ಕೇರಳದಿಂದ ಕರ್ನಾಟಕಕ್ಕೆ ಬರುವ ಜನರು 72 ಗಂಟೆಗಳ ಒಳಗಿನ ಆರ್‌ಟಿ-ಪಿಸಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಕಡ್ಡಾಯ  ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಜಿಲ್ಲಾಡಳಿತಗಳಿಗೆ ಹೈ ಕೋರ್ಟ್ ಆದೇಶ

 ಬೆಂಗಳೂರು (ಆ.18): ಕೇರಳದಿಂದ ಕರ್ನಾಟಕಕ್ಕೆ ಬರುವ ಜನರು 72 ಗಂಟೆಗಳ ಒಳಗಿನ ಆರ್‌ಟಿ-ಪಿಸಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ತರುವುದನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ರಾಜ್ಯ ಸರ್ಕಾರ ಮತ್ತು ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲಾಡಳಿತಗಳಿಗೆ ಹೈಕೋರ್ಟ್‌ ಆದೇಶಿಸಿದೆ.

ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಬರುವ ಜನರಿಂದ ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ವಿಶೇಷ ನಿಗಾ ಕ್ರಮಗಳನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ 2021ರ ಜುಲೈ 31ರಂದು ಸುತ್ತೋಲೆ ಹೊರಡಿಸಿದೆ. ಆದರೆ ಈ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿಲ್ಲ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಶುಶ್ರೂಷಕಿ ಡಿ. ಗೀತಾ ಮತ್ತು ಡಿಪ್ಲೋಮಾ ವಿದ್ಯಾರ್ಥಿ ಎಂ.ಸಿ.ಮೋಕ್ಷಿತ್‌ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ ಕೊಂಚ ಹೆಚ್ಚಳ: ಇಲ್ಲಿದೆ ಆ.17ರ ಅಂಕಿ-ಸಂಖ್ಯೆ

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠ, ಜು.31ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿರುವ ವಿಶೇಷ ನಿಗಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಸರ್ಕಾರ ಹಾಗೂ ಮೂರು ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಆದೇಶಿಸಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona