Asianet Suvarna News Asianet Suvarna News

ದ. ಕನ್ನಡದಲ್ಲಿ ಮದ್ಯದಂಗಡಿಗೆ ಬರಲು ಷರತ್ತು ಅನ್ವಯ : ಏನಿದೆ ನಿಯಮ..?

  • ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಕಡಿಮೆ
  • ಮದ್ಯದಂಗಡಿಗೆ ಕೆಲವು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ ವ್ಯವಹಾರ  ಮಾಡಲು ಸೂಚನೆ
covid 19 Conditions to enter liquor store in Dakshin Kannada snr
Author
Bengaluru, First Published Sep 19, 2021, 3:06 PM IST

 ಮಂಗಳೂರು (ಸೆ.19):  ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ 19 ಗ್ರಾಮಗಳ ಮದ್ಯದಂಗಡಿಗಳಿಗೆ ಸೆ.21ರಿಂದ ಮುಂದಿನ ಆದೇಶದ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕೆಲವು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ ವ್ಯವಹಾರ ನಡೆಸಲು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಷರತ್ತುಗಳು ಇವು: ಮದ್ಯ ಮಾರಾಟ ಮಳಿಗೆಯಲ್ಲಿನ ನೌಕರರು ಹಾಗೂ ಮದ್ಯ ಖರೀದಿಗೆ ಬರುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.

ಕೊರೋನಾ ಇಳಿಮುಖ: ಧರ್ಮಸ್ಥಳ, ಕುಕ್ಕೆ ವಾರಾಂತ್ಯ ನಿರ್ಬಂಧ ತೆರವು

ಸನ್ನದು ಸ್ಥಳದಲ್ಲಿ ಸ್ಯಾನಿಟೈಸರ್‌ ಇಡಲು ವ್ಯವಸ್ಥೆ ಮಾಡುವುದರೊಂದಿಗೆ ಗ್ರಾಹಕರು ಕಡ್ಡಾಯವಾಗಿ ಸ್ಯಾನಿಟೈಸರ್‌ ಬಳಸುವಂತೆ ನೋಡಿಕೊಳ್ಳಬೇಕು ಹಾಗೂ ಈ ಬಗ್ಗೆ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು.

ಎಂದು ಜಿಲ್ಲಾ ದಂಡಾಧಿಕಾರಿಗಳು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

Follow Us:
Download App:
  • android
  • ios