ರಾಣಿಬೆನ್ನೂರು(ಮೇ.26): ಕೊರೋನಾದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಬೆಡ್‌ ಸಿಗದಿದ್ದರಿಂದ ಆಕ್ರೋಶಗೊಂಡು ನಗರದ ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. 

ಮಂಗಳವಾರ ತಾಲೂಕಿನ ಮೆಣಸಿನಹಾಳ ಗ್ರಾಮದ ಸುಮಾರು 60 ವರ್ಷದ ವ್ಯಕ್ತಿಯೊಬ್ಬ ಕೊರೋನಾದಿಂದ ತೀವ್ರವಾಗಿ ಬಳಲುತ್ತಿದ್ದ ಕಾರಣ ಸಂಬಂಧಿಕರ ಜತೆ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಲು ಆಗಮಿಸಿದ್ದರು.

"

ಆದರೆ ಆಸ್ಪತ್ರೆಯಲ್ಲಿ ತಕ್ಷಣಕ್ಕೆ ಯಾವುದೇ ಬೆಡ್‌ಗಳು ಖಾಲಿಯಿಲ್ಲ. ಅವು ಖಾಲಿಯಾದರೆ ನೀಡುವುದಾಗಿ ವೈದ್ಯರು ತಿಳಿಸಿದ್ದಾರೆ. ಇದರಿಂದ ಬೇಸತ್ತ ರೋಗಿಯ ಸಂಬಂಧಿಕರು ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಆಗ ಆತನ ಸಂಬಂಧಿಕರು ಅನಿವಾರ್ಯವಾಗಿ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona