ಸ್ಥಳಾವಕಾಶ ಇದ್ದರೆ ಮಾತ್ರ ಸಿಟಿಗೆ ಬಳಸಿಕೊಳ್ಳಿ| ಸಮಾಜದಲ್ಲಿ ಯಾರೊಬ್ಬರಿಗೂ ಲಾಕ್‌ಡೌನ್‌ ತಡೆದುಕೊಳ್ಳುವ ಶಕ್ತಿ ಇಲ್ಲ| ಜೀವ ಉಳಿಯುವುದರ ಜತೆಗೆ ಜೀವನವೂ ನಡೆಯಬೇಕು| ಕಳೆದ ಒಂದು ವರ್ಷದಿಂದ ಜನರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಮತ್ತೆ ಸಂಕಷ್ಟಕ್ಕೆ ಸಿಲುಕುವುದು ಬೇಡ: ಅಶ್ವತ್ಥನಾರಾಯಣ| 

ಬೆಂಗಳೂರು(ಏ.15): ಹೊರಗಿನಿಂದ ಬೆಂಗಳೂರಿಗೆ ಬರುತ್ತಿರುವ ಪ್ರತಿಯೊಬ್ಬರೂ ಕೋವಿಡ್‌ ತಪಾಸಣೆಗೊಳಗಾಗಬೇಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ಎಲ್ಲ ಕಡೆ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಉಚಿತವಾಗಿ ಸಿಗುತ್ತಿರುವ ಸೌಲಭ್ಯಗಳನ್ನು ಎಲ್ಲರೂ ಬಳಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.

ಬುಧವಾರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ವೈಯಕ್ತಿಕವಾಗಿ ಲಾಕ್‌ಡೌನ್‌ ಬೇಡ ಎಂದು ಹೇಳುತ್ತೇನೆ. ಸಮಾಜದಲ್ಲಿ ಯಾರೊಬ್ಬರಿಗೂ ಲಾಕ್‌ಡೌನ್‌ ತಡೆದುಕೊಳ್ಳುವ ಶಕ್ತಿ ಇಲ್ಲ. ಜೀವ ಉಳಿಯುವುದರ ಜತೆಗೆ ಜೀವನವೂ ನಡೆಯಬೇಕು. ಕಳೆದ ಒಂದು ವರ್ಷದಿಂದ ಜನರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಮತ್ತೆ ಸಂಕಷ್ಟಕ್ಕೆ ಸಿಲುಕುವುದು ಬೇಡ ಎಂದು ತಿಳಿಸಿದರು.

'ಬೆಳಿಗ್ಗೆ 10ರಿಂದ ಸಂಜೆ 5 ‘ಕರ್ಫ್ಯೂ ರೀತಿ ನಿರ್ಬಂಧ’ ತನ್ನಿ: ರಾತ್ರಿ ಕರ್ಫ್ಯೂ ರಾಜ್ಯಕ್ಕೆ ವಿಸ್ತರಿಸಿ'

ತಪಾಸಣಾ ಕೇಂದ್ರಗಳನ್ನು ಹೆಚ್ಚಿಸಲಾಗುತ್ತಿದೆ. ಆ ಕೇಂದ್ರಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುತ್ತಿದೆ.ದಿನಕ್ಕೆ ಒಂದು ಲಕ್ಷಕ್ಕಿಂತ ಹೆಚ್ಚು ಜನರಿಗೆ ಉಚಿತ ಟೆಸ್ಟ್‌ ಮಾಡಲಾಗುತ್ತಿದೆ. ಯಾರಿಗೆ ಲಕ್ಷಣಗಳು ಇದ್ದರೆ ಅಂತಹವರೆಲ್ಲಾ ತಕ್ಷಣ ತಪಾಸಣೆ ಮಾಡಿಸಿಕೊಳ್ಳಬೇಕು. ಔಷಧ ಇದೆ, ಲಸಿಕೆಯೂ ಲಭ್ಯ ಇದೆ. ಆಸ್ಪತ್ರೆ ಮಾತ್ರವಲ್ಲದೇ, ಮನೆಯಲ್ಲಿಯೂ ಹೋಮ್‌ ಐಸೋಲೇಷನ್‌ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ನುಡಿದರು.