Asianet Suvarna News Asianet Suvarna News

ಸಹಕಾರಿ ಬ್ಯಾಂಕ್‌ಗಳಲ್ಲಿ ರಮೇಶ್‌ ಜಾರಕಿಹೊಳಿ ಕೋಟ್ಯಂತರ ಸಾಲ ಬಾಕಿ

*  ಬೆಳಗಾವಿ ಡಿಸಿಸಿ ಸಭೆಯಲ್ಲಿ ಸಹಕಾರಿ ಸಚಿವರಿಗೆ ಅಧಿಕಾರಿಗಳಿಂದ ಮಾಹಿತಿ
*  ಸಾಲ ಮತ್ತು ಬಡ್ಡಿ ಮರುಪಾವತಿ ಮಾಡುತ್ತಿರುವ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳಕರ
*  ಯಾರ ಸಾಲವನ್ನೂ ಮನ್ನಾ ಮಾಡಲಾಗುವುದಿಲ್ಲ: ಸಚಿವ ಸೋಮಶೇಖರ್‌
 

Crore of Money Loan Outstanding From Ramesh Jarkiholi in Cooperative Banks grg
Author
Bengaluru, First Published May 11, 2022, 9:51 AM IST

ಬೆಳ​ಗಾ​ವಿ(ಮೇ.11): ಮಾಜಿ ಸಚಿವ ರಮೇಶ್‌ ಜಾರಕಿಹೊಳಿ(Ramesh Jarkiholi) ರಾಜ್ಯದ ವಿವಿಧ ಸಹಕಾರಿ ಬ್ಯಾಂಕ್‌ಗಳಲ್ಲಿ ಕೋಟ್ಯಂತರ ರು. ಸಾಲ(Loan) ಬಾರಿ ಉಳಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌(ST Somashekhar) ಅವರು ಮಂಗಳವಾರ ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ವೇಳೆ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. 

ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ, ಶಿವಸಾಗರ ಸಹಕಾರಿ ಸಕ್ಕರೆ ಕಾರ್ಖಾನೆ, ಸವರಿನ್‌ ಇಂಡಸ್ಟ್ರೀಸ್‌ ಸೇರಿ​ದಂತೆ ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ(Belagavi DCC Bank) ನಾಲ್ಕು ಸಕ್ಕರೆ ಕಾರ್ಖಾನೆಗಳು ಡಿಫಾಲ್ಟ್‌ಗಳಿವೆ. ರಮೇಶ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ(Lakshmi Hebbalkar) ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಸಾಲ ಪಡೆದಿಲ್ಲ. ವಿಜಯಪುರ, ಶಿರಸಿ, ತುಮಕೂರು, ಮಂಗಳೂರಿನಲ್ಲಿ ರಮೇಶ ಜಾರಕಿಹೊಳಿ ಸಾಲ ಪಡೆದಿದ್ದು ಎರಡು ವರ್ಷದಿಂದ ಬಡ್ಡಿಯನ್ನೂ(Interest) ಮರುಪಾವತಿ ಮಾಡಿಲ್ಲ. ಈಗಾಗಲೇ ಹಲವು ಬಾರಿ ಅವರಿಗೆ ನೋಟಿಸ್‌ ನೀಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ವಿಜಯಪುರ ಡಿಸಿಸಿ ಬ್ಯಾಂಕ್‌ನಲ್ಲಿ ಸಾಲ ಪಡೆದಿರುವ ಲಕ್ಷ್ಮೀ ಹೆಬ್ಬಾಳಕರ ಸಾಲ ಮತ್ತು ಬಡ್ಡಿಯನ್ನು ಮರುಪಾವತಿ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದ್ದಾರೆ.

ಸಾಹುಕಾರ್‌ಗಳೆಲ್ಲ ಭಿಕ್ಷುಕ ಆಗುತ್ತಿದ್ದಾರೆ; ರಮೇಶ್ ಜಾರಕಿಹೊಳಿಗೆ ಡಿಕೆಶಿ ಪರೋಕ್ಷ ಟಾಂಗ್!

ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರ​ಕಿ​ಹೊಳಿ ಅವರ ಒಡೆ​ತ​ನದ ಸೌಭಾಗ್ಯ ಲಕ್ಷ್ಮಿ ಸಕ್ಕರೆ ಕಾರ್ಖಾನೆಯು ನೂರಾರು ಕೋಟಿ ರು. ಬಾಕಿ ಉಳಿ​ಸಿ​ಕೊಂಡರೂ ಸರ್ಕಾರ ಏನೂ ಕ್ರಮ ಕೈಗೊ​ಳ್ಳು​ತ್ತಿಲ್ಲ ಎಂದು ಕೆಪಿ​ಸಿಸಿ ಅಧ್ಯಕ್ಷ ಡಿ.ಕೆ.​ಶಿ​ವ​ಕು​ಮಾರ(DK Shivakumar) ಅವರು ಆರೋ​ಪಿ​ಸಿ​ದ ನಡು​ವೆಯೇ ಎಸ್‌.​ಟಿ.​ ಸೋ​ಮ​ಶೇ​ಖರ ಅವರು ಬೆಳಗಾವಿಯಲ್ಲಿ ಸಭೆ ನಡೆಸಿ ಸಾಲ ಮರು​ಪಾ​ವತಿ, ಸಾಲ ನೀಡಿ​ರು​ವ ವಿವರ, ಬಡ್ಡಿ ಸೇರಿ​ದಂತೆ ಯಾರಾರ‍ಯರು ಸುಸ್ತಿ​ದಾ​ರ​ರಿ​ದ್ದಾರೆ ಎಂಬ ಮಾಹಿ​ತಿ​ಯನ್ನು ಪಡೆ​ದು​ಕೊಂಡಿ​ದ್ದಾರೆ.

ಸಹಕಾರ ಕ್ಷೇತ್ರದಿಂದ ಮಾಜಿ ಸಚಿವ ರಮೇಶ ಜಾರಕಿಹೊಳಿ ಒಬ್ಬರೇ ಅಲ್ಲ. ಯಾರಾರ‍ಯರು ಢಿಪಾಲ್ಟ್‌ ಉಳಿಸಿಕೊಂಡಿದ್ದಾರೋ ಎಲ್ಲರಿಗೂ ನೋಟಿಸ್‌ ನೀಡಲಾಗಿದೆ. ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗುತ್ತದೆ. ಯಾರಿಗೂ ರಕ್ಷಣೆ ನೀಡುವ ಪ್ರಶ್ನೆಯೇ ಇಲ್ಲ. ಯಾರ ಸಾಲವನ್ನೂ ಮನ್ನಾ ಮಾಡಲಾಗುವುದಿಲ್ಲ ಅಂತ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ. 
 

Follow Us:
Download App:
  • android
  • ios