ಬೆಂಗಳೂರು (ನ.10):  ಈ ಬಾರಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಿಯಮ ಮೀರಿ ಪಟಾಕಿ ಸಿಡಿಸುವವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಬಿಬಿಎಂಪಿ ತೀರ್ಮಾನಿಸಿದೆ.

ಕೊರೋನಾ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣದ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಈ ನಡುವೆ ಕೇವಲ ಹಸಿರು ಪಟಾಕಿ ಮಾರಾಟ ಹಾಗೂ ಸಿಡಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ಹಾಗೂ ಪಟಾಕಿ ಮಾರಾಟಗಾರರು ರಾಜ್ಯ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಒಂದು ವೇಳೆ ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ದಂಡ ಹಾಕಲು ಚಿಂತನೆ:

ಈ ಪಟಾಕಿ ಹಾವಳಿಗೆ ಬ್ರೇಕ್‌ ಹಾಕಲು ಮಾರ್ಷಲ್‌ಗಳನ್ನು ಬಳಸಿಕೊಳ್ಳುವ ಬಗ್ಗೆಯೂ ಬಿಬಿಎಂಪಿ ಚಿಂತಿಸಿದೆ. ಹಬ್ಬದ ದಿನ ಮಾಷ್‌ರ್‍ಲ್‌ಗಳು ಸಿಟಿ ರೌಂಡ್ಸ್‌ ಹಾಕಿ ನಿಯಮ ಮೀರಿ ಪಟಾಕಿ ಸಿಡಿಸುವವರ ವಿರುದ್ಧ ದಂಡ ವಿಧಿಸಲಿದ್ದಾರೆ ಎನ್ನಲಾಗಿದೆ. ಕಸ ನಿರ್ವಹಣೆ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಮಾದರಿಯಲ್ಲಿ ಪಟಾಕಿ ವಿಚಾರದಲ್ಲಿಯೂ ದಂಡ ವಿಧಿಸುವ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ. ಆದರೆ, ಈ ಸಂಬಂಧ ಇನ್ನೂ ಯಾವುದೇ ತೀರ್ಮಾನವಾಗಿಲ್ಲ.

ಹಬ್ಬದ ಸಂಭ್ರಮವನ್ನು ಮರ್ಸಿಡಿಸ್ ಬೆಂಝ್ ಇ ಕ್ಲಾಸ್ ಸೆಡಾನ್‌ನೊಂದಿಗೆ ಆಚರಿಸಿ! .

ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಾರ ಹಸಿರು ಪಟಾಕಿ ಮಾತ್ರ ಸಿಡಿಸಬೇಕು. ನಿಯಮ ಉಲ್ಲಂಘಿಸಿದರೆ ವಿಪತ್ತು ನಿರ್ವಹಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು. ಇನ್ನು ಹಬ್ಬದ ಸಂದರ್ಭದಲ್ಲಿ ಮಾರ್ಷಲ್‌ಗಳನ್ನು ಬಳಸಿಕೊಂಡು ದಂಡ ವಿಧಿಸುವ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ.

- ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