Asianet Suvarna News Asianet Suvarna News

ಕಲಬುರಗಿ ಹಸಿರೀಕರಣಕ್ಕೆ ಹೆಚ್ಚು ಕೆಲ್ಸ ಮಾಡಿ: ಖಂಡ್ರೆ ಕರೆ

ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸಲು ಪ್ರತಿ ತಾಲೂಕಿಗೊಂದು ಟ್ರೀ ಪಾರ್ಕ್ (ಮರಗಳ ಉದ್ಯಾನವನ) ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಕಲಬುರಗಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸುನೀಲ ಪನ್ವಾರ ಅವರಿಗೆ ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ› ಸಚಿವ ಈಶ್ವರ ಖಂಡ್ರೆ ಸೂಚಿಸಿದರು.

Cultivate more forests in Kalaburagi district says forest minister  Ishwar Khandre rav
Author
First Published Jul 10, 2023, 7:52 PM IST

ಕಲಬುರಗಿ (ಜು.10) : ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸಲು ಪ್ರತಿ ತಾಲೂಕಿಗೊಂದು ಟ್ರೀ ಪಾರ್ಕ್ (ಮರಗಳ ಉದ್ಯಾನವನ) ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಕಲಬುರಗಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸುನೀಲ ಪನ್ವಾರ ಅವರಿಗೆ ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ› ಸಚಿವ ಈಶ್ವರ ಖಂಡ್ರೆ(Eshwar khandre) ಸೂಚಿಸಿದರು.

ಕಲಬುರಗಿ ಕಲಬುರಗಿ ಅರಣ್ಯ ವೃತ್ತ ಕಚೇರಿಯಲ್ಲಿ ಕಲಬುರಗಿ, ಬೀದರ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇದಕ್ಕೆ ಇಲಾಖೆಯಿಂದಾಗಲಿ, ಕೆಕೆಆರ್‌ಡಿಬಿ ಅನುದಾನ ಒದಗಿಸಲಾಗುವುದು. ಮುಖ್ಯಮಂತ್ರಿಗಳೊಂದಿಗೆ ಮತ್ತು ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸುವೆನೆಂದರು.

ಬಾಕಿ ಕೊಡದಿರುವ ಕಾರ್ಖಾನೆಗಳ ಸಕ್ಕರೆ ಜಪ್ತಿ ಮಾಡಿ: ಸಚಿವ ಈಶ್ವರ ಖಂಡ್ರೆ

ಕಲಬುರಗಿಯಲ್ಲಿ ಶೇ.3ರಷ್ಟುಮಾತ್ರ ಅರಣ್ಯ:

ಕಲಬುರಗಿಯಲ್ಲಿ ಶೇ.3ರಷ್ಟುಮಾತ್ರ ಅರಣ್ಯ ಪ್ರದೇಶವಿದೆ. ಈ ಪೈಕಿ ಚಿಂಚೋಳಿಯಲ್ಲಿಯೇ ಹೆಚ್ಚು. ಹೀಗಾಗಿ ಕಲಬುರಗಿ ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಹೆಚ್ಚಳಕ್ಕೆ ಏನೆಲ್ಲ ಸಾಧ್ಯತೆಗಳಿವೆ ಎಲ್ಲವನ್ನು ಮಾಡಿ. ವಿಶೇಷವಾಗಿ ಕೆರೆ, ಬಾವಿ, ಬ್ರಿಡ್ಜ್‌-ಕಂ-ಬ್ಯಾರೇಜ್‌, ಜಿಲ್ಲಾ ರಸ್ತೆ, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕದಲ್ಲಿ ಮುಂದಿನ 15 ದಿನದಲ್ಲಿ ಯುದ್ದೋಪಾದಿಯಲ್ಲಿ ಗಿಡ ನೆಡಬೇಕು. ಚಿಂಚೋಳಿ ತಾಲೂಕಿನ ಗೊಟ್ಟಂಗೊಟ್ಟಮತ್ತು ಆಳಂದ ತಾಲೂಕಿನ ಭೂಸನೂರನಲ್ಲಿನ ದೈವಿ ವನ ಅಭಿವೃದ್ಧಿಗೂ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಕಲಬುರಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್‌.ಭಾವಿಕಟ್ಟಿಅವರಿಗೆ ಸೂಚಿಸಿದರು.

5 ಕೋಟಿ ಸಸಿ ನೆಡುವ ಗುರಿ:

ರಾಜ್ಯದಲ್ಲಿ ಕಳೆದ ಜು.1ರಿಂದ ವನಮಹೋತ್ಸವ ಅಂಗವಾಗಿ ಸಸಿ ನೆಡೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಮುಂದಿನ 3 ತಿಂಗಳಲ್ಲಿ ರಾಜ್ಯದಾದ್ಯಂತ 5 ಕೋಟಿ ಸಸಿ ನೆಡೆಯುವ ಗುರಿ ಹೊಂದಲಾಗಿದೆ. ಕಲಬುರಗಿಯಲ್ಲಿ ಕನಿಷ್ಠ 10 ಲಕ್ಷ ಸಸಿ ನೆಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಸಚಿವರು, ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಗುರಿ ಮೀರಿ ಸಾಧನೆ ಮಾಡುವಂತೆ ಡಿಎಫ್‌ಒಗಳಿಗೆ ನಿರ್ದೇಶನ ನೀಡಿದರು.

