* ಉಚಿತ ಕೋವಿಡ್‌ ಪರೀಕ್ಷೆ ಮಾಡಲು ಸಿಬ್ಬಂದಿ ನಿಯೋಜನೆ* ಸೋಂಕು ದೃಡಪಟ್ಟರೆ ಪ್ರಯಾಣಕ್ಕೆ ಅನುಮತಿ ಇಲ್ಲ* ಧಾರವಾಡ, ಕಿತ್ತೂರು, ಖಾನಾಪುರ, ಚೋರ್ಲಾ ಮಾರ್ಗವಾಗಿ ಗೋವಾಕ್ಕೆ ಬಸ್‌ ಸಂಚಾರ 

ಹುಬ್ಬಳ್ಳಿ(ಜು.18): ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆಯೊಂದಿಗೆ ನಗರದಿಂದ ಗೋವಾ ರಾಜ್ಯಕ್ಕೆ ಸಾರಿಗೆ ಬಸ್ಸುಗಳ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ. ಈ ಬಸ್ಸುಗಳು ಗೋಕುಲ ರಸ್ತೆ ಬಸ್‌ ನಿಲ್ದಾಣದಿಂದ ಹೊರಡುತ್ತವೆ.

ಗೋವಾ ಸರ್ಕಾರದ ಕೋವಿಡ್‌ ಮಾರ್ಗಸೂಚಿ ನಿರ್ದೇಶನಗಳ ಪ್ರಕಾರ ಆ ರಾಜ್ಯಕ್ಕೆ ಪ್ರವೇಶಿಸುವ ಅನ್ಯ ರಾಜ್ಯಗಳ ಪ್ರಯಾಣಿಕರು 72 ಗಂಟೆಗಳ ಮುಂಚಿತವಾಗಿ ಪಡೆದಿರುವ ಕೋವಿಡ್‌ ನೆಗೆಟಿವ್‌ ವರದಿ ಹೊಂದಿರುವುದು ಕಡ್ಡಾಯವಾಗಿದೆ. 

ಗೋವಾಕ್ಕೆ ಹೋಗಲು ಕೊರೋನಾ ನೆಗೆಟಿವ್‌ ರಿಪೋರ್ಟ್ ಕಡ್ಡಾಯ

ಗೋವಾ ಪ್ರಯಾಣಿಕರು ಬೆಳಗ್ಗೆ 10 ಗಂಟೆಯ ಒಳಗೆ ಗೋಕುಲ ರಸ್ತೆ ಬಸ್‌ ನಿಲ್ದಾಣಕ್ಕೆ ಬರಬೇಕು. ಇಲ್ಲಿ ಉಚಿತವಾಗಿ ಕೋವಿಡ್‌ ಪರೀಕ್ಷೆ ಮಾಡಲು ತಾಲೂಕು ಆರೋಗ್ಯ ಇಲಾಖೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಮೊದಲು ರ‍್ಯಾಪಿಡ್ ಆಂಟಿಜನ್‌ ಟೆಸ್ಟ್‌ ಮಾಡಲಾಗುತ್ತದೆ. ಅದರಲ್ಲಿ ನೆಗೆಟಿವ್‌ ವರದಿ ಬಂದವರಿಗೆ ಮಾತ್ರ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿ ಮುಂದಿನ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಸೋಂಕು ದೃಡಪಟ್ಟರೆ ಪ್ರಯಾಣಕ್ಕೆ ಅನುಮತಿ ನೀಡುವುದಿಲ್ಲ.

ಈ ಬಸ್ಸುಗಳು ಧಾರವಾಡ, ಕಿತ್ತೂರು, ಖಾನಾಪುರ, ಚೋರ್ಲಾ ಮಾರ್ಗವಾಗಿ ಸಂಚರಿಸುತ್ತವೆ. ಪ್ರಯಾಣಿಕರ ಬೇಡಿಕೆ ಗಮನಿಸಿ ಮುಂದಿನ ದಿನಗಳಲ್ಲಿ ವಾಸ್ಕೋ ಮತ್ತು ಮಡಗಾಂವ್‌ಗೆ ಬಸ್‌ ಓಡಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.