ಮೈಸೂರು(ಫೆ.19): ಮೈಸೂರು ನಗರದ ನಗರದ ಹೃದಯ ಭಾಗದಲ್ಲಿ ಇರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಆದರೆ ಅಧಿಕಾರಿಗಳು ಮಾತ್ರ ಈ ಬಗ್ಗೆ ಎಚ್ಚೆತ್ತುಕೊಂಡತೆ ಕಾಣುತ್ತಿಲ್ಲ.

ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ನಾಲ್ವಡಿ ಪ್ರತಿಮೆಯನ್ನು ಅಮೃತ ಶಿಲೆಯಲ್ಲಿ ನಿರ್ಮಾಣ ಮಾಡಲಾಗಿದೆ. ನಾಲ್ವಡಿ ಸ್ಮರಣಾರ್ಥವಾಗಿ ಸರ್. ಎಂ. ವಿಶ್ವೇಶ್ವರಯ್ಯನವರು ಪ್ರತಿಮೆ ಉದ್ಘಾಟಿಸಿದ್ದರು.

ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಬಿರುಕು..!

ಪ್ರತಿಮೆಯ ಮುಖ ಹಾಗೂ ಕುತ್ತಿಗೆ ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಬಗ್ಗೆ ಪಾಲಿಕೆ ಹಾಗೂ ಜಿಲ್ಲಾಡಳಿತದಿಂದ ನಿರ್ಲಕ್ಷ್ಯ ತೋರಿಸಲಾಗಿದೆ. ಪ್ರತಿಮೆ ಸರಿಪಡಿಸುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗೆಯೇ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದಲ್ಲಿ ಪ್ರತಿಮೆ ಮುರಿದು ಬಿಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್
"