ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್‌-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಆ.3ರಿಂದ 15ರ ವರೆಗೆ ದ.ಕ. ಜಿಲ್ಲೆಯ ಗಡಿ ಭಾಗಗಳಲ್ಲಿ ಮದ್ಯದಂಗಡಿ ಬಂದ್‌ ಮಾಡುವಂತೆ ಆದೇಶ

ಮಂಗಳೂರು (ಆ.04): ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್‌-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆ.3ರಿಂದ 15ರ ವರೆಗೆ ದ.ಕ. ಜಿಲ್ಲೆಯ ಗಡಿ ಭಾಗಗಳಲ್ಲಿ ಮದ್ಯದಂಗಡಿ ಬಂದ್‌ ಮಾಡುವಂತೆ ದ.ಕ. ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶಿಸಿದ್ದಾರೆ. ಒಟ್ಟು 19 ಗ್ರಾಮಗಳ 29 ಮದ್ಯದಂಗಡಿ ಬಂದ್‌ ಆಗಲಿದೆ.

ಗಡಿಯಲ್ಲಿ ಕಟ್ಟೆಚ್ಚರ : ದ.ಕ.ದಲ್ಲಿ 13 ಗಡಿ ಬಂದ್‌, ಮದ್ಯ, ಬಸ್ ಸ್ಥಗಿತ

ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ. ನಿಷೇಧಾಜ್ಞೆ ಜಾರಿಗೊಂಡಿರುವ ಸಮಯದಲ್ಲಿ ಆ ವ್ಯಾಪ್ತಿಗೊಳಪಟ್ಟವೈನ್‌ಶಾಪ್‌ ಅಥವಾ ಬಾರ್‌ಗಳ ಮುಂದಿನ ಮತ್ತು ಹಿಂದಿನ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು (ಸೀಲು) ಗಳನ್ನು ಹಾಕಿ ಕಡ್ಡಾಯವಾಗಿ ಮುಚ್ಚುವಂತೆ ನೋಡಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona