Datta Jayanti: ಡಿ.8ರಂದು ದತ್ತಜಯಂತಿ: ಬಜರಂಗದಳ, ವಿಹಿಂಪ ನೇತೃತ್ವ

  • ಡಿ.8ರಂದು ದತ್ತಜಯಂತಿ: ಬಜರಂಗದಳ, ವಿಹಿಂಪ ನೇತೃತ್ವ
  • 5 ಸಾವಿರ ಭಕ್ತರು ಸೇರುವ ನಿರೀಕ್ಷೆ: ಸಿದ್ಧತಾ ಸಭೆಯಲ್ಲಿ ಡಿಸಿ ಮಾಹಿತಿ
  • 28ರಂದು ಮಾಲಾಧಾರಣೆ, ಡಿ.6ರಂದು ಅನಸೂಯ ಜಯಂತಿ
Datta Jayanti on December 8 VHP Bajarangadala chikkamagaluru rav

ಚಿಕ್ಕಮಗಳೂರು (ನ.19) : ವಿಶ್ವಹಿಂದೂ ಪರಿಷತ್‌ ಹಾಗೂ ಬಜರಂಗದಳದ ನೇತೃತ್ವದಲ್ಲಿ ಬರುವ ಡಿಸೆಂಬರ್‌ 8ರಂದು ದತ್ತಜಯಂತಿ ಕಾರ್ಯಕ್ರಮ ನಡೆಯಲಿದೆ. ನ.28ರಂದು ಮಾಲಾಧಾರಣೆ, ಡಿ.6ರಂದು ಅನಸೂಯ ಜಯಂತಿ, ಡಿ.7ರಂದು ಚಿಕ್ಕಮಗಳೂರಿನಲ್ಲಿ ಶೋಭಾಯಾತ್ರೆ, ಡಿ.8ರಂದು ದತ್ತಜಯಂತಿ ನಡೆಯಲಿದೆ.

ಈ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸಿ ರಮೇಶ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು. ದತ್ತ ಜಯಂತಿ ಆಚರಣೆಗೆ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ಸುಮಾರು 5 ಸಾವಿರ ಜನ ಸೇರುವ ನಿರೀಕ್ಷೆಯಿದೆ ಎಂದು ಡಿಸಿ ತಿಳಿಸಿದರು.

ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿ ನೇಮಕ: ರಾಜ್ಯ ಸರ್ಕಾರದ ಮಹತ್ವದ ಆದೇಶ...

ದತ್ತಜಯಂತಿ ಆಚರಣೆ ಸಂದರ್ಭದಲ್ಲಿ ನಡೆಯುವ ವಿವಿಧ ಕಾರ್ಯಕ್ರಮ, ಮೆರವಣಿಗೆಯಲ್ಲಿ ಎಷ್ಟುಜನರು ಹಾಗೂ ಯಾವ ಮುಖಂಡರು ಭಾಗವಹಿಸುತ್ತಾರೆ, ಯಾವ ಮಾರ್ಗಗಳಲ್ಲಿ ಆಗಮಿಸುತ್ತಾರೆ ಮತ್ತು ಎಷ್ಟುವಾಹನಗಳಲ್ಲಿ ಬರುತ್ತಾರೆ ಎನ್ನುವ ಮಾಹಿತಿಯನ್ನು ಒದಗಿಸಬೇಕು ಎಂದು ಸಂಘಟಕರಿಗೆ ಸೂಚಿಸಿದರು.

ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸೂಕ್ತ ಪೊಲೀಸ್‌ ಭದ್ರತೆ ಒದಗಿಸಲಾಗುತ್ತದೆ. ಕುಡಿಯುವ ನೀರು, ಆರೋಗ್ಯಕ್ಕೆ ಸಂಬಂಧಿಸಿದಂತೆ ವ್ಯವಸ್ಥೆ, ಪಾರ್ಕಿಂಗ್‌ ಮತ್ತು ಸ್ವಚ್ಛತಾ ವ್ಯವಸ್ಥೆ ಮಾಡಲಾಗುತ್ತದೆ. ಭಕ್ತರಿಗೆ ಅನುಕೂಲವಾಗುವಂತೆ ಸೀತಾಳಯ್ಯನ ಗಿರಿ-ಮುಳ್ಳಯ್ಯನ ಗಿರಿ, ಗಾಳಿಕೆರೆ ಹಾಗೂ ಮಾಣಿಕ್ಯಧಾರಕ್ಕೆ ತೆರಳುವ ರಸ್ತೆಗಳನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗುತ್ತದೆ. ಭಕ್ತರ ಅಗತ್ಯಕ್ಕೆ ತಕ್ಕಂತೆ ಬಸ್‌ ಸೌಕರ್ಯ ಹಾಗೂ ಖಾಸಗಿ ಮಿನಿ ಬಸ್‌ ಸೌಕರ್ಯ ಕಲ್ಪಿಸುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಪೊಲೀಸ್‌ ಇಲಾಖೆ, ಬಂದೋಬಸ್‌್ತ ಹಾಗೂ ವಿಐಪಿ ಮತ್ತು ಸ್ವರ್ಯ ಸೇವಕರಿಗೆ ಪಾಸ್‌ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು. ತಾತ್ಕಾಲಿಕ ಆಸ್ಪತ್ರೆ ತೆರೆದು ಅಗತ್ಯ ಔಷಧಿ, ಆಂಬ್ಯುಲೆನ್ಸ್‌ಗಳೊಂದಿಗೆ ವೈದ್ಯಾಧಿಕಾರಿಗಳನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ ಅವರು, ನಿರಂತರ ವಿದ್ಯುತ್‌ ಪೂರೈಕೆ ಮಾಡಲು ಮೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.

Datta Peetha Row: ವಿವಾದ ಬಗೆಹರಿಸದ ಬಿಜೆಪಿ ಸರ್ಕಾರ: ಪ್ರಮೋದ್‌ ಮುತಾಲಿಕ್‌ ಆಕ್ರೋಶ

ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಅಪರ ಜಿಲ್ಲಾಧಿಕಾರಿ ಬಿ.ಆರ್‌.ರೂಪಾ, ಉಪವಿಭಾಗಾಧಿಕಾರಿ ರಾಜೇಶ್‌, ಚಿಕ್ಕಮಗಳೂರು ತಹಸೀಲ್ದಾರ್‌ ವಿನಾಯಕ ಸಾಗರ್‌, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್‌, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಧಾರ್ಮಿಕ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios