ಭಾರೀ ಮಳೆ ಸೂಚನೆ ಕೊಟ್ಟ ಹವಾಮಾನ ಇಲಾಖೆ, ಈ ಜಿಲ್ಲೆಗಳಲ್ಲಿ ಅಲರ್ಟ್
* ತೌಕ್ಟೆ ಚಂಡಮಾರುತ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ
* ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ
* ಬೆಂಗಳೂರಿನಲ್ಲಿಯೂ ಇನ್ನೆರಡು ದಿನ ಮಳೆಯಾಗಲಿದೆ
* ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ
ಬೆಂಗಳೂರು( ಮೇ 16) ಮೇ 16 ರಿಂದ 20 ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದು ಭಾನುವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ಅತಿ ಹೆಚ್ಚು ಮಳೆ(24 ಸೆ.ಮೀ) ದಾಖಲಾಗಿದೆ. ಕೋಟ, ಪುತ್ತೂರು, ಕುಂದಾಪುರ, ಉಡುಪಿ, ಭಟ್ಕಳದಲ್ಲಿ ಅತಿಹೆಚ್ಚು ಮಳೆಯಾಗಿದೆ. ತೌಕ್ಟೆ ಚಂಡಮಾರುತ ಪೂರ್ವ ಅರಬ್ಬಿ ಸಮುದ್ರದಲ್ಲಿದ್ದು ಮೇ 18 ರಂದು ಗುಜರಾತ್ ತೀರಕ್ಕೆ ಅಪ್ಪಳಿಸಲಿದೆ.
ಚಂಡಮಾರುತ ಅಬ್ಬರಿಸುತ್ತಿರುವ ರೀತಿ ಹೇಗಿದೆ?
ಉಡುಪಿ, ದಕ್ಷಿಣಕನ್ನಡ, ಉತ್ತರ ಕನ್ನಡ, ಶಿವಮೊಗ್ಗ , ಹಾಸನ, ಕೊಡಗು, ಚಿಕ್ಕಮಗಳೂರು, ಧಾರವಾಡ, ಬೆಳಗಾವಿಯಲ್ಲಿ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿಯೂ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.