ಚಾರ್ಮಾಡಿ ಘಾಟ್‌ನಲ್ಲಿ ಸಂಚರಿಸುವವರು ಇಲ್ಲೊಮ್ಮೆ ಗಮನಿಸಿ
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಮಾಡುವವರು ಇಲ್ಲಿ ಒಮ್ಮೆ ಗಮನಿಸಿ. ಜಿಲ್ಲಾಡಳಿತ ಮಹತ್ವದ ಆದೇಶ ಒಂದನ್ನು ಹೊರಡಿಸಿದೆ.
ಚಿಕ್ಕಮಗಳೂರು (ಸೆ.02): ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಮಳೆ ಹಾಗೂ ಮಂಜು ಮುಸುಕಿದ ವಾತಾವರಣ ಇದ್ದರಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿತ್ತು.
ಇದಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಆದೇಶವನ್ನು ಹೊರಡಿಸಿರುವ ಜಿಲ್ಲಾಧಿಕಾರಿಗಳು ಮಳೆ ಪ್ರಮಾಣ ಇಳಿಮುಖ ಹಾಗೂ ಮಂಜು ಕವಿದ ವಾತಾವರಣ ಇಲ್ಲದಿರುವುದರಿಂದ ಈ ರಸ್ತೆಯಲ್ಲಿ ಲಘು ವಾಹನಗಳು ಹಗಲು-ರಾತ್ರಿ ಓಡಾಡಬಹುದೆಂದು ತಿಳಿಸಿದ್ದಾರೆ
ಭಾರೀ ಮಳೆ ಹಿನ್ನೆಲೆಯಲ್ಲಿ ಈ ಹಿಂದೆಯೂ ಅನೇಕ ಬಾರಿ ಚಾರ್ಮಾಡಿ ಘಾಟಿಯಲ್ಲಿ ಪ್ರಯಾಣಿಕರ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಅಲ್ಲದೇ ಕಳೆದ ವರ್ಷ ಸುರಿದ ಭಾರೀ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ಹಲವೆಡೆ ಮಣ್ಣು ಕುಸಿತ ಸಮಭವಿಸಿ ಸಮಚಾರವೇ ದುಸ್ಥರವಾಗಿತ್ತು.
ಇದೀಗ ಇಲ್ಲಿ ಸಂಚಾರಕ್ಕೆ ಇದ್ದ ನಿರ್ಬಂಧ ಸಡಿಲಿಸಿದ ಚಿಕ್ಕಮಗಳೂರು ಜಿಲ್ಲಾಡಳಿತ ಲಘು ವಾಹನ ಸಂಚಾರ ಮಾಡಲು ಅವಕಾಶ ನೀಡಿದೆ.