ಏರುತ್ತಿರುವ ಕೊರೋನಾ : ವಾರದಲ್ಲಿ 4 ದಿನ ಶಿವಮೊಗ್ಗ ಸಂಪೂರ್ಣ ಬಂದ್
- ಶಿವಮೊಗ್ಗದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಏರಿಕೆ
- ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್
- ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಆದೇಶ
ಶಿವಮೊಗ್ಗ (ಮೇ.11): ದಿನೇ ದಿನೇ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿವೆ. ಇದರಿಂದ ಶಿವಮೊಗ್ಗದಲ್ಲಿ ವಾರದ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್ ಮಾಡಲಾಗುವುದು ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿಂದು ಮಾತನಾಡಿದ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದವರೆಗೆ ಸಂಪೂರ್ಣ ಬಂದ್ ಇರಲಿದೆ ಎಂದು ಹೇಳಿದರು.
'10 ಸಾವಿರ ರೂ. ಪರಿಹಾರ ನೀಡಲು ನಾವು ದುಡ್ಡು ಪ್ರಿಂಟ್ ಮಾಡ್ತೀವಾ'? ...
ನಗರದಲ್ಲಿ ಕೊರೋನಾ ಏರುತ್ತಿದೆ. ಸಾವಿರ ಆಸುಪಾಸಿನಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದು ಇದರಿಂದ ದಿನಸಿ ಅಂಗಡಿ ಸೇರಿದಂತೆ ಯಾವುದೇ ಚಟುವಟಿಕೆ ಇರುವುದಿಲ್ಲ. ಮೆಡಿಕಲ್ ಶಾಪ್, ಆಸ್ಪತ್ರೆ ಮಾತ್ರ ತೆರೆದಿರುತ್ತದೆ. ಆಯಾ ಪ್ರದೇಶದಲ್ಲಿ ತರಕಾರಿ ಅಂಗಡಿ ತೆರೆಯಲಾಗುತ್ತದೆ. ಬಿಟ್ಟರೆ ಎಪಿಎಂಸಿಯನ್ನೂ ಮುಚ್ಚಲಾಗುತ್ತದೆ ಎಂದು ಮಾಹಿತಿ ನೀಡಿದರು.
ಶಿವಮೊಗ್ಗ : ಗುಣಮುಖರಾದ್ರೂ ಆಸ್ಪತ್ರೆಯಿಂದ ಮನೆಗೆ ಹೋಗುತ್ತಿಲ್ಲ ರೋಗಿಗಳು! .
ಈ ನಿಟ್ಟಿನಲ್ಲಿ ಸಾರ್ವಜನಿಕರು ನೂತನ ಲಾಕ್‌ಡೌನ್ ನೀತಿಗೆ ಸಹಕರಿಸಬೇಕು. ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಸದ್ಯ 6 ಸಾವಿರಕ್ಕೂ ಹೆಚ್ಚು ಸಕ್ರೀಯ ಪ್ರಕರಣಗಳಿದ್ದು, ದಿನವೂ ಸಾವಿರ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ದಿನೇ ದಿನೇ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಉಸ್ತುವಾರಿ ಸಚಿವರು ಬಿಗಿ ಕ್ರಮದ ಬಗ್ಗೆ ಸೂಚನೆ ನೀಡಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona