ಮೈಸೂರು(ಸೆ.01): ದಸರಾ ಸ್ತಬ್ಧಚಿತ್ರ ಸಂಬಂಧ ಎಲ್ಲ ಜಿಪಂ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ್ದು, ಹಳೆಯದನ್ನೇ ಮರುಕಳಿಸದೇ ಹೊಸ ಸ್ತಬ್ಧಚಿತ್ರಗಳಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಿಳಿಸಿದರು.

ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಮಾತನಾಡಿ, ಸಿದ್ಧಗಂಗಾ ಮಠದ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಕುರಿತು ಸ್ತಬ್ಧಚಿತ್ರ ನಿರ್ಮಿಸಲು ತುಮಕೂರು ಜಿಪಂ ಸದಸ್ಯರು ಹಾಗೂ ಸಿಇಒ ಮನವಿ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಸೇರಿದಂತೆ ವಿವಿಧ ಜನಪ್ರಿಯ ಕಾರ್ಯಕ್ರಮಗಳು, ಚಂದ್ರಯಾನ ಸೇರಿದಂತೆ ವಿವಿಧ ಸ್ತಬ್ಧಚಿತ್ರಗಳನ್ನು ನಿರ್ಮಿಸಲು ಯೋಜಿಸಲಾಗಿದೆ ಎಂದು ಅವರು ವಿವರಿಸಿದರು.

ದಸರಾ ವೆಬ್‌ಸೈಟ್‌ ಕನ್ನಡ, ಇಂಗ್ಲಿಷ್‌ ಸೇರಿ 10 ಭಾಷೆಗಳಲ್ಲಿ ಲಭ್ಯ

ಸಂಸದ ಪ್ರತಾಪ್‌ ಸಿಂಹ, ಶಾಸಕ ಎಸ್‌.ಎ. ರಾಮದಾಸ್‌, ಎಲ್‌. ನಾಗೇಂದ್ರ, ಮೇಯರ್‌ ಪುಷ್ಪಲತಾ ಜಗನ್ನಾಥ್‌, ಉಪಮೇಯರ್‌ ಶಫಿ ಅಹಮದ್‌, ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಎಚ್‌. ಮಂಜುನಾಥ್‌, ರಾಜ್ಯ ಕಾರ್ಯದರ್ಶಿ ಎಂ. ರಾಜೇಂದ್ರ, ಎಚ್‌.ವಿ. ರಾಜೀವ್‌, ಮಾಜಿ ಮೇಯರ್‌ ಸಂದೇಶ್‌ ಸ್ವಾಮಿ, ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌, ನಗರ ಪೊಲೀಸ್‌ ಆಯುಕ್ತ ಕೆ.ಟಿ. ಬಾಲಕೃಷ್ಣ, ಜಿಪಂ ಸಿಇಒ ಕೆ. ಜ್ಯೋತಿ, ನಗರ ಪಾಲಿಕೆ ಆಯುಕ್ತ ಗುರುದತ್‌ ಹೆಗಡೆ, ಎಂಡಿಎ ಆಯುಕ್ತ ಕಾಂತರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಪೂರ್ಣಿಮಾ ಮೊದಲಾದವರು ಇದ್ದರು.