Asianet Suvarna News Asianet Suvarna News

ರೈತರಿಗೆ ಗುಡ್ ನ್ಯೂಸ್ : ರಾಗಿ, ಭತ್ತಕ್ಕೆ ಬಂಪರ್ ಬೆಂಬಲ ಬೆಲೆ

ರೈತರಿಗೆ ಇಲ್ಲಿಗೆ ಗುಡ್ ನ್ಯೂಸ್,  ರಾಗಿ ಹಾಗೂ ಭತ್ತದ ಮೇಲಿನ ಬೆಂಬಲ ಬೆಲೆ ಏರಿಕೆಯ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿ ಇಟ್ಟಿದ್ದು ಈ ಬಗ್ಗೆ ಸಿದ್ಧತೆಗೆ ಸೂಚನೆ ನೀಡಿದ್ದಾರೆ.

DC Orders to Supporting Price Hike For Paddy And Millet
Author
Bengaluru, First Published Dec 9, 2019, 10:22 AM IST

ರಾಮನಗರ [ಡಿ.09]:  ಜಿಲ್ಲೆಯಲ್ಲಿ ರೈತರು ಬೆಳೆದಿರುವ ರಾಗಿ ಮತ್ತು ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ತೆರೆದು ಖರೀದಿ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಎಸ್‌. ಅರ್ಚನಾ ಅಧಿಕಾರಿಗಳಿಗೆ ತಿಳಿಸಿದರು.

ನಗ​ರ​ದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್‌ ಸಭೆಯಲ್ಲಿ ಮಾತ​ನಾ​ಡಿದ ಅವರು, ರೈತರಿಗೆ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಅವರು ಬೆಳೆದ ಬೆಳೆಗಳನ್ನು ನೇರವಾಗಿ ಕನಿಷ್ಠ ಬೆಂಬಲ ಯೋಜನೆಯಡಿ ಖರೀದಿಸಲಾಗುವುದು ಎಂದರು.

ಕೇಂದ್ರ ಸರ್ಕಾರ ಒಂದು ಕ್ವಿಂಟಾಲ್‌ ಸಾಮಾನ್ಯ ಭತ್ತಕ್ಕೆ ರು. 1815, ಗ್ರೇಡ್‌ ಎ ಭತ್ತಕ್ಕೆ ರು. 1835, ಹಾಗೂ ರಾಗಿಗೆ ರು. 3150 ನಿಗದಿ ಮಾಡಿದೆ. ಖರೀದಿ ಕೇಂದ್ರಗಳನ್ನು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವುದು. ತಾಲೂಕಿನ ತಹ​ಸೀ​ಲ್ದಾರ್‌ ನೋಡಲ್‌ ಅಧಿಕಾರಿಗಳಿಗೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಿದರು.

ಖರೀದಿ ಕೇಂದ್ರಗಳನ್ನು ಪ್ರಾರಂಭಿಸುವ ಮೊದಲು ರೈತರಿಂದ ಅವಶ್ಯಕವಿರುವ ಬ್ಯಾಂಕ್‌ ಖಾತೆಯ ವಿವರ, ಆರ್‌.ಟಿ.ಸಿ, ಬೆಳೆ ದೃಢೀಕರಣ ಪತ್ರ, ಮೊಬೈಲ್‌ ಸಂಖ್ಯೆ ಹಾಗೂ ಇನ್ನಿತರೆ ಅವಶ್ಯಕ ದಾಖಲೆಗಳನ್ನು ಸಂಬಂಧಿ​ಸಿದ ಅಧಿಕಾರಿಗಳು ಸಂಗ್ರಹಿಸಿಕೊಳ್ಳಿ. ರೈತರು ತಮ್ಮ ಸರಿಯಾದ ಮೊಬೈಲ್‌ ಸಂಖ್ಯೆಯನ್ನು ನೀಡಿ. ಇದರಿಂದ ಅಧಿಕಾರಿಗಳು ತಮ್ಮನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು. ರೈತರಿಂದ ಹಣವನ್ನು ಸಹ ಆರ್‌ಟಿಜಿಎಸ್‌ ಮೂಲಕ ಪಾವತಿಸಲಾಗುವುದು ಎಂದರು.

ಬೆಂಗಳೂರು, ಶಿವಮೊಗ್ಗದಲ್ಲಿ ಕಂಬಳ ನಡೆಸಲು ಚಿಂತನೆ: ಡಿಸಿ​ಎಂ...

ಆಹಾರ ಇಲಾಖೆ ಉಪನಿರ್ದೇಶಕ ಕೃಷ್ಣಕುಮಾರ್‌ ಮಾತನಾಡಿ, ಕಳೆದ ಸಾಲಿನಲ್ಲಿ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ 5192 ಕ್ವಿಂಟಲ್‌ ಭತ್ತ ಹಾಗೂ 1,20,000 ಕ್ವಿಂಟಾಲ್‌ ರಾಗಿಯನ್ನು ಖರೀದಿಸಲಾಗಿದೆ. ಈ ಬಾರಿ ರೈತರನ್ನು ಖರೀದಿ ಕೇಂದ್ರದ ಮುಂದೆ ಕಾಯಿಸದೆ ಖರೀದಿಸಲು ಕೂಪನ್‌ ವ್ಯವಸ್ಥೆ ಮಾಡಲು ಚಿಂತಿಸಲಾಗುತ್ತಿದೆ. ರೈತರಿಂದ ಭತ್ತ ಹಾಗೂ ರಾಗಿಯ ಸ್ಯಾಂಪಲ್‌ ಪಡೆದು ಅದರ ಗುಣಮಟ್ಟವನ್ನು ಪರೀಕ್ಷಿಸಿ ನಂತರ ಖರೀದಿಸಲಾಗುವುದು ಎಂದರು.

Follow Us:
Download App:
  • android
  • ios