ಮಂಗಳೂರು(ಏ.29): ಪಂಪ್‌ವೆಲ್‌ ಮೇಲ್ಸೇತುವೆ ಮೂರು ಕಡೆಗಳಲ್ಲಿ ಬಿರುಕು ಬಿಟ್ಟಿದ್ದು, ಇದೊಂದು ನಿಜಕ್ಕೂ ಆಘಾತಕಾರಿ ವಿಚಾರ. ಈ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಸಾಧ್ಯತೆಯಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ, ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಅಂತಿಮ ಹಂತದ ಕಾಮಗಾರಿ ನಡೆಯುವ ಸಂದರ್ಭ ಕಾಂಗ್ರೆಸ್‌ ನಿಯೋಗ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಕಳಪೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿತ್ತು. ಆದರೆ ಇದನ್ನು ಯಾರೂ ಗಂಭೀರವಾಗಿ ಪರಿಗಣಿಸದೆ ಕಾಮಗಾರಿ ಮುಂದುವರಿಸಿದರು. ಈಗ ಮೇಲ್ಸೇತುವೆ ಬಿರುಕು ಬಿಟ್ಟಿದ್ದು ಈ ನಷ್ಟಕ್ಕೆ ಯಾರು ಹೊಣೆ ಎಂದು ಹರೀಶ್‌ ಕುಮಾರ್‌ ಸುದ್ದಿಗಾರರಲ್ಲಿ ಮಾತನಾಡುತ್ತಾ ಪ್ರಶ್ನಿಸಿದ್ದಾರೆ.

ಮಂಗಳೂರು ಪಂಪ್‌ವೆಲ್‌ ಫ್ಲೈಓವರ್‌ಗೆ ಕೊನೆಗೂ ಸಿಕ್ತು ಉದ್ಘಾಟನೆ ಭಾಗ್ಯ

10 ವರ್ಷದ ನಂತರ ಮಂಗಳೂರಿನ ಪಂಪ್‌ವೆಲ್‌ ಫ್ಲೈ ಓವರ್‌ಗೆ ಉದ್ಘಾಟನೆಯ ಭಾಗ್ಯ ದೊರೆತಿತ್ತು. ಸುಮಾರು 600 ಮೀ ಉದ್ದದ ಫ್ಲೈಓವರ್‌ ಕಾಮಗಾರಿ 2010ರಲ್ಲಿ ಆರಂಭವಾಗಿತ್ತು. ಐದಾರು ಬಾರಿ ಡೆಡ್‌ಲೈನ್ ಕೊಟ್ಟ ಮೇಲೆ ಇದೀಗ ಪಂಪ್‌ವೆಲ್‌ ಫ್ಲೈಓವರ್‌ಗೆ ಉದ್ಘಾಟನೆಯಾಗಿತ್ತು.

ಪ್ಲಾಸ್ಮಾ ಚಿಕಿತ್ಸೆ ಅಕ್ರಮ: ಕೇಂದ್ರ ಆರೋಗ್ಯ ಸಚಿವಾಲಯದ ಎಚ್ಚರಿಕೆ!