ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಆ.29 ರಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ.
ದಕ್ಷಿಣ ಕನ್ನಡ (ಆ.28): ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ನಾಳೆ (ಆಗಸ್ಟ್ 29, ಗುರುವಾರ) ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿ ಹಾಗೂ ಹಳ್ಳಕೊಳ್ಳಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಇದರಿಂದ ಪ್ರವಾಹದ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ರಜೆಯು ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಅನ್ವಯಿಸುತ್ತದೆ.
ಈ ರಜೆಯು ಮಳೆಯ ಕಾರಣದಿಂದ ಘೋಷಿಸಲಾಗಿರುವುದರಿಂದ, ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯವಾಗಿ ಮನೆಯಿಂದ ಹೊರಹೋಗದಂತೆ ಜಿಲ್ಲಾಡಳಿತ ಸೂಚಿಸಿದೆ. ಪರಿಸ್ಥಿತಿಯನ್ನು ಗಮನಿಸಿ, ಮುಂದಿನ ದಿನಗಳಲ್ಲಿ ರಜೆ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ರಾಜ್ಯದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಅತ್ಯಧಿಕ (>204.5mm) ಮಳೆಯಾಗುವ ಸಾಧ್ಯತೆಯಿದೆ. IMD ಯಿಂದ #ರೆಡ್‌ಅಲರ್ಟ್ ನೀಡಲಾಗಿದೆ. ಉತ್ತರಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಕಲಬುರಗಿ, ಮತ್ತು ಬೀದರ್ ಜಿಲ್ಲೆಗಳಿಗೆ 3 (115.6 - 204.5mm) ಸಾಧ್ಯತೆಯಿದೆ. IMD ಯಿಂದ #ಆರೆಂಜ್‌ಅಲರ್ಟ್ ನೀಡಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸಲು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