6 ತಿಂಗಳಲ್ಲಿ ಹುದ್ದೆಗಳ ಭರ್ತಿಗೆ ಕ್ರಮ:

ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಅರಣ್ಯ ಸಂರಕ್ಷಣಾಧಿಕಾರಿಗಳು ಇಲಾಖೆಯ ಪ್ರಗತಿ ವಿವರಿಸುತ್ತಾ, ಪ್ರಸ್ತುತ ಕಲಬುರಗಿ ವೃತ್ತದ ಕಲಬುರಗಿ, ಬೀದರ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ 583 ಹುದ್ದೆ ಮಂಜೂರಾಗಿದ್ದು, ಇದರಲ್ಲಿ 398 ಭರ್ತಿಯಾಗಿವೆ. ಉಳಿದಂತೆ 185 ಹುದ್ದೆಗಳು ಖಾಲಿ ಇವೆ ಎಂದು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯೆಸಿದ ಸಚಿವ ಈಶ್ವರ ಬಿ. ಖಂಡ್ರೆ ಅವರು, ಖಾಲಿ ಹುದ್ದೆಗಳ ಮಾಹಿತಿ ನೀಡಿದಲ್ಲಿ ಮುಂದಿನ 6 ತಿಂಗಳಲ್ಲಿ ಭರ್ತಿ ಮಾಡಲಾಗುವುದು. ಅಲ್ಲಿಯ ವರೆಗೆ ಗುತ್ತಿಗೆ ಮೇಲೆ ಸಿಬ್ಬಂದಿಗಳ ಸೇವೆ ಪಡೆಯಿರಿ ಎಂದರು.

ಸಭೆಯಲ್ಲಿ ಬೀದರ್‌ ಡಿಎಫ್‌ಓ ಎಂ.ಎಂ. ವಾನತಿ ಮತ್ತು ಎ.ಬಿ. ಪಾಟೀಲ, ಯಾದಗಿರಿ ಡಿಎಫ್‌ಓ ಕಾಜೋಲ್‌ ಪಾಟೀಲ್‌ ಮತ್ತು ಎಂ.ಕೆ. ಭಗಾಯತ್‌, ರಾಯಚೂರು ಡಿಎಫ್‌ಓ ಚಂದ್ರಣ್ಣಾ ಮತ್ತು ಮುನೀರ್‌ ಅಹ್ಮದ್‌ ಹಾಗೂ ಕಲಬುರಗಿ ಡಿ.ಎಫ್‌.ಓ ಎಂ.ಎಲ್‌.ಭಾವಿಕಟ್ಟಿ, ಎಸಿಎಫ್‌ ಇದ್ದರು.

ಕಲ್ಯಾಣದ ಅಭಿವೃದ್ಧಿಗೆ ಬಜೆಟ್‌ ಪೂರಕ: ಸಚಿವ ಈಶ್ವರ್ ಖಂಡ್ರೆ

ಅರಣ್ಯ ಪ್ರದೇಶ ಹೆಚ್ಚಿಸಿ, ಸಚಿವರಿಗೆ ಮನವಿ

ಇದೇ ಸಂದರ್ಭದಲ್ಲಿ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಡಾ.ರಾಜೇಂದ್ರ ಯರನಾಳೆ ನೇತೃತ್ವದ ರೈತರ ನಿಯೋಗವು ಸಚಿವರನ್ನು ಭೇಟಿಯಾಗಿ, ಕ.ಕ. ಭಾಗದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸಬೇಕು, ಕಟಾವಿಗೆ ಬಂದ ಮರಗಳನ್ನು ಕಟಾವು ಮಾಡಲು ಸರಳೀಕೃತ ವ್ಯವಸ್ಥೆ ಜಾರಿಗೆ ತರಬೇಕು ಹಾಗೂ ಪ್ರಸ್ತುತ ಶ್ರೀಗಂಧ ಬೆಳೆಯುವ ರೈತ ತನ್ನ ಮನೆಯಲ್ಲಿ ಕೇವಲ 4 ಕೆ.ಜಿ. ಮಾತ್ರ ಶ್ರೀಗಂಧದ ಕಟ್ಟಿಗೆ ಇಟ್ಟುಕೊಳ್ಳಲು ಅವಕಾಶವಿದ್ದು, ಈ ನಿಯಮ ರೈತರಿಗೆ ಪೂರಕವಾಗಿಲ್ಲ. ಹೀಗಾಗಿ ಈ ನಿಯಮ ತೆಗೆದು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಳೆ-ಗಾಳಿಗೆ ಶ್ರೀಗಂಧದ ಗಿಡದ ಟೊಂಗೆ ಮುರಿದು ಬಿದ್ದಲ್ಲಿ ಅಂತಹ ಕಟ್ಟಿಗೆಗಳು ರೈತರು ತಮ್ಮ ಮನೆಯಲ್ಲಿ ಇಟ್ಟುಕೊಳ್ಳಲು ಮತ್ತು ಮಾರಾಟ ಮಾಡಲು ಅವಕಾಶ ಮಾಡಿಕೊಡಬೇಕು ಎಂಬ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಿದರು.

Follow Us:
Download App:
  • android
  • ios