ಬೆಂಗಳೂರು(ಜು.16): ಬುಧವಾರ ನಗರದಲ್ಲಿ ಒಟ್ಟು 1,975 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ನಗರದ ಸೋಂಕಿತರ ಸಂಖ್ಯೆ 22,944ಕ್ಕೆ ಏರಿಕೆಯಾಗಿದೆ. 463 ಮಂದಿಯು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಗುಣಮುಖರಾದವರ ಸಂಖ್ಯೆ 5,455ಕ್ಕೆ ಏರಿಕೆಯಾಗಿದೆ. ಇನ್ನು 17,051 ಸಕ್ರಿಯ ಪ್ರಕರಣಗಳಿದ್ದು, 317 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸಂಜಯ್‌ ಗಾಂಧಿ ಆಸ್ಪತ್ರೆ ಸಿಬ್ಬಂದಿಗೂ ಪಾಸಿಟಿವ್‌

ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಸಂಜಯ್‌ ಗಾಂಧಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಸೇರಿದಂತೆ 17 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಪರದಾಡುವಂತಾಗಿದೆ.

ಐದು ಜನ ವೈದ್ಯರು ಮತ್ತು 12 ಜನ ಇತರೆ ಆರೋಗ್ಯ ಸಿಬ್ಬಂದಿಗೆ ಕೊರೋನಾ ಪಾಸಿಟಿವ್‌ ಕಾಣಿಸಿಕೊಂಡಿದೆ. ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಸೋಂಕು ಹರಡಿದ್ದು, ಕೆಲವರನ್ನು ಹೋಮ್‌ ಕ್ವಾರಂಟೈನ್‌ಗೆ ಸೂಚಿಸಲಾಗಿದೆ.

ಬೆಂಗ್ಳೂರಿನಲ್ಲಿ ಒಂದೇ ದಿನ 1975 ಕೇಸ್‌, 60 ಸಾವು!

ಮತ್ತೆ ಕೆಲವರನ್ನು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದಾಗಿ ಇತರೆ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಪರದಾಡುವಂತಾಗಿದೆ. ವೈದ್ಯರ ಕೊರತೆಯಿಂದ ರಾಜೀವ್‌ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಲ ರೋಗಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಆಸ್ಪತ್ರೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.