ಬಾಗಲಕೋಟೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಜಿಲ್ಲಾಧಿಕಾರಿ ಪಣ, ಸಾರ್ವಜನಿಕರಿಗೆ ಜಾಗೃತಿ ಕರೆ

ಬಾಗಲಕೋಟೆ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಜರುಗುತ್ತಿರುವ ಬಗ್ಗೆ ವರದಿಯಾಗುತ್ತಿದ್ದು,  ಇಂತಹ ಸಾಮಾಜಿಕ ಪಿಡುಗುಗಳಿಂದ  ಮಕ್ಕಳನ್ನು ರಕ್ಷಿಸಲು ಜಿಲ್ಲಾಡಳಿತದ ಜೊತೆ ಕೈ ಜೋಡಿಸುವಂತೆ ಸಂಘ ಸಂಸ್ಥೆಗಳಿಗೆ, ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್  ಕರೆ ನೀಡಿದ್ದಾರೆ.

D C P sunil kumar calls for public awareness to prevent child marriage in Bagalkot gow

ವರದಿ: ಮಲ್ಲಿಕಾರ್ಜುನ ಹೊಸಮನಿ, ಏಷಿಯಾನೆಟ್ ಸುವರ್ಣನ್ಯೂಸ್ 

ಬಾಗಲಕೋಟೆ (ಫೆ.18): ಬಾಗಲಕೋಟೆ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಜರುಗುತ್ತಿರುವ ಬಗ್ಗೆ ವರದಿಯಾಗುತ್ತಿದ್ದು,  ಬಾಲ್ಯ ವಿವಾಹ ಮತ್ತು ಇತರೆ ಸಾಮಾಜಿಕ ಪಿಡುಗುಗಳಿಂದ  ಮಕ್ಕಳನ್ನು ರಕ್ಷಿಸಲು ಜಿಲ್ಲಾಡಳಿತದ ಜೊತೆ ಕೈ ಜೋಡಿಸುವಂತೆ ಎಲ್ಲಾ ಜನಪ್ರತಿನಿಧಿಗಳಿಗೆ, ಸಂಘ ಸಂಸ್ಥೆಗಳಿಗೆ, ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಕರೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿಗಳು ಹೆಣ್ಣು ಮಕ್ಕಳಿಗೆ 18 ವರ್ಷ ಹಾಗೂ ಗಂಡು ಮಕ್ಕಳಿಗೆ  21 ವರ್ಷ ತುಂಬುವ ಮೊದಲು ವಿವಾಹ ಮಾಡಿದರೆ ಅದು ಬಾಲ್ಯ ವಿವಾಹ ಎನಿಸಿಕೊಳ್ಳುತ್ತದೆ. ಅಂತಹ ಬಾಲ್ಯವಿವಾಹಗಳನ್ನು ಮಾಡಿದಂತಹ ಪೋಷಕರಿಗೆ, ಅಪ್ರಾಪ್ತ ವಯಸ್ಸಿನವರನ್ನು  ಮದುವೆ ಆಗುವ ವ್ಯಕ್ತಿಗೆ, ಅಂತಹ ಮದುವೆಗೆ ಸಹಕಾರ ನೀಡಿದವರಿಗೆ, ಲಗ್ನ ಪತ್ರಿಕೆ ಮುದ್ರಿಸಿದವರಿಗೆ, ಕಲ್ಯಾಣ ಮಂಟಪ ಬಾಡಿಗೆ ನೀಡಿದವರಿಗೆ, ಪುರೋಹಿತರಿಗೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ಒಂದು ಲಕ್ಷ ದಂಡ ವಿಧಿಸಲು ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಹಾಗೂ ಕರ್ನಾಟಕ ತಿದ್ದುಪಡಿ ಕಾಯ್ದೆ-2016 ರಲ್ಲಿ ಅವಕಾಶವಿರುತ್ತದೆ.  

