ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದು ಹಾಗೂ ದೇಶದಲ್ಲೂ ಹೊಸ ರೂಪಾಂತರಿ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ.

ಬೆಂಗಳೂರು (ಡಿ.23): ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದು ಹಾಗೂ ದೇಶದಲ್ಲೂ ಹೊಸ ರೂಪಾಂತರಿ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಿದ್ದು, ಬೂಸ್ಟರ್ ಡೋಸ್ ಪಡೆಯುವಂತೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಕೊರೊನಾ ಮಾರ್ಗಸೂಚಿ ಪಾಲಿಸಲು ಬೆಂವಿವಿ ಕುಲಸಚಿವ ಸುತ್ತೋಲೆ ಹೊರಡಿಸಿದೆ. 

ಸರ್ಕಾರದ ಮಾರ್ಗಸೂಚಿಯಂತೆ ನಗರದಲ್ಲಿ ಕೋವಿಡ್‌ ಮುನ್ನೆಚ್ಚರಿಕೆ: ರಾಜಧಾನಿಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಕುರಿತು ಮುಖ್ಯಮಂತ್ರಿಗಳ ನೇತೃತ್ವದ ಕೋವಿಡ್‌ ತಾಂತ್ರಿಕ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದರು. 

ಶೀಘ್ರ ಕೋವಿಡ್‌ ಮಾರ್ಗಸೂಚಿ ಬಿಡುಗಡೆ: ಸಚಿವ ಸುಧಾಕರ್‌

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೋನಾ ಸೋಂಕಿನ ಕುರಿತು ಆಗುತ್ತಿರುವ ಬೆಳವಣಿಗಳನ್ನು ಗಮನಿಸುತ್ತಿರುವ ಕೋವಿಡ್‌ ತಜ್ಞರು ಸಭೆ ನಡೆಸಿ, ಮುಖ್ಯಮಂತ್ರಿಗಳ ನೇತೃತ್ವದ ಕೊರೋನಾ ತಾಂತ್ರಿಕ ಸಮಿತಿಗೆ ಕೆಲವು ಶಿಫಾರಸುಗಳನ್ನು ಸಲ್ಲಿಸಿದ್ದಾರೆ. ಇದಕ್ಕೆ ಅನುಗುಣವಾಗಿ ಮುಖ್ಯಮಂತ್ರಿಗಳ ನೇತೃತ್ವದ ಸಮಿತಿ ನಿರ್ಧಾರ ತೆಗೆದುಕೊಳ್ಳಲಿದೆ. ಬಳಿಕ ಆರೋಗ್ಯ ಇಲಾಖೆ ಹಾಗೂ ಸರ್ಕಾರ ನೀಡುವ ಸಲಹೆ ಸೂಚನೆಗಳನ್ನು ಬಿಬಿಎಂಪಿ ಪಾಲನೆ ಮಾಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿಗೆ ಪ್ರತ್ಯೇಕವಾಗಿ ಯಾವುದೇ ಶಿಫಾರಸುಗಳನ್ನು ತಜ್ಞರು ಮಾಡಿಲ್ಲ. ಇಡೀ ರಾಜ್ಯಕ್ಕೆ ಅನುಗುಣವಾಗಿ ಶಿಫಾರಸು ಮಾಡಿದ್ದಾರೆ. ಸರ್ಕಾರವು ಸಹ ಇಡೀ ರಾಜ್ಯಕ್ಕೆ ಅನುಗುಣವಾಗಿ ಮಾರ್ಗಸೂಚಿ ನೀಡಲಿದೆ. ಬೆಂಗಳೂರಿನಲ್ಲಿ ಹಬ್ಬ-ಆಚರಣೆಗಳು ನಡೆಯುವ ಬಗ್ಗೆ ತಜ್ಞರು ಮತ್ತು ಸರ್ಕಾರದ ಗಮನಕ್ಕೆ ಇದೆ. ಎಲ್ಲಾ ಅಂಶಗಳನ್ನು ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದರು. ಹೆಚ್ಚು ಜನದಟ್ಟಣೆ ಇರುವ ಜಾಗಗಳಿಂದ ಸಾರ್ವಜನಿಕರು ದೂರುವಿರಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸಬೇಕು. ಆಗಾಗ ಕೈ ತೊಳೆಯುವ ಅಭ್ಯಾಸವನ್ನು ಮತ್ತೆ ರೂಢಿಸಿಕೊಳ್ಳಬೇಕು.

Bengaluru: ನಗರದಲ್ಲಿ ಮತ್ತೆ ಮಾಸ್ಕ್‌ ಕಡ್ಡಾಯ ಆಗುತ್ತಾ?

ಪಾಸಿಟಿವಿಟಿ ದರ ಶೇ.1.45ಕ್ಕೆ ಕುಸಿತ: ನಗರದಲ್ಲಿ ಗುರುವಾರ 15 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.1.45 ದಾಖಲಾಗಿದೆ. ಸೋಂಕಿನಿಂದ 13 ಗುಣಮುಖರಾಗಿದ್ದು, ಮೃತಪಟ್ಟವರದಿಯಾಗಿಲ್ಲ. ನಗರದಲ್ಲಿ 1,224 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಎಲ್ಲರೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 406 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 45 ಮಂದಿ ಮೊದಲ ಡೋಸ್‌, 42 ಮಂದಿ ಎರಡನೇ ಡೋಸ್‌ ಮತ್ತು 319 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 1059 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 906 ಆರ್‌ಟಿಪಿಸಿಆರ್‌ ಹಾಗೂ 153 ಮಂದಿಗೆ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.