Asianet Suvarna News Asianet Suvarna News

ಅನವಶ್ಯಕ ಗಡಿ ರಸ್ತೆ ಮುಚ್ಚಿ, ಹೆಚ್ಚುವರಿ ಚೆಕ್‌ ಪೋಸ್ಟ್‌

ಕೇರಳದಿಂದ ದ.ಕ. ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರು 72 ಗಂಟೆಯೊಳಗೆ ನಡೆಸಲಾದ ಆರ್‌ಟಿ-ಪಿಸಿಆರ್‌ ನೆಗೆಟಿವ್‌ ಪರೀಕ್ಷಾ ವರದಿ ಹೊಂದಿರುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಕಠಿಣ ಆದೇಶ ಹೊರಡಿಸಿದ್ದ

covid Dakshina Kannada DC  Strict Measures For Kerala Karnataka Border snr
Author
Bengaluru, First Published Mar 16, 2021, 4:18 PM IST

 ಮಂಗಳೂರು (ಮಾ.16):  ಕೇರಳದಿಂದ ದ.ಕ. ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರು 72 ಗಂಟೆಯೊಳಗೆ ನಡೆಸಲಾದ ಆರ್‌ಟಿ-ಪಿಸಿಆರ್‌ ನೆಗೆಟಿವ್‌ ಪರೀಕ್ಷಾ ವರದಿ ಹೊಂದಿರುವುದು ಕಡ್ಡಾಯ. ರಾರ‍ಯಪಿಡ್‌ ಆಂಟಿಜನ್‌ ಪರೀಕ್ಷಾ ವರದಿಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೊರ ರಾಜ್ಯದಿಂದ ಆಗಮಿಸುವವರಿಗೆ ವಿಶೇಷ ಸರ್ವೇಕ್ಷಣಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಸೋಮವಾರ ವಿಡಿಯೊ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಬೇಕು. ಸಾರ್ವಜನಿಕರು ವಿರಳವಾಗಿ ಸಂಚರಿಸುವ ರಸ್ತೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅನಾವಶ್ಯಕ ರಸ್ತೆಗಳನ್ನು ಮುಚ್ಚಬೇಕು. ತಾಲೂಕುವಾರು ಚೆಕ್‌ ಪೋಸ್ಟ್‌ಗಳೊಂದಿಗೆ ಹೆಚ್ಚುವರಿ ಚೆಕ್‌ಪೋಸ್ಟ್‌ ಗಳನ್ನು ತೆರೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

CM ಜೊತೆ ಮೋದಿ ಕೊರೋನಾ ಸಭೆಗೂ ಮುನ್ನ ಮತ್ತೆ 4 ನಗರಗಳಲ್ಲಿ ಕರ್ಫ್ಯೂ ಹೇರಿಕೆ

ವಿದ್ಯಾರ್ಥಿಗಳಿಗೆ ಕಡ್ಡಾಯ ಸ್ಕ್ರೀನಿಂಗ್‌: ಹೊರ ರಾಜ್ಯಗಳಿಂದ ಬರುವ ಎಲ್ಲ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್‌ ಮಾಡುವುದರೊಂದಿಗೆ 15 ದಿನಗಳಿಗೊಮ್ಮೆ ಪರೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟಅಧಿಕಾರಿಗಳಿಗೆ ಸೂಚಿಸಿದರು. ಒಂದು ವೇಳೆ ವಿದ್ಯಾರ್ಥಿಗಳು ತಮ್ಮ ಸ್ವಂತ ಊರಿಗೆ ಹೋದಂತಹ ಸಂದರ್ಭ ಮರಳಿ ಜಿಲ್ಲೆಗೆ ಬರುವಾಗ ಕಡ್ಡಾಯವಾಗಿ ನೆಗೆಟಿವ್‌ ಪರೀಕ್ಷಾ ವರದಿಯನ್ನು ತರಬೇಕು ಹಾಗೂ ಅವರ ಜತೆ ಜಿಲ್ಲೆಗೆ ಆಗಮಿಸುವ ಪೋಷಕರು ನೆಗೆಟಿವ್‌ ವರದಿ ತರಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಹೆಚ್ಚು ಕೋವಿಡ್‌ ಟೆಸ್ಟ್‌ ಮಾಡುವುದರೊಂದಿಗೆ ರೋಗಿಗಳನ್ನು ಗುರುತಿಸಿ ಅವರಿಗೆ ಚಿಕಿತ್ಸೆ ನೀಡಬೇಕು. ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವ ಕಾರ್ಯ ಚುರುಕುಗೋಳಿಸಬೇಕು ಎಂದರು.

ಜಿಲ್ಲಾ ಪಂಚಾಯ್ಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್‌ ಮಾತನಾಡಿ, ಗ್ರಾಮ ಪಂಚಾಯ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಈಗಾಗಲೇ ರಚಿಸಲಾಗಿರುವ ಟಾಸ್ಕ್‌ಫೋರ್ಸ್‌ ಸಮಿತಿಗಳು ಆಗಾಗ ಸಭೆ ನಡೆಸುವುದರೊಂದಿಗೆ ಕೋವಿಡ್‌ ಸೊಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಮಂಗಳೂರು ಮಹಾನಗರಪಾಲಿಕೆ ಆಯುಕ್ತ (ಪ್ರಭಾರ) ದಿನೇಶ್‌ ಕುಮಾರ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಚಂದ್ರ ಬಾಯರಿ, ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪಾಪಾ ಭೋವಿ, ತಾಲೂಕು ಆರೋಗ್ಯಾಧಿಕಾರಿಗಳು, ತಹಸೀಲ್ದಾರರು ಇದ್ದರು.

Follow Us:
Download App:
  • android
  • ios