'ಬಿಜೆಪಿ ಜತೆ ಕೈ ಜೋಡಿಸಿದ ಜೆಡಿಎಸ್‌ನ ನಿಜಬಣ್ಣ ಬಯಲು'
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಾರ್ಪೊರೇಟ್ ಕಂಪನಿಗಳ ಅನುಕೂಲಕ್ಕಾಗಿ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಜನಾಭಿಪ್ರಾಯಕ್ಕೆ ಮನ್ನಣೆ ನೀಡದೆ ಸರ್ವಾಧಿಕಾರಿಯಂತೆ ವರ್ತಿಸಿವೆ: ಸಿಪಿಎಂ ಆಕ್ರೋಶ
ಬಳ್ಳಾರಿ(ಡಿ.11): ಭೂಸುಧಾರಣೆ ಮಸೂದೆ ತಿದ್ದುಪಡಿಗೆ ವಿಧಾನ ಪರಿಷತ್‌ನಲ್ಲಿ ಅಂಗೀಕಾರದ ವೇಳೆ ಬಿಜೆಪಿ ಜತೆ ಕೈ ಜೋಡಿಸಿದ ಜೆಡಿಎಸ್‌ನ ನಿಜಬಣ್ಣ ಬಯಲಾಗಿದೆ ಎಂದು ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷ (ಸಿಪಿಎಂ) ಆರೋಪಿಸಿದೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಾರ್ಪೊರೇಟ್ ಕಂಪನಿಗಳ ಅನುಕೂಲಕ್ಕಾಗಿ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಜನಾಭಿಪ್ರಾಯಕ್ಕೆ ಮನ್ನಣೆ ನೀಡದೆ ಸರ್ವಾಧಿಕಾರಿಯಂತೆ ವರ್ತಿಸಿವೆ. ಇಂತಹ ಜನವಿರೋಧಿ, ರೈತರ ಸಂಪೂರ್ಣ ಹಿತ ಮರೆತ ನಿರ್ಧಾರಕ್ಕೆ ಜೆಡಿಎಸ್ ಸಹ ಕೈ ಜೋಡಿಸಿರುವುದು ಆ ಪಕ್ಷ ಈ ವರೆಗಿನ ನಿಜವಾದ ನಿಲುವು ಏನಿತ್ತು ಎಂಬುದು ಬಹಿರಂಗವಾಗಿದೆ.
ಈ ಗ್ರಾಮದಲ್ಲಿ ಪಂಚಾಯಿತಿ ಚುನಾವಣೆಯೇ ನಡೆದಿಲ್ಲ..!
ಕರಾಳ ತಿದ್ದುಪಡಿ ಮಸೂದೆ ಪ್ರತಿಯನ್ನು ಸುಟ್ಟು ಹಾಕುವ ಮೂಲಕ ಸಾರ್ವಜನಿಕರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸೂಕ್ತ ಸಂದೇಶ ರವಾನಿಸಬೇಕಾಗಿದೆ ಎಂದು ಪಕ್ಷದ ಜಿಲ್ಲಾ ಸಮಿತಿ ಪದಾಧಿಕಾರಿಗಳಾದ ಜೆ. ಸತ್ಯಬಾಬು, ಆರ್.ಎಸ್. ಬಸವರಾಜ್, ವಿ.ಎಸ್. ಶಿವಶಂಕರ್, ಚಂದ್ರಕುಮಾರಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.