ಅತಿ ಹೆಚ್ಚು ಬಾಲ್ಯ ವಿವಾಹವಾಗುವ ರಾಜ್ಯದ 2ನೇ ಜಿಲ್ಲೆ ಬಾಗಲಕೋಟೆ
ಬಾಗಲಕೋಟೆ ಜಿಲ್ಲೆಯು  ರಾಜ್ಯದಲ್ಲೇ ಅತಿ ಹೆಚ್ಚು ಬಾಲ್ಯ ವಿವಾಹಗಳು ಜರಗುವ  ಎರಡನೇ ಜಿಲ್ಲೆಯಾಗಿದ್ದು, ಜಿಲ್ಲೆಯಲ್ಲಿ ಜರುಗುವ ಒಟ್ಟು ವಿವಾಹಗಳಲ್ಲಿ ಶೇ 38 ರಷ್ಟು ಬಾಲ್ಯ ವಿವಾಹಗಳು ಜರುಗುತ್ತಿವೆ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷಾ ವರದಿ-05 ರಲ್ಲಿ ವರದಿ ಮಾಡಿರುತ್ತಾರೆ. ಇದು ಅತ್ಯಂತ ಕಳವಳಕಾರಿ ಅಂಶವಾಗಿದ್ದು ಬಾಲ್ಯ ವಿವಾಹವನ್ನು ತಡೆಗಟ್ಟಲು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಜಿಲ್ಲಾಡಳಿತವು ನಿರಂತರವಾಗಿ ಶ್ರಮಿಸುತ್ತಿದ್ದು ಇದಕ್ಕೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದ್ಧಾರೆ. 

ಬಾಲ್ಯ ವಿವಾಹ, ಒಟ್ಟು 21 ದೂರು:
ಇನ್ನು ಪ್ರಸಕ್ತ ವರ್ಷದಲ್ಲಿ ಜನವರಿ 2023 ರ ಅಂತ್ಯದವರೆಗೆ ಜಿಲ್ಲೆಯಲ್ಲಿ ಒಟ್ಟು 125 ಬಾಲ್ಯ ವಿವಾಹ ದೂರುಗಳು ಸ್ವೀಕೃತ ವಾಗಿದ್ದು,  ಜಿಲ್ಲಾಡಳಿತವು ಅಂತಹ ಬಾಲ್ಯ ವಿವಾಹಗಳನ್ನು ತಡೆಗಟ್ಟಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಲಾಗಿದೆ.  ಪ್ರಸಕ್ತ ವರ್ಷದಲ್ಲಿ ಬಾಲ್ಯ ವಿವಾಹ ಮಾಡಿದವರ ಮೇಲೆ, ಮತ್ತು ಅದಕ್ಕೆ ಸಹಕರಿಸಿದವರ ಮೇಲೆ ಒಟ್ಟು 21 ಪೋಲೀಸ ದೂರುಗಳನ್ನು ದಾಖಲಿಸಲಾಗಿರುತ್ತದೆ. ಇನ್ನೂ 04 ಪ್ರಕರಣಗಳಲ್ಲಿ ಪೋಲೀಸ್‌ ದೂರು ದಾಖಲಿಸಲು ಕ್ರಮವಹಿಸಲಾಗುತ್ತಿದೆ.

ಬಾಲ್ಯ ವಿವಾಹವಾದವರನ್ನು ಬಂಧಿಸಿದ್ದಕ್ಕೆ ಅಸ್ಸಾಂ ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

ಮುಂದಿನ ಮೂರು-ನಾಲ್ಕು ತಿಂಗಳುಗಳಲ್ಲಿ ಅಕ್ಷಯ ತೃತೀಯ , ಯುಗಾದಿ ಮತ್ತು ಬೇಸಿಗೆ ಕಾಲದ ಅವಧಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿವಾಹಗಳು ಜರುಗುವ ಸಾಧ್ಯತೆಯಿದ್ದು ಯಾವುದೇ ಬಾಲ್ಯ ವಿವಾಹ  ಹಾಗೂ ಮಕ್ಕಳ ಮೇಲಿನ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಹಾಗೂ ಮಾಹಿತಿ ಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ 1098 ಕ್ಕೆ ಕರೆ ಮಾಡಿ ತಿಳಿಸಬೇಕು. ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತಿ ರಾಜ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಇತರೆ ಇಲಾಖೆಗಳ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು.\

ಬಾಲ್ಯ ವಿವಾಹ ನಿಗ್ರಹಕ್ಕೆ ಪಣತೊಟ್ಟ ಅಸ್ಸಾಂ ಸರ್ಕಾರ: 2 ಸಾವಿರಕ್ಕೂ ಹೆಚ್ಚು ಜನರ ಬಂಧನ, ಹಲವರಿಂದ ಪ್ರತಿಭಟನೆ..!

ಯಾರೇ ವ್ಯಕ್ತಿಗಳು ಬಾಲ್ಯ ವಿವಾಹಕ್ಕೆ ಸಹಕರಿಸುವದು, ಪ್ರೊತ್ಸಾಹಿಸುವುದು, ಅಥವಾ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳ ಮೇಲೆ ಯಾವುದೇ ರೀತಿಯ ಒತ್ತಡ ತರುವದು ಕಂಡುಬಂದಲ್ಲಿ ಅಂತಹವರ ವಿರುದ್ದ ಕೂಡ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios