Asianet Suvarna News Asianet Suvarna News

ಕೆ.ಆರ್‌.ನಗರ ಶಾಸಕ ಬದುಕಿದ್ದಾರಾ? ಸಾರಾಗೆ ಸೋಮಶೇಖರ್ ಚಾಟಿ

ಶಾಸಕ ಸಾ ರಾ ಮಹೇಶ್ ವಿರುದ್ಧ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗರಂ ಆಗಿದ್ದಾರೆ. ಅವರೇನು ಬದುಕಿದ್ದಾರಾ ಇಲ್ಲವಾ ಎಂದು ಪ್ರಶ್ನೆ ಮಾಡಿದ್ದಾರೆ. 

Covid Risk Minister ST Somashekar Slams JDS MLA Sa Ra Mahesh  snr
Author
Bengaluru, First Published Apr 29, 2021, 12:42 PM IST

ಮೈಸೂರು (ಏ.29) :  ನಾನು ಬದುಕಿದ್ದಾನಾ? ಕೆ.ಆರ್. ನಗರದ ಶಾಸಕರು ಬದುಕಿದ್ದಾರಾ? ಎಂದು ಜನರ ತೀರ್ಮಾನ ಮಾಡಿ ಹೇಳಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಬದುಕಿದ್ದಾರಾ ಎಂಬ ಮಾಜಿ ಸಚಿವ ಸಾರಾ ಮಹೇಶ್ ಹೇಳಿಕೆಗೆ ಸಚಿವ ಎಸ್.ಟಿ.ಸೋಮಶೇಖರ್ ತಿರುಗೇಟು ನೀಡಿದ್ದಾರೆ. 

ಮೈಸೂರಿನ‌ಲ್ಲಿಂದು ಮಾತನಾಡಿದ ಸಚಿವ ಸೋಮಶೇಖರ್,  11 ವಿಧಾನಸಭಾ ಕ್ಷೇತ್ರದಲ್ಲಿ ಕರೋನಾ ಕುರಿತು ಸಭೆ ಮಾಡಿದ್ದೇನೆ. ಎಲ್ಲಾ ಕ್ಷೇತ್ರದಲ್ಲೂ ಆಯಾ ಆಯಾ ಶಾಸಕರು ಸಭೆಗೆ ಬಂದು ಚರ್ಚೆ ಮಾಡಿದ್ದಾರೆ.  ಆದರೆ, ಕೆ.ಆರ್.‌ನಗರದ ಕ್ಷೇತ್ರದ ಶಾಸಕರು ಸಭೆಗೆ ಬರಲಿಲ್ಲ.  ಕ್ಷೇತ್ರದ ಜನರ ಬಗ್ಗೆ ಕಾಳಜಿ ಇದ್ದರೆ ಅವರು ಸಭೆಗೆ ಬರಬೇಕಿತ್ತು ಎಂದರು ವಾಗ್ದಾಳಿ ನಡೆಸಿದರು. 

ಜನತಾ ಕರ್ಫ್ಯೂ ಪ್ಯಾಕೇಜ್‌ ಚರ್ಚೆ ಆಗಿಲ್ಲ: ಸಚಿವ ಎಸ್‌ಟಿಎಸ್‌ .

ನಾನು ಈ ಜಿಲ್ಲೆಯ ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧನಿದ್ದೇನೆ.  ಹಗಲಿರುಳು ಈ ಜಿಲ್ಲೆಯ ಜನರಿಗಾಗಿ ಕೆಲಸ ಮಾಡುತ್ತಿದ್ದೇನೆ. ಇದನ್ನು ಜಿಲ್ಲೆಯ ಜ‌ನ ಗಮನಿಸಿದ್ದಾರೆ.  ಈಗ ಜನರೇ ತೀರ್ಮಾನ ಮಾಡಲಿ ಯಾರು ಬದುಕಿದ್ದಾರೆ ಅಂತಾ ಎಂದು ತಿರುಗೇಟು ನೀಡಿದರು. 

ನನಗೂ ದಿನಕ್ಕೂ ವೆಂಟಿಲೇಟರ್ , ಬೆಡ್ ಗಾಗಿ ಹತ್ತಾರು ಕರೆ ಬರುತ್ತವೆ.  ನಾನು ಯಾರಿಗೂ ಇನ್ಪ್ಲೂಯೆನ್ಸ್ ಮಾಡಿಲ್ಲ. ಯಾಕೆಂದರೆ ನನ್ನ ಇನ್ಪ್ಲೂಯೆನ್ಸ್ ನಿಂದ ಇನ್ನೊಬ್ಬ ರೋಗಿಗೆ ತೊಂದರೆ ಆಗುತ್ತದೆ ಎಂದು. ಇದು ನನ್ನ ಬದ್ಧತೆ. ಇದು ನನ್ನ ಕಾರ್ಯವೈಖರಿ ಎಂದು ಸೋಮಶೇಖರ್ ಹೇಳಿದರು.

ಸಿಎಂ ಕಚೇರಿ ವಾರ್‌ ರೂಂ ಆಗಿದೆ : ವಿಜಯೇಂದ್ರ

 ಕೊರೋನಾ ಮಹಾಮಾರಿ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಖಾಸಗಿ ಆಸ್ಪತ್ರೆ ವೈದ್ಯರ ಜೊತೆಗೆ ಸಭೆ ನಡೆಸಿದ್ದೇವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೈಸೂರಿನಲ್ಲಿ ಹೇಳಿದರು. 

ಮೈಸೂರಿನಲ್ಲಿಂದು ಮಾತನಾಡಿದ ವಿಜಯೇಂದ್ರ  ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕರೋನಾ ರೋಗಿಗಳಿಗೆ ಬೆಡ್ ನೀಡುವ ವಿಚಾರದಲ್ಲಿ ಒಂದಿಷ್ಟು ಸಮಸ್ಯೆ ಇತ್ತು.  ಇವತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆಯಲ್ಲಿ ಖಾಸಗಿ ಆಸ್ಪತ್ರೆಯವರ ಜೊತೆ ಸಭೆ ಮಾಡಿ ಬೆಡ್ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಬಡ ಕೊರೋನಾ ಸೋಂಕಿತರ ಚಿಕಿತ್ಸಾ ವೆಚ್ಚ ಭರಿಸುವೆ ಎಂದ ಸಚಿವ ..

ರಾಜ್ಯದಲ್ಲಿನ ಕರೋನಾ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸಮರ್ಥವಾಗಿದೆ.  ಸಿಎಂ ಅವರ ಕೃಷ್ಣ ಕಚೇರಿ ವಾರ್ ರೂಂ ರೀತಿ ಕೆಲಸ ಮಾಡುತ್ತಿದೆ.  ಈ ಸಂಕಷ್ಟದ ಸಮಯದಲ್ಲಿ ಎಲ್ಲರ ಸಹಕಾರ ಬೇಕು.  ವಿರೋಧ ಪಕ್ಷಗಳು ಮತ್ತು ಅವರಿವರ ಆರೋಪಗಳಿಗೆ ಉತ್ತರಿಸುವ ಸಮಯ ಇದಲ್ಲ ಎಂದು ವಿಜಯೇಂದ್ರ ಹೇಳಿದರು. 

ವಿಪಕ್ಷಗಳ ಆರೋಪಗಳಿಗೆ ಉತ್ತರಿಸುವ ಸಮಯ ಬರುತ್ತದೆ.  ಸದ್ಯ ನಮ್ಮ ಮುಂದೆ ಇರುವ ಈ ಸವಾಲನ್ನು ಸಮರ್ಥವಾಗಿ ಎದುರಿಸಬೇಕಿದೆ ಎಂದು ಮೈಸೂರಿನಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

Follow Us:
Download App:
  • android
  • ios