ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತ ದಂಪತಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರು(ಸೆ.13): ಕಾರು, ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಘಟನೆ ನಿನ್ನೆ(ಮಂಗಳವಾರ) ರಾತ್ರಿ ನಡಿದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಬೈಕಿನಲ್ಲಿದ 14 ತಿಂಗಳ ಮಗುವಿಗೆ ಗಂಭೀರವಾದ ಗಾಯಗಳಾಗಿವೆ.
ಹೆದ್ದಾರಿ ಪಕ್ಕ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಟ್ರಕ್, 12 ಮಂದಿಯ ದಾರುಣ ಸಾವು
ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತ ದಂಪತಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
