ಗುಡಿಬಂಡೆ ಬಳಿ ಎತ್ತಿನಹೊಳೆ ನೀರು ಸಂಗ್ರಹಕ್ಕೆ ಡ್ಯಾಂ
ಸುಮಾರು 23 ಸಾವಿರ ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳ್ಳುತ್ತಿರುವ ಎತ್ತಿನ ಹೊಳೆ ಕುಡಿಯುವ ನೀರಿನ ಯೋಜನೆ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಈ ಯೋಜನೆಯಡಿ ನೀರು ಶೇಖರಣೆಗಾಗಿ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ಬೃಹತ್ ಡ್ಯಾಮ್ ಅನ್ನು ನಿರ್ಮಿಸಲು ಚಿಂತಿಸಲಾಗಿದೆಂದು ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ಚಿಕ್ಕಬಳ್ಳಾಪುರ : ಸುಮಾರು 23 ಸಾವಿರ ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳ್ಳುತ್ತಿರುವ ಎತ್ತಿನ ಹೊಳೆ ಕುಡಿಯುವ ನೀರಿನ ಯೋಜನೆ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಈ ಯೋಜನೆಯಡಿ ನೀರು ಶೇಖರಣೆಗಾಗಿ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ಬೃಹತ್ ಡ್ಯಾಮ್ ಅನ್ನು ನಿರ್ಮಿಸಲು ಚಿಂತಿಸಲಾಗಿದೆಂದು ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ನಗರದ ಸರ್ ಎಂ ವಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಭಾಷಣ ಮಾಡಿದ ಅವರು, ಬಯಲುಸೀಮೆಯ ನೀರಿನ ಬವಣೆಯನ್ನು ನೀಗಿಸಲು ಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕೆ ಸರ್ಕಾರ ವಿಶೇಷ ಒತ್ತು ಕೊಟ್ಟಿದೆ ಎಂದರು.
ಎಚ್.ಎನ್.ವ್ಯಾಲಿ ಯೋಜನೆ
ಬರ ಪೀಡಿತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಸಲು ಸರ್ಕಾರ ಜಾರಿ ಮಾಡಿರುವ ಎಚ್.ಎನ್.ವ್ಯಾಲಿ ಯೋಜನೆಯು ಜಿಲ್ಲೆಯ ವ್ಯಾಪ್ತಿಯ ಎಲ್ಲಾ ಕೆರೆಗಳನ್ನು ತುಂಬಿಸುವ ನೀರಾವರಿ ಯೋಜನೆಯಾಗಿದೆ. ಈ ಯೋಜನೆಯಿಂದ ಜಿಲ್ಲೆಯ 44 ಕೆರೆಗಳನ್ನು ತುಂಬಿಸಲಾಗಿದೆ. ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನ ನೂತನ ಕಟ್ಟಡ ಕಾಮಗಾರಿ ನಿರ್ಮಾಣ ಕಾರ್ಯವು ಅಂತಿಮ ಹಂತ ತಲುಪಿದ್ದು, ಆರೋಗ್ಯ ಸೌಕರ್ಯಗಳ ಗುಣಮಟ್ಟಹೆಚ್ಚಾಗಲಿದ್ದು, ಜನರಿಗೆ ವರದಾನವಾಗಲಿದೆ. ಚಿಂತಾಮಣಿ ಮತ್ತು ಚಿಕ್ಕಬಳ್ಳಾಪುರದಲ್ಲಿ ಎರಡು ನಮ್ಮ ಕ್ಲಿನಿಕ್ಗಳು ಪ್ರಾರಂಭಗೊಂಡಿರುತ್ತವೆ ತಿಂಗಳಾಂತ್ಯಕ್ಕೆ ಬಾಗೇಪಲ್ಲಿಯಲ್ಲಿ 1 ಕ್ಲಿನಿಕ್ ಆರಂಭಗೊಳ್ಳಲಿದೆಂದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2022-23 ನೇ ಸಾಲಿಗೆ 40 ಲಕ್ಷ ಮಾನವ ದಿನಗಳ ಸೃಜನೆಗೆ ಗುರಿ ನಿಗಧಿಪಡಿಸಲಾಗಿದ್ದು, ಇಲ್ಲಿಯವರೆಗೂ 28.12 ಲಕ್ಷ ಮಾನವ ದಿನಗಳನ್ನು (ಶೇ. 70.30) ಸೃಜನೆ ಮಾಡಲಾಗಿದೆ. ಒಟ್ಟು ರೂ 177.13 ಕೋಟಿ ಗಳನ್ನು ಆರ್ಥಿಕವಾಗಿ ವೆಚ್ಚ ಮಾಡಲಾಗಿದೆ ಎಂದರು.
ಅಂಬೇಡ್ಕರ್‌ಗೆ ಎಲ್ಲರೂ ಕೃಜ್ಞರಾಗಿರಬೇಕು
ಸ್ವಾತಂತ್ರ್ಯ ಪಡೆದ ಸಂದರ್ಭದಲ್ಲಿ ಹರಿದು ಹಂಚಿಹೋಗಿದ್ದ ದೇಶವನ್ನು ಒಂದುಗೂಡಿಸುವುದು, ಅನಕ್ಷರತೆ, ಅನಾರೋಗ್ಯ, ಹಸಿವು ಮತ್ತು ಬಡತನದಲ್ಲಿದ್ದ ದೇಶವನ್ನು ಮುನ್ನಡೆಸಿದ ನಾಯಕರನ್ನು ನಾವು ಗೌರವಿಸಬೇಕು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ನಮ್ಮ ದೇಶಕ್ಕೆ ಅತ್ಯಂತ ಶ್ರೇಷ್ಠ ಸಂವಿಧಾನ ರಚಿಸಿಕೊಟ್ಟು ದೇಶದ ಮುನ್ನಡೆಗೆ ದಾರಿದೀಪ ನೀಡಿರುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಅವರ ತಂಡದ ಸದಸ್ಯರನ್ನು ಕೃತಜ್ಞತಾ ಭಾವದಿಂದ ಸ್ಮರಿಬೇಕೆಂದರು.
ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಡಾ.ವೈ.ಎ.ನಾರಾಯಣಸ್ವಾಮಿ, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರಾದ ಕೆ.ವಿ.ನಾಗರಾಜು, ಬಿ.ಎಂ.ಟಿ.ಸಿ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ…, ನಗರಸಭೆ ಅಧ್ಯಕ್ಷ ಡಿ.ಎಸ್….ಆನಂದ ರೆಡ್ಡಿ ಬಾಬು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಎನ….ಎಂ.ನಾಗರಾಜ…, ಜಿಪಂ ಸಿಇಒ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್….ನಾಗೇಶ…, ಅಪರ ಜಿಲ್ಲಾಧಿಕಾರಿ ಡಾ.ಎನ…. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಹರೀಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ನಗರಾಭಿವೃದ್ಧಿಗೆ ಒತ್ತು
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ನಗರೋತ್ಥಾನ-3 ಯೋಜನೆಯಡಿ 11,950 ಲಕ್ಷಗಳ ಅನುದಾನ ಹಂಚಿಕೆಯಾಗಿದ್ದು, ಈ ಪೈಕಿ 111 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4 ಯೋಜನೆಯಡಿ ರೂ. 14,500 ಲಕ್ಷಗಳ ಅನುದಾನ ಹಂಚಿಕೆಯಾಗಿದ್ದು, ಈ ಪೈಕಿ 218 ಕಾಮಗಾರಿಗಳನ್ನು ಕೈಗೆತ್ತಿಕೊಂಡು 73 ಕಾಮಗಾರಿಗಳನ್ನು ಟೆಂಡರ್ ಕರೆಯಲಾಗಿದೆಯೆಂದು ರಾಜ್ಯ ಪೌರಾಳಿತ ಸಚಿವರು ಆಗಿರುವ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.