ವಿಶ್ವಹಿಂದೂ ಪರಿಷತ್‌ ಹಾಗೂ ಭಜರಂಗದಳ ಹಮ್ಮಿಕೊಂಡಿರುವ ದತ್ತ ಜಯಂತಿ ಅಂಗವಾಗಿ ಭಾನುವಾರ ಚಿಕ್ಕಮಗಳೂರಿನಲ್ಲಿ ಸಂಕೀರ್ತನಾ ಯಾತ್ರೆ ನಡೆಯಲಿದೆ.ಈ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸ್ಥಳೀಯರು ಸೇರಿದಂತೆ ಬೇರೆ ಊರುಗಳಿಂದ ಮಹಿಳೆಯರು ಆಗಮಿಸಲಿದ್ದಾರೆ. 

ಚಿಕ್ಕಮಗಳೂರು (ಡಿ.24): ವಿಶ್ವಹಿಂದೂ ಪರಿಷತ್‌ ಹಾಗೂ ಭಜರಂಗದಳ ಹಮ್ಮಿಕೊಂಡಿರುವ ದತ್ತ ಜಯಂತಿ ಅಂಗವಾಗಿ ಭಾನುವಾರ ಚಿಕ್ಕಮಗಳೂರಿನಲ್ಲಿ ಸಂಕೀರ್ತನಾ ಯಾತ್ರೆ ನಡೆಯಲಿದೆ.ಈ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸ್ಥಳೀಯರು ಸೇರಿದಂತೆ ಬೇರೆ ಊರುಗಳಿಂದ ಮಹಿಳೆಯರು ಆಗಮಿಸಲಿದ್ದಾರೆ. 

ಈಗಾಗಲೇ ನಿಗಧಿಯಾದಂತೆ ಬೆಳಿಗ್ಗೆ 9.30ಕ್ಕೆ ಇಲ್ಲಿನ ಶ್ರೀ ಬೋಳ ರಾಮೇಶ್ವರ ದೇವಾಲಯದಿಂದ ಸಂಕೀರ್ತನಾ ಯಾತ್ರೆ ಹೊರಡಲಿದ್ದು, ಈ ಯಾತ್ರೆ ಕೆ.ಎಂ. ರಸ್ತೆ, ರತ್ನಗಿರಿ ರಸ್ತೆಯ ಮೂಲಕ ಶ್ರೀ ಕಾಮಧೇನು ಗಣಪತಿ ದೇವಾಲಯಕ್ಕೆ ತಲುಪಿದ ಬಳಿಕ ಅಲ್ಲಿಂದ ವಾಹನಗಳಲ್ಲಿ ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಪಡೆಯಲಿದ್ದಾರೆ.

ಈ ಬಾರಿಯೂ ಚಿಕ್ಕಮಗಳೂರಿನಿಂದಲೇ ಲೋಕಸಭಾ ಚುನಾವಣೆಗೆ ಸ್ಪರ್ಧೆ: ಶೋಭಾ ಕರಂದ್ಲಾಜೆ

ಸೋಮವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಶೋಭಾಯಾತ್ರೆ, ನಂತರದ ಇಲ್ಲಿನ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಡಿ. 26 ರಂದು ದತ್ತಪೀಠದಲ್ಲಿ ದತ್ತ ಜಯಂತಿಗೆ ತೆರೆ ಬೀಳಲಿದೆ. 

ಶೃಂಗಾರ: ಸಂಕೀರ್ತನಾ ಯಾತ್ರೆ ಹಾಗೂ ಶೋಭಾಯಾತ್ರೆಗಳು ಸಂಚರಿಸುವ ಮಾರ್ಗಗಳು ಕೇಸರಿಮಯವಾಗಿವೆ. ಇಲ್ಲಿನ ಬಸವನಹಳ್ಳಿ ಮುಖ್ಯ ರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ. ರಸ್ತೆ, ಆಜಾದ್‌ ಪಾರ್ಕ್‌ ವೃತ್ತ, ಕೆ.ಎಂ. ರಸ್ತೆ, ರತ್ನಗಿರಿ ರಸ್ತೆ ಬ್ಯಾನರ್‌, ಬಂಟಿಂಗ್ಸ್‌ಗಳಿಂದ ರಾರಾಜಿಸುತ್ತಿವೆ. ಎರಡು ದಿನ ಚಿಕ್ಕಮಗಳೂರು ನಗರದಲ್ಲಿ ಉತ್ಸವ ಇರುವುದರಿಂದ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿ ಮಧ್ಯಾಹ್ನದ ನಂತರ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಅದರಲ್ಲೂ ಧಾರ್ಮಿಕ ಹಾಗೂ ಸೂಕ್ಷ್ಮ ಸ್ಥಳ ಗಳಲ್ಲಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಮಾಡಿಕೊಳ್ಳಲಾಗಿದೆ. ಇದರ ಜತೆಗೆ ಸಿ.ಸಿ. ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ದತ್ತಜಯಂತಿ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಗಾಗಿ ಜಿಲ್ಲೆಯಾದ್ಯಂತ 4 ಸಾವಿರಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಚಿಕ್ಕಮಗಳೂರಿಗೆ ಶನಿವಾರವೇ ಕರ್ತವ್ಯಕ್ಕೆ ಪೊಲೀಸರು ಆಗಮಿಸಿದ್ದು, ಸಂಜೆ ವೇಳೆಗೆ ಇಲ್ಲಿನ ಡಿಎಆರ್‌ ಗ್ರೌಂಡ್‌ನಿಂದ ಸಿಬ್ಬಂದಿಯ ರೂಟ್‌ ಮಾರ್ಚ್‌ ಹೊರಟಿತು. ಬಸವನಹಳ್ಳಿ ಮುಖ್ಯ ರಸ್ತೆ, ಎಂ.ಜಿ. ರಸ್ತೆ, ಕೆ.ಎಂ. ರಸ್ತೆ, ರತ್ನಗಿರಿ ರಸ್ತೆಯಲ್ಲಿ ಸಂಚರಿಸಿತು. ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ, ಪಶ್ಚಿಮ ವಲಯದ ಐಜಿಪಿ ಡಾ. ಚಂದ್ರಗುಪ್ತ, ಚಿಕ್ಕಮಗಳೂರಿನಲ್ಲಿ ಮೊಕ್ಕಾಂ ಹೂಡಿದ್ದಾರೆ. 

ಚಿಕ್ಕಮಗಳೂರಲ್ಲಿ ದತ್ತ ಜಯಂತಿ: ನೂರಾರು ಮಾಲಾಧಾರಿಗಳಿಂದ ಬೈಕ್ ಜಾಥಾ

 ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಶನಿವಾರ ದತ್ತಪೀಠಕ್ಕೆ ಭೇಟಿ ನೀಡಿದ್ದರು.ನೋ ಪಾರ್ಕಿಂಗ್‌: ಭಾನುವಾರ ಸಂಕೀರ್ತನಾ ಯಾತ್ರೆ ಸಂಚರಿಸುವ ಮಾರ್ಗದಲ್ಲಿ ವಾಹನಗಳ ಸಂಚಾರ ಹಾಗೂ ನಿಲುಗಡೆ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೆಎಸ್‌ಆರ್‌ಟಿಸಿ ಡಿಪೋದಿಂದ ಟೌನ್‌ ಕ್ಯಾಂಟಿನ್‌ವರೆಗೆ ವಾಹನಗಳ ನಿಲುಗಡೆ ಹಾಗೂ ಸಂಚಾರ ನಿಷೇಧಿಸಲಾಗಿದೆ. 

ಮೂಡಿಗೆರೆಯಿಂದ ಕಡೂರು ಕಡೆ ಸಂಚರಿಸುವ ವಾಹನಗಳು ಆಜಾದ್‌ ಪಾರ್ಕ್‌ ಮೂಲಕ ಬೈಪಾಸ್‌ ರಸ್ತೆಯಲ್ಲಿ ಸಂಚರಿಸಬೇಕು.23 ಕೆಸಿಕೆಎಂ 6ದತ್ತಜಯಂತಿ ಹಿನ್ನಲೆಯಲ್ಲಿ ಬಂದೋಬಸ್ತಿಗೆ ಆಗಮಿಸಿರುವ ಪೊಲೀಸ್‌ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಶನಿವಾರ ಚಿಕ್ಕಮಗಳೂರಿನಲ್ಲಿ ರೂಟ್‌ ಮಾರ್ಚ್‌ ನಡೆಸಿದರು.