ಮೈಸೂರಿಗೆ ದಸರಾ ಗಜಪಡೆ ಆಗಮನ, ಸಾಂಪ್ರಾದಾಯಿಕ ಸ್ವಾಗತ

ವಿಶ್ವ ವಿಖ್ಯಾತ ಮೈಸೂರು ದಸರಾಗೆ ಸಿದ್ಧತೆ ನಡೆಯುತ್ತಿದ್ದು, ಮೊದಲಿಗೆ ಅಂಬಾರಿ ಹೋರುವ ಗಜಪಡೆ ಸಾಂಸ್ಕೃತಿಕ ನಗರಿಗೆ ಆಗಮಿಸಿದೆ. ಆನೆಗಳನ್ನು ಸಾಂಪ್ರಾದಾಯಿಕ ಸ್ವಾಗತಿಸಿದ ಜಿಲ್ಲಾ ಉಸ್ತುವಾರ ಸಚಿವ ಎಸ್.ಟಿ.ಸೋಮಶೇಕರ್ ಮತ್ತು ಇತರರು ದಸರಾ ಉದ್ಘಾಟನೆ ಯಾರಿಂದ ಎಂಬುದನ್ನು ಮುಖ್ಯಮಂತ್ರಿ ಅಂತಿಮಗೊಳಿಸಲಿದ್ದಾರೆ, ಎಂದಿದ್ದಾರೆ. 

Dasara elephants welcomed traditionally by District IN charge minister STS

  ಮೈಸೂರು (ಸೆ.16): ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಯನ್ನು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಅರಮನೆಗೆ ಸ್ವಾಗತಿಸಿದರು.

ಅರಮನೆ ಆವರಣದ ಜಯಮಾರ್ತಾಂಡ ದ್ವಾರದಲ್ಲಿ ಬೆಳಗ್ಗೆ 8.36 ರಿಂದ 9.11ರ ಶುಭ ಲಗ್ನದಲ್ಲಿ ಗಜಪಡೆಗೆ ಸಚಿವ ಸೋಮಶೇಖರ್ ಅವರು ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಡೆಯನ್ನು ಸ್ವಾಗತಿಸಿದರು.

ಮೈಸೂರು ದಸರಾ: ಕಾರ್ಯಕ್ರಮಗಳ ಪಟ್ಟಿ

ಅಂಬಾರಿ ಹೊರಲಿರುವ ಅಭಿಮನ್ಯು ನೇತೃತ್ವದಲ್ಲಿ ಎಂಟು ಆನೆಗಳು ಅರಮನೆ ಪ್ರವೇಶಿಸಿದವು. ಮಂಗಳ ವಾದ್ಯ, ಪೂರ್ಣ ಕುಂಭ ಸ್ವಾಗತದ ಮೂಲಕ ಆನೆಗಳನ್ನು ಬರಮಾಡಿ ಕೊಳ್ಳಲಾಯಿತು.

Dasara elephants welcomed traditionally by District IN charge minister STS

 

ನಂತರ ಮಾತನಾಡಿದ ಸಚಿವರು, ಅ.7ರಂದು ದಸರಾ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ಅ.15ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿದೆ. ಸೆ.23ರವರೆಗೆ ಅಧಿವೇಶನ ಇರುವುದರಿಂದ ದಸರಾ ಉದ್ಘಾಟನೆ ಯಾರಿಂದ ಎಂಬುದನ್ನು ಇನ್ನೂ ತೀರ್ಮಾನಿಸಿಲ್ಲ. ಅಧಿವೇಶನ ಮುಗಿದ ಬಳಿಕ ಪ್ರಮುಖರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ದಸರಾ ಉದ್ಘಾಟನೆಗೆ ಇನ್ನೂ ಯಾರ ಹೆಸರು ಅಂತಿಮಗೊಳಿಸಿಲ್ಲ ಎಂದು ಹೇಳಿದರು.

ದಸರಾ ಉದ್ಘಾಟನೆಗೆ ಗಣ್ಯರ ಆಯ್ಕೆಯನ್ನು ದಸರಾ ಉನ್ನತಾಧಿಕಾರ ಸಮಿತಿಯಲ್ಲಿ ಮುಖ್ಯಮಂತ್ರಿಯವರ ವಿವೇಚನೆಗೆ ಬಿಡಲಾಗಿದೆ. ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಸಂಬಂಧ ಯಾರಾದರೂ ಸಲಹೆ ಕೊಡಬಹುದು. ಅದನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು. ಆಯ್ಕೆ ಮುಖ್ಯಮಂತ್ರಿ ಅವರಿಗೆ ಸೇರಿದ್ದು ಎಂದರು.

"

ದೇವಸ್ಥಾನ ತೆರವು ವಿಚಾರವಾಗಿ ಸುಪ್ರೀಂ ಕೋರ್ಟ್ ಹೊರಡಿಸಿರುವ ಆದೇಶದ ಕುರಿತು ಸಚಿವ ಸಂಪುಟದಲ್ಲಿಟ್ಟು ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ಆದೇಶ ಮಾಡಲಾಗುವುದೆಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ದೇಗುಲ ತೆರವು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ ಎಂದು ಇದೇ ವೇಳೆ ತಿಳಿಸಿದರು.

Latest Videos
Follow Us:
Download App:
  • android
  • ios