಿ ಮೇ 12ರಂದು ಮತದಾನ ನಡೆದಿದ್ದು, ಈ ಬಾರಿಯೂ ಮೇ ಎರಡನೇ ವಾರದಲ್ಲಿ ಮತದಾನ ನಡೆಸುವ ನಿರೀಕ್ಷೆ ಇದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಅಂದಾಜಿಸಿದೆ. ಈ ಲೆಕ್ಕಾಚಾರದಲ್ಲಿಯೇ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಏಪ್ರಿಲ್‌ ತಿಂಗಳ ಎರಡನೇ ವಾರದಲ್ಲಿ ಅಧಿಸೂಚನೆ ಹೊರಡಿಸಿ ಏಪ್ರಿಲ್‌ ತಿಂಗಳಾಂತ್ಯ ಅಥವಾ ಮೇ ಮೊದಲ ವಾರದ ವೇಳೆಗೆ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಲು ಆಯೋಗವು ಚಿಂತನೆ ನಡೆಸಿದೆ ಎನ್ನಲಾಗಿದೆ.

ಈಗಾಗಲೇ ಪಿಯುಸಿ ಪರೀಕ್ಷೆಯು ಆರಂಭಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.31ರಿಂದ ಏ.15ರವರೆಗೆ ನಡೆಯಲಿದೆ. ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಕ್ತಾಯಗೊಳ್ಳುವುದರಿಂದ ಚುನಾವಣೆ ನಡೆಸಲು ಯಾವುದೇ ಸಮಸ್ಯೆಯಾಗುವುದಿಲ್ಲ. ಶಿಕ್ಷಕರು, ಉಪನ್ಯಾಸಕರನ್ನು ಸಹ ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳುವುದಕ್ಕೂ ಯಾವುದೇ ಅಡ್ಡಿಗಳಿರುವುದಿಲ್ಲ ಎಂಬುದು ಆಯೋಗದ ಅಧಿಕಾರಿಗಳ ಲೆಕ್ಕಾಚಾರವಾಗಿದೆ

Follow Us:
Download App:
  • android
  • ios