ಕೊರೋನಾ ಆತಂಕ: SSLC ಪರೀಕ್ಷೆಗೆ ಸಿದ್ಧತೆ ನಡೆಸಿ
ಪರೀಕ್ಷೆಗೆ ಹಾಜರಾಗುವ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಜಿಲ್ಲೆಯಲ್ಲಿ ಸ್ಥಾಪಿಸಲಾದ ಒಟ್ಟು 77 ಪರಿಕ್ಷಾ ಕೇಂದ್ರಗಳ ಎಲ್ಲ ಕೊಠಡಿಗಳಿಗೆ ಡಿಸ್‌ಇನ್‌ಫೆಕ್ಟೆಡ್ ದ್ರಾವಣ ಸಿಂಪಡಿಸಲು