ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ ಕಾಟಾಚಾರದ ಮಳೆ ಹಾನಿ ವಿಸಿಟ್!

ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಕೆಲದಿನಗಳಿಂದ ಸುರಿದ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.   ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್  ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Davangere District incharge Minister byrathi basavaraj visit Rain affected area gow

ವರದಿ : ವರದರಾಜ್, ಏಷ್ಯಾನೆಟ್ ಸುವರ್ಣನ್ಯೂಸ್ 

ದಾವಣಗೆರೆ (ಆ.9): ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಕೆಲದಿನಗಳಿಂದ ಸುರಿದ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮಳೆಹಾನಿ ಪ್ರದೇಶಕ್ಕೆ ಇಂದು ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹಾಗೂ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಹಾನಿ ಪರಿಶೀಲಿಸಿದರು.  ದಾವಣಗೆರೆ ತಾಲ್ಲೂಕ್ ಹದಡಿ ಕೆರೆ ಏರಿ ದುರಸ್ತಿ ಪ್ರದೇಶಕ್ಕೆ ಭೇಟಿ ನೀಡಿದ ಉಸ್ತುವಾರಿ ಸಚಿವರು ಹದಡಿ ಕೆರೆ ಏರಿಯನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ಶಿವಾನಂದ ಕಪಾಸಿ , ಇಂಜಿನಿಯರ್ ಗಳು ಗ್ರಾಮಸ್ಥರಿಂದ ಮಾಹಿತಿ ಪಡೆದು ಹಣ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಹದಡಿ ಕೆರೆ ಕುಸಿಯುತ್ತಿದೆ ಎಂದು  ಕಳೆದ ಒಂದು ವಾರದ ಹಿಂದೆ  ಸುವರ್ಣನ್ಯೂಸ್ ವರದಿ ಪ್ರಸಾರ ಮಾಡಿತ್ತು. ಕಳೆದ ಒಂದು ವಾರದಲ್ಲಿ ಐದರಿಂದ 10 ಅಡಿ ಕೆರೆ ಏರಿ ಕುಸಿದು ರಸ್ತೆ ಆಪಾಯಕಾರಿಯಾಗಿದ್ದು ವಾಹನ ಸವಾರರೇ ಎಚ್ಚರ ಎಂದು ವರದಿಯಲ್ಲಿ ತಿಳಿಸಲಾಗಿತ್ತು. ವರದಿಗೆ ಸ್ಪಂಧಿಸಿದ  ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್  ಕೆರೆ ಏರಿ ಕುಸಿತ ಪರಿಶೀಲಿಸಿ 1.70 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು. ಕೆರೆ ದುರಸ್ತಿಗೆ ಪ್ರಾಥಮಿಕವಾಗಿ ಹಣ ಬಿಡುಗಡೆ ನಂತರ  ಇಂಜಿನಿಯರ್ ಗಳಿಂದ ಡಿಪಿಆರ್ ಮಾಡಿಸಿ ಹೆಚ್ಚುವರಿ ಹಣ ನೀಡುವುದಾಗಿ ಭರವಸೆ ನೀಡಿದರು. ಸುವರ್ಣನ್ಯೂಸ್ ವರದಿಗೆ ಸ್ಪಂಧಿಸಿದ ಸಚಿವರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಆದಷ್ಟು ಬೇಗ ಕೆರೆಗೆ ತಡೆಗೋಡೆ ನಿರ್ಮಾಣ ಮಾಡಿ ಎಂದು ಮನವಿ ಮಾಡಿದ್ದಾರೆ 

ದಾವಣಗೆರೆ ಜಿಲ್ಲೆಯಲ್ಲಿ ಮಳೆ ಹಾನಿಗೆ  ಸರ್ಕಾರದಿಂದ  15 ಕೋಟಿ ಹಣ ಬಿಡುಗಡೆ
ಒಟ್ಟು ರಾಜ್ಯಕ್ಕೆ 200 ಕೋಟಿ ಹಣ  ಬಿಡುಗಡೆಯಾಗಿದ್ದು ಅದರಲ್ಲಿ ದಾವಣಗೆರೆಗೆ 15 ಕೋಟಿ , ಚಿಕ್ಕಮಗಳೂರಿಗೆ 10 ಕೋಟಿ ಹಣ ಬಿಡುಗಡೆಯಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ತಿಳಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಟಾಚಾರದ ಸಭೆ ನಡೆಸಿ ಅರಾತುರಿಯಲ್ಲೇ ಬೆಂಗಳೂರಿಗೆ ಹೊರಟರು. ಜಿಲ್ಲೆಯಲ್ಲಿ 16.0 ಮಿ.ಮೀ. ಸರಾಸರಿ ಮಳೆಯಾಗಿದೆ.ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 7 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 2.10 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 2 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.60 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಹರಿಯುತ್ತಿದ್ದ ನೀರಲ್ಲಿ ಕಾರು ದಾಟಿಸುವ ಹುಚ್ಚಾಟ: ಕೊಚ್ಚಿ ಹೋಗುತ್ತಿದ್ದವರ ರಕ್ಷಣೆ

ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 5 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ. 20.00 ಲಕ್ಷ, 4 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ. 3.00 ಲಕ್ಷ, ಒಟ್ಟು ರೂ. 23.00 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ. 10.00 ಲಕ್ಷ, 3 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ. 6.00 ಲಕ್ಷ ಮತ್ತು 1 ದನದ ಕೊಟ್ಟಿಗೆ ಹಾನಿಯಾಗಿದ್ದು, ರೂ. 0.30 ಲಕ್ಷ, ಒಟ್ಟು ರೂ.16.30 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

Chitradurga; ಜಿಟಿ ಜಿಟಿ ಮಳೆಗೆ ಅಡಿಕೆ, ಈರುಳ್ಳಿ ಬೆಳೆ ಸಂಪೂರ್ಣ ನಾಶ

ತರಾತುರಿಯಲ್ಲೇ ಬೆಂಗಳೂರಿಗೆ ಹೊರಟ ಜಿಲ್ಲಾ ಉಸ್ತುವಾರಿ ಸಚಿವರು
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಯ ವಿವಿಧೆಡೆ ಮಳೆ ಹಾನಿ ಪ್ರದೇಶಕ್ಕೆ ಕಂದಾಯ ಸಚಿವರು‌ ಭೇಟಿ ನೀಡುವ ಕಾರ್ಯಕ್ರಮವಿತ್ತು. ಇಂದು ಮುಂಜಾನೆ ಕಂದಾಯ ಸಚಿವರ ಕಾರ್ಯಕ್ರಮ ದಿಡೀರ್ ರದ್ದಾಗಿದ್ದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು ಕಾಟಾಚಾರಕ್ಕೆ ಒಂದು ಕಡೆ ಮಳೆ ಹಾನಿ ಪರಿಶೀಲಿಸಿ ಜಿಲ್ಲಾಧಿಕಾರಿ ಸಬಾಂಗಣದಲ್ಲಿ ಅರ್ಧ ಗಂಟೆ ಸಭೆ ನಡೆಸಿ ಬೆಂಗಳೂರಿಗೆ ತೆರಳಿದ್ದಾರೆ.

Latest Videos
Follow Us:
Download App:
  • android
  • ios