ಮಂಡ್ಯ: 800ಕ್ಕೂ ಹೆಚ್ಚು ಹಳ್ಳಿಗಳಿಗೆ ಹಬ್ಬಿದ ಸೋಂಕು

  • ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ತೀವ್ರಗತಿಯಲ್ಲಿ ವ್ಯಾಪಿಸಿ  ಸೋಂಕು 
  • 800 ಹಳ್ಳಿಗಳಲ್ಲಿ ಹರಡಿದ ಕೊರೋನಾ ಮಹಾಮಾರಿ
  •  151 ಹಳ್ಳಿಗಳು ಈಗಾಗಲೇ ಸೀಲ್‌ಡೌನ್‌ 
Covid 19 Spreds in Mandya District 800 Villages snr

ಮಂಡ್ಯ (ಮೇ.23):  ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ತೀವ್ರ ಗತಿಯಲ್ಲಿ ವ್ಯಾಪಿಸುತ್ತಿದ್ದು, ಈಗಾಗಲೇ ಜಿಲ್ಲೆಯ 800ಕ್ಕೂ ಹೆಚ್ಚು ಹಳ್ಳಿಗಳಿಗೆ ಸೋಂಕು ಹರಡಿದೆ.

 ಮುಂಜಾಗ್ರತ ಕ್ರಮವಾಗಿ 151 ಹಳ್ಳಿಗಳನ್ನು ಈಗಾಗಲೇ ಸೀಲ್‌ಡೌನ್‌ ಮಾಡಲಾಗಿದ್ದು, ಕನಿಷ್ಠ 20ಕ್ಕಿಂತ ಹೆಚ್ಚು ಸೋಂಕಿತರಿರುವ ಗ್ರಾಮಗಳನ್ನು ಗುರುತಿಸಿ ಸೀಲ್‌ಡೌನ್‌ ಮಾಡಲಾಗುತ್ತಿದೆ. ಆದರೂ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ, ಸಾವಿನ ವೇಗವೂ ತಗ್ಗುತ್ತಿಲ್ಲ ಎಂದು ತಿಳಿದುಬಂದಿದೆ.

ಮೇ.22ರ ರಿಪೋರ್ಟ್: ರಾಜ್ಯದಲ್ಲಿ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ದುಪ್ಪಟ್ಟು ..

ಜಿಲ್ಲೆಯಲ್ಲಿರುವ 1486 ಹಳ್ಳಿಗಳಲ್ಲಿ ಸುಮಾರು 800ಕ್ಕೂ ಹೆಚ್ಚು ಹಳ್ಳಿಗಳಿಗೆ ಕೊರೋನಾ ವ್ಯಾಪಿಸಿದ್ದು, 6500ಕ್ಕೂ ಹೆಚ್ಚು ಸೋಂಕಿತರು ಪತ್ತೆ ಆಗಿದ್ದಾರೆ. ಆದರೆ, ಇವರನ್ನು ಹೋಂ -ಐಸೋಲೇಷನ್‌ ಮಾಡುತ್ತಿದ್ದು, ಇದೇ ಸೋಂಕು ತೀವ್ರವಾಗಿ ವ್ಯಾಪಿಸಲು ಕಾರಣ ಎಂದು ವೈದ್ಯರು ದೂರಿದ್ದು, ಪರೀಕ್ಷಾ ಪ್ರಮಾಣವನ್ನು ಇಳಿಕೆ ಮಾಡಿರುವುದು ಇದಕ್ಕೆ ಕಾರಣ ಎಂದು ಹೇಳಲಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Latest Videos
Follow Us:
Download App:
  • android
  • ios