ಗಂಗಾವತಿ(ಮೇ.08): ಕೊವೀಡ್‌ ಸೊಂಕಿತ ವ್ಯಕ್ತಿ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ತಕ್ಷಣ ಮದ್ಯಪಾನ ಮಾಡಿ ರಸ್ತೆಯಲ್ಲಿ ಕುಸಿದು ಬಿದ್ದ ಘಟನೆ ಗುರುವಾರ ಸಂಜೆ ಸಂಭವಿಸಿದೆ. 

ಭಟ್ಟರು ಹಂಚಿನಾಳ ಗ್ರಾಮದ 35 ವರ್ಷದ ವ್ಯಕ್ತಿಗೆ 4 ದಿನಗಳ ಹಿಂದೆ ಕೋವಿಡ್‌ ಸೋಂಕು ತಗಲಿತ್ತು. ಈ ವ್ಯಕ್ತಿಯನ್ನು ಆನೆಗೊಂದಿ ರಸ್ತೆಯಲ್ಲಿರುವ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

"

ಕೊಪ್ಪಳದಲ್ಲಿ ವೈರಸ್‌ ಅಟ್ಟಹಾಸ: ಕೊರೋನಾ ಸಂಕಷ್ಟಕ್ಕೆ ಮಿಡಿದ ಗವಿಸಿದ್ಧೇಶ್ವರ ಶ್ರೀ

ಗುರುವಾರ ಸಂಜೆ ಗುಣಮುಖರಾಗಿದ್ದರಿಂದ ಬಿಡುಗಡೆ ಮಾಡಲಾಗಿತ್ತು. ನಂತರ ನೇರವಾಗಿ ಆಸ್ಪತ್ರೆಯ ಪಕ್ಕದಲ್ಲಿರುವ ಬಾರ್‌ಗೆ ತೆರಳಿದ ವ್ಯಕ್ತಿ ಅಲ್ಲಿ ಮದ್ಯಪಾನ ಮಾಡಿ ರಸ್ತೆಯಲ್ಲಿ ಕುಸಿದು ಬಿದ್ದಿದ್ದಾನೆ. ಸುದ್ದಿ ತಿಳಿಯುತ್ತಲೇ ಆಸ್ಪತ್ರೆಯ ಸಿಬ್ಬಂದಿ ಆ್ಯಂಬುಲೆನ್ಸ್‌ ಮೂಲಕ ಭಟ್ಟರ ಹಂಚಿನಾಳ ಗ್ರಾಮಕ್ಕೆ ಕಳಿಸಿಕೊಟ್ಟಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona