Asianet Suvarna News Asianet Suvarna News

ದಕ್ಷಿಣ ಕನ್ನಡದಲ್ಲಿ ಮದುವೆ, ಮುಂಜಿ ಮಾಡುತ್ತಿರುವವರ ಗಮನಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದುವೆ ಸಮಾರಂಭ ನಡೆಸುವವರು ಗಮನಿಸಿ. ಮದುವೆ ಮಾಡಲು ಅವಕಾಶವಿದೆ. ಆದರೆ ಮದುವೆ ಮಾಡಲು ಕಂಡೀಶನ್ಸ್ ಇದೆ. ಏನದು ಕಂಡೀಶನ್?

DC Dr KV Rajendrakumar releases Covid19 guidelines for Dakshina Kannada district snr
Author
Bengaluru, First Published Apr 21, 2021, 3:23 PM IST

 ಮಂಗಳೂರು (ಏ.21):  ರಾಜ್ಯ ಸರ್ಕಾರದಿಂದ ಹೊಸ ಕೋವಿಡ್ ಗೈಡ್ ಲೈನ್ಸ್ ಪ್ರಕಟ ಹಿನ್ನೆಲೆ ವೀಕೆಂಡ್ ಕರ್ಪ್ಯೂ ಸಮಯದಲ್ಲಿ ನಿಗದಿಯಾಗಿದ್ದ ಮದುವೆ ನಡೆಸಲು ಅನುಮತಿ ಇದೆ. ಆದರೆ ಕೇವಲ 50 ಜನರು ಮಾತ್ರ ಮದುವೆಯಲ್ಲಿ ಭಾಗವಹಿಸಲು ಅವಕಾಶವಿದೆ ಎಂದು  ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ಕಮಿಷನರ್ ಶಶಿಕುಮಾರ್ ಹೇಳಿದರು. 

ಮಂಗಳೂರಿನಲ್ಲಿಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ಕಮಿಷನರ್ ಶಶಿಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ವಿವಾಹ ಸಮಾರಂಭದ ನಡೆಸಲು ಅನುಮತಿ ಇರುವ ಬಗ್ಗೆ ತಿಳಿಸಿದರು.  

ಇದಕ್ಕಾಗಿ ಮದುವೆ ಮನೆಯವರು 50 ಜನರ ಪಟ್ಟಿ ತಯಾರಿಸಬೇಕು. ಆ ಪಟ್ಟಿಯನ್ನು ಸ್ಥಳೀಯಾಡಳಿತಕ್ಕೆ ತೋರಿಸಿ ಅಪ್ರೂವ್ ಮಾಡಿಸಿಕೊಳ್ಳಬೇಕು .  ಆ ಬಳಿಕ ಆ 50 ಜನರ ಅನುಮತಿ ಪಡೆದ ಪತ್ರ ಮತ್ತು ಮದುವೆ ಆಮಂತ್ರಣ ಪತ್ರಿಕೆ ಹಾಗೂ ಮದುವೆಗೆ ಹೋಗುವವರ ಐಡಿ ಕಾರ್ಡ್ ಕಡ್ಡಾಯವಾಗಿರಬೇಕು.  ಈ ಮೂರು ದಾಖಲೆಗಳನ್ನು ವಾಟ್ಸ್ ಅಪ್ ನಲ್ಲಿ ಪೊಲೀಸರಿಗೆ ತೋರಿಸಿ ಪ್ರಯಾಣಿಸಬಹುದು ಎಂದು ಅಧಿಕಾರಿಗಳು ತಿಳಿಸಿದರು. 

ಕೊರೋನಾ ಭೀತಿ ನಡುವೆ ಗುಡ್‌ ನ್ಯೂಸ್: ICMR ಅಧ್ಯಯನದಲ್ಲಿ ಅಚ್ಚರಿಯ ಮಾಹಿತಿ! ..

 ಆದರೆ ಮದುವೆ ಆಮಂತ್ರಣ ಪತ್ರಿಕೆಯ ನೈಜ ಪ್ರತಿ ಪ್ರಯಾಣದ ವೇಳೆ ಕೈಯ್ಯಲ್ಲಿರಲೇಬೇಕು. ಮದುವೆಗೆ ಗೆಸ್ಟ್ ಲಿಸ್ಟ್ ನಲ್ಲಿರುವವರ ಐಡಿ ತೋರಿಸಿದರಷ್ಟೇ ಪ್ರಯಾಣಕ್ಕೆ ಅವಕಾಶವಿದೆ.   ಇನ್ನು ಮದುವೆಗೆ ಹೋಗುವ ಕಾರಿನಲ್ಲಿ ಏಳೆಂಟು ಜನರನ್ನು ತುಂಬಿದರೆ ಪ್ರಯಾಣಿಸಲು ಅವಕಾಶ ಇಲ್ಲ ಎಂದು ಈ ವೇಳೆ ಮಾಹಿತಿ ನೀಡಿದರು. 

ದೇವಸ್ಥಾನದಲ್ಲಿ ಮದುವೆ ನಡೆಯುವುದಾದರೆ 50 ಜನರನ್ನು ಸೇರಿಸಿ ಮಾಡಬಹುದು.  ಈಗಾಗಲೇ ಮಾಡಿದ ನಿಯಮದಂತೆ ದೇವಸ್ಥಾನಗಳಲ್ಲಿ ‌ಮದುವೆಗೆ ಅನುಮತಿ ಇದೆ.  ಮದುವೆ ಫೋಟೋಗ್ರಾಫರ್ಸ್, ಅರ್ಚಕರು ಎಲ್ಲರೂ 50 ಜನರ ಲಿಸ್ಟ್ ನಲ್ಲೇ ಬರುತ್ತಾರೆ.  ದೇವಸ್ಥಾನದ ಧಾರ್ಮಿಕ ಕಾರ್ಯಗಳನ್ನು ಅರ್ಚಕರು ಸೇರಿಕೊಂಡು ಮಾಡಬೇಕು.  ಆದರೆ ಯಾವುದೇ ಸಾರ್ವಜನಿಕರು ಈ ಆಚರಣೆಯಲ್ಲಿ ಭಾಗಿಯಾಗಲು ನಿಷೇಧವಿದೆ. ಇಂದಿನಿಂದ ಈ ನಿಯಮ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಸುದ್ದಿಗೋಷ್ಠಿಯಲ್ಲಿ  ತಿಳಿಸಿದರು. 

ಕೊರೋನ ಅಟ್ಟಹಾಸ : ಕೇರಳ ಗಡಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮ ...
 
ಅವಶ್ಯಕತೆ ಪಾಸ್ ಮತ್ತು ಐಡಿ ಕಾರ್ಡ್ ಬಳಸಿ ಕುಟುಂಬದ ಜೊತೆ ಸಂಚರಿಸಲು ಅವಕಾಶವಿಲ್ಲ.  ಯಾರ ಹೆಸರಿನಲ್ಲಿ ಪಾಸ್ ಮತ್ತು ಐಡಿ ಕಾರ್ಡ್ ಇದೆ ಅವರಿಗಷ್ಟೇ ಸಂಚಾರಕ್ಕೆ ಅವಕಾಶ.  ವೀಕೆಂಡ್ ‌ಕರ್ಫ್ಯೂ ಸಮಯದಲ್ಲಿ ಬೆಳಿಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಇದೆ ಅದರೆ ಈ ವಸ್ತು ಖರೀದಿ ಅವರ ಮನೆಯ ಅಕ್ಕಪಕ್ಕದಲ್ಲೇ ಖರೀದಿಸಬೇಕು.  ವಾಹನ ಬಳಸಿ ಅಗತ್ಯ ವಸ್ತು ಖರೀದಿಗೆ ಹೋಗೋದಾದರೂ ಅದಕ್ಕೆ ಸೂಕ್ತ ಕಾರಣ ಬೇಕು.  ಅದನ್ನು ದುರುಪಯೋಗ ಪಡಿಸಿಕೊಂಡರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಾಹಿತಿ ನೀಡಿದರು. 

Follow Us:
Download App:
  • android
  • ios