ಚಿಕ್ಕಮಗಳೂರು : ಜಿಲ್ಲೆಯಾದ್ಯಂತ ಪೊಲೀಸ್ ಕಟ್ಟೆಚ್ಚರ, ಪ್ರವಾಸಿಗರಿಗೆ ನಿರ್ಬಂಧ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಪ್ರವಾಸಿಗರಿಗೂ ನಿರ್ಬಂಧ ವಿಧಿಸಲಾಗಿದೆ.
ಚಿಕ್ಕಮಗಳೂರು [ಡಿ.08]: ದತ್ತಜಯಂತಿ ಹಿನ್ನೆಲೆಯಲ್ಲಿ ಡಿ.10ರಿಂದ 12ರವರೆಗೆ ಜಿಲ್ಲಾಧಿಕಾರಿ ಜಿಲ್ಲೆಯಾದ್ಯಂತ ನಿರ್ಬಂಧಿತ ಆದೇಶ ಹೊರಡಿಸಿದ್ದಾರೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮಾತನಾಡಿ, ಜಿಲ್ಲೆಯಾದ್ಯಂತ 35 ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ. 48 ಮಂದಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಸೋಮವಾರ(ಡಿ.9) ಮಧ್ಯರಾತ್ರಿ 12ರಂದ ಡಿ.12ರ ಮಧ್ಯರಾತ್ರಿಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ದರ್ಗಾದಲ್ಲಿ ಪಾದುಕೆಗಳ ದರ್ಶನಕ್ಕೆ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ, ದತ್ತ ಜಯಂತಿಯ ಹಿನ್ನೆಲೆಯಲ್ಲಿ ಡಿ.9ರಂದು ಸಂಜೆ 6ರಿಂದ ಡಿ.13ರ ಬೆಳಗ್ಗೆ 6 ಗಂಟೆಯವರೆಗೆ ಚಿಕ್ಕಮಗಳೂರು ತಾಲೂಕಿನ ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಲ್ಲಿ 5100 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆಂದು ಎಸ್ಪಿ ಹರೀಶ್‌ಪಾಂಡೆ ಹೇಳಿದ್ದಾರೆ.
ರಾಜ್ಯ ಮೀಸಲು ಪೊಲೀಸ್ ಪಡೆಯ 20 ತುಕಡಿಗಳು, ಕ್ಷಿಪ್ರ ಕಾರ್ಯಾಚರಣೆಗೆ 25 ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ, 26 ಚೆಕ್ ಪೋಸ್ಟ್‌ಗಳಲ್ಲೂ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿದ್ದು, 27 ಮಂದಿಯ ಪ್ರತ್ಯೇಕ ಮಹಿಳಾ ಕ್ಷಿಪ್ರ ಕಾರ್ಯಪಡೆ ಸಜ್ಜುಗೊಳಿಸಲಾಗಿದೆ.