ಹಾವೇರಿ (ಮೇ.15): ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧರೋಗಿಯೊಬ್ಬರು ಬಾಗಿಲಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ಸಂಭವಿಸಿದೆ. 

ರಾಣಿಬೆನ್ನೂರು ತಾಲೂಕಿನ ಗಂಗಾಜಲ ತಾಂಡಾದ ನಿವಾಸಿ ಯಲ್ಲಪ್ಪ ಲಮಾಣಿ (70) ಆತ್ಮಹತ್ಯೆ ಮಾಡಿಕೊಂಡಿರುವ ಸೋಂಕಿತ. ಅವರಿಗೆ ಮೇ 3ರಂದು ಕೊರೋನಾ ಪಾಸಿಟಿವ್‌ ಇರುವುದು ದೃಢಪಟ್ಟಿತ್ತು.

ಸೋಂಕಿತೆಯೆಂದು ಅಮ್ಮನನ್ನೇ ಮನೆಗೆ ಸೇರಿಸಿಕೊಳ್ಳದ ಪಾಪಿ ಮಗ: ಆತ್ಮಹತ್ಯೆಗೆ ಶರಣಾದ ತಾಯಿ .. 

ಆರಂಭದಲ್ಲಿ ರಾಣಿಬೆನ್ನೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದ ಅವರನ್ನು ಮೇ 5ರಂದು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. 

ಸೋಂಕಿನಿಂದ ಬೇಗ ಗುಣವಾಗದ ಕಾರಣ ಮಾನಸಿಕವಾಗಿ ನೊಂದು ಕೋವಿಡ್‌ ಸೆಂಟರ್‌ನ ಬಾಗಿಲಿಗೆ ಟವೆಲ್‌ನಿಂದ ಕಟ್ಟಿನೇಣು ಬಿಗಿದುಕೊಂಡಿದ್ದಾರೆ ತಿಳಿದುಬಂದಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona