'ದೂರು ನೀಡಲು ಹೋದ ಮಹಿಳೆ ಬಳಿ PSI ಹಿಂಗಾ ನಡೆದುಕೊಳ್ಳೋದು'
ದೂರು ನೀಡಲು ಹೋಗಿದ್ದ ಮಹಿಳೆ ಬಳಿ ಪೊಲೀಸ್ ಅಧಿಕಾರಿ ನಡೆದುಕೊಂಡ ರೀತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಗಿದೆ.
ರಾಮನಗರ (ಡಿ.16): ಹಾರೋಹಳ್ಳಿ ಪೊಲೀಸ್ ಠಾಣೆ ಉಪ ನಿರೀಕ್ಷಕ ಮುರುಳಿ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಇವರ ವಿರುದ್ಧ ಇಲಾಖೆ ಶಿಸ್ತುಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ದಲಿತಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪಿಎಸ್‌ಐ ಮುರುಳಿ ದಲಿತ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಇವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ ನಡೆಸುವಂತೆ ಒತ್ತಾಯಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್ ಅವರಿಗೆ ಮನವಿ ಸಲ್ಲಸಿದರು.
ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಬೋರ್ಡ್ ಮೇಲೆ ಬರೆದು ಆತ್ಮಹತ್ಯೆಗೆ ಶರಣಾದ ಶಿಕ್ಷಕ .
ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ ಸಮತಾ ಸೈನಿಕ ದಳದ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ಜಿ.ಗೋವಿಂದಯ್ಯ, ದಲಿತ ಹಾಗೂ ಜನ ವಿರೋಧಿಯಾಗಿರುವ ಹಾರೋಹಳ್ಳಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಮುರಳಿ ಅವರನ್ನು ಈ ಕೂಡಲೆ ಅಮಾನತು ಮಾಡಬೇಕು. ಇಂತಹ ಅಧಿಕಾರಿಗಳಿಂದಾಗಿಯೇ ಪೊಲೀಸ್ ವ್ಯವಸ್ಥೆ ಮೇಲೆ ಜನತೆಗೆ ನಂಬಿಕೆ ಹೊರಟು ಹೋಗಿದೆ ಎಂದು ಹೇಳಿದರು.
ಡಿ.13ರಂದು ಕನಕಪುರ ತಾಲೂಕಿನ ಗೂಗಾರೇದೊಡ್ಡಿ ಗ್ರಾಮದಲ್ಲಿ ವಾಸವಾಗಿರುವ ಪರಿಶಿಷ್ಟಜಾತಿಗೆ ಸೇರಿದ ಕಾಳಮ್ಮ ಎಂಬ ಮಹಿಳೆ ಠಾಣೆಯಲ್ಲಿ ದೂರು ನೀಡಲು ಹೋದಾಗ, ಠಾಣಾಧಿಕಾರಿ ಮಹಿಳೆ ಎಂಬ ಕನಿಷ್ಠ ಗೌರವ ನೀಡದೆ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಪರಿಶಿಷ್ಟಜಾತಿ ದೌರ್ಜನ್ಯದ ದೂರನ್ನು ಸ್ವೀಕರಿಸದೆ ದೂರುದಾರರ ಎದುರಾಳಿಯ ಜೊತೆ ಶಾಮೀಲಾಗಿ, ಬೆದರಿಸಿ, ಬಲವಂತವಾಗಿ ಬೇರೆ ದೂರು ಬರೆಸಿ ಸಹಿ ಹಾಕಿಸಿ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.