Asianet Suvarna News Asianet Suvarna News

ಡಿ. 6ರ ಬಳಿಕ ಸೋಮಣ್ಣ ಪ್ರಮುಖ ರಾಜಕೀಯ ನಿರ್ಧಾರ

ರಾಜ್ಯ ಬಿಜೆಪಿಯಲ್ಲಿ ನಡೆದಿರುವ ಬೆಳವಣಿಗೆಗಳಿಂದ ಬೇಸರಗೊಂಡು ಪಕ್ಷದ ಚಟುವಟಿಕೆಯಿಂದ ದೂರ ಉಳಿದಿರುವ ಮಾಜಿ ಸಚಿವ ವಿ ಸೋಮಣ್ಣ ಅವರು ಡಿ. 6ರ ನಂತರ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದರು.

D. After 6, Somanna is an important political decision snr
Author
First Published Nov 26, 2023, 8:46 AM IST | Last Updated Nov 26, 2023, 8:46 AM IST

 ತುಮಕೂರು :  ರಾಜ್ಯ ಬಿಜೆಪಿಯಲ್ಲಿ ನಡೆದಿರುವ ಬೆಳವಣಿಗೆಗಳಿಂದ ಬೇಸರಗೊಂಡು ಪಕ್ಷದ ಚಟುವಟಿಕೆಯಿಂದ ದೂರ ಉಳಿದಿರುವ ಮಾಜಿ ಸಚಿವ ವಿ ಸೋಮಣ್ಣ ಅವರು ಡಿ. 6ರ ನಂತರ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದರು.

ನಗರದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಡಿ. 7, 8 ಮತ್ತು 9ರಂದು ಪಕ್ಷದ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಅರವಿಂದ ಲಿಂಬಾವಳಿ, ರಮೇಶ್ ಜಾರಕಿಹೊಳಿ ಅವರೊಂದಿಗೆ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿ ಅಭಿಪ್ರಾಯ ಹೇಳಿಕೊಳ್ಳುತ್ತೇವೆ ಎಂದರು.

ಪಕ್ಷದಲ್ಲಿ ಯಾರು ಅಸಮಾಧಾನಿತರಿಲ್ಲ, ದೂರದೃಷ್ಟಿಯ ಚಿಂತನೆ ಇದೆ. ಹಾಗಾಗಿ, ಡಿ. 7,8 ಮತ್ತು 9 ರಂದು ನಾವೆಲ್ಲರೂ ದೆಹಲಿಗೆ ಹೋಗಿ ಹೈಕಮಾಂಡ್ ಬಳಿ ಅಭಿಪ್ರಾಯ ಅನಿಸಿಕೆ ಹೇಳಿಕೊಳ್ಳಲು ನಿರ್ಧಾರ ಮಾಡಿದ್ದೇವೆ ಎಂದರು.

ಶ್ರೀಮಠದ ಆವರಣದಲ್ಲಿ ಗುರುಭವನ ನಿರ್ಮಿಸಲು ನಮ್ಮ ಕುಟುಂಬಕ್ಕೆ ಅವಕಾಶ ದೊರೆತಿದೆ. ಈ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಡಿ. 6 ರಂದು ಗುರುಭವನ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದರು.

ಡಿ. 6 ರಂದು ಗುರುಭವನವನ್ನು ಉದ್ಘಾಟಿಸಿ ಶ್ರೀ ಮಠಕ್ಕೆ ಹಸ್ತಾಂತರ ಮಾಡಲಾಗುವುದು ಎಂದ ಅವರು ಈ ಗುರು ಭವನ ನಿರ್ಮಾಣ ಮಾಡಲು ಕುಟುಂಬಕ್ಕೆ ಅವಕಾಶ ಸಿಕ್ಕಿರುವುದು ಪೂರ್ವ ಜನ್ಮದ ಪುಣ್ಯ ಎಂದರು.

ಗುರುಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಇಬ್ಬರು ಸಚಿವರು, ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸಲಿದ್ದಾರೆ. ಈ ಪವಿತ್ರ ಕಾರ್ಯಕ್ರಮಕ್ಕೆ ರಾಜಕೀಯ ಲೇಪನ ಬೆರೆಸುವುದು ಬೇಡ ಎಂದರು.

ಇದೇ ಸಂದರ್ಭದಲ್ಲಿ ಸೋಮಣ್ಣ ಹಳೆಮಠದ ಪಕ್ಕದಲ್ಲಿ ನಿರ್ಮಿಸಲಾಗಿರುವ ಗುರುಭವನವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸಂಸದ ಜಿ.ಎಸ್. ಬಸವರಾಜು, ಶಾಸಕರಾದ ಜ್ಯೋತಿಗಣೇಶ್, ಅರುಣ್ ಸೋಮಣ್ಣ, ಶೈಲಜಾ ಸೋಮಣ್ಣ, , ಸಿ.ಎಂ. ರಾಜಪ್ಪ, ದಾಸೇಗೌಡ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಶ್ರೀಧರ್, ಪಾಲನೇತ್ರ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ, ಬಾವಿಕಟ್ಟೆ ನಾಗಣ್ಣ, ಶಿವಪ್ರಸಾದ್, ಸಿದ್ಧಗಂಗಾ ಆಸ್ಪತ್ರೆಯ ಡಾ. ಪರಮೇಶ್ವರ್, ಆರ್. ಬಸವರಾಜು, ಗ್ಯಾಸ್ ಬಾಬು, ಪ್ರಕಾಶ್ ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios