* ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದ್ದೂರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಜಿಲ್ಲಾಡಳಿತ ಬ್ರೇಕ್* ಜಿಲ್ಲಾ ವಿಪತ್ತು‌ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧಾರ* ದ.ಕ ಜಿಲ್ಲೆಯಲ್ಲಿ ಈ ಬಾರಿ ಕೂಡ ಸರಳ ಗಣೇಶೋತ್ಸವ ಆಚರಣೆಗೆ ನಿರ್ಧಾರ* ಪೆಂಡಾಲ್ ಹಾಕಿ ಸಾರ್ವಜನಿಕ ಪ್ರದೇಶಗಳಲ್ಲಿ ಗಣೇಶೋತ್ಸವ ಆಚರಣೆಗಳಿಲ್ಲ ಅವಕಾಶ

ಮಂಗಳೂರು(ಸೆ. 06) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದ್ದೂರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ದಕ ಜಿಲ್ಲಾ ವಿಪತ್ತು‌ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ದ.ಕ ಜಿಲ್ಲೆಯಲ್ಲಿ ಈ ಬಾರಿ ಕೂಡ ಸರಳ ಗಣೇಶೋತ್ಸವ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಪೆಂಡಾಲ್ ಹಾಕಿ ಸಾರ್ವಜನಿಕ ಪ್ರದೇಶಗಳಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ.

ಐದು ದಿನಗಳ ಬದಲು ಜಿಲ್ಲೆಯಲ್ಲಿ ಮೂರು ದಿನಗಳಿಗೆ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿದೆ. ದೇವಸ್ಥಾನ, ಸಮುದಾಯ ಭವನ ಹಾಗೂ ಮನೆಗಳಲ್ಲಿ ಮಾತ್ರ ಸರಳ ಆಚರಣೆಗೆ ಸೂಚನೆ ನೀಡಲಾಗಿದೆ.

ಗಣೇಶೋತ್ಸವ; ಸರ್ಕಾರದ ನಿಯಮಾವಳಿಗಳು

ರಾಜ್ಯ ಸರ್ಕಾರ ಸಹ ಗಣೇಶ ಹಬ್ಬದ ಸಂಬಂಧ ನಿಯಮಾವಳಿಗಳನ್ನು ಭಾನುವಾರ ತಿಳಿಸಿತ್ತು. ಕೊರೋನಾ ನಿಯಂತ್ರಣದಲ್ಲಿ ಇದ್ದರೂ ನಾಗರಿಕರು ಎಚ್ಚರಿಕೆ ವಹಿಸಬೇಕಾಗಿದ್ದು ಅಗತ್ಯ ಎಂದು ತಿಳಿಸಲಾಗಿದೆ. ಹಾಗಾಗಿ ಗಣೇಶ ಹಬ್ಬದ ಅದ್ದೂರಿತನಕ್ಕೆ ಅನಿವಾರ್ಯವಾಗಿ ಬ್ರೇಕ್ ಹಾಕಲಾಗಿ .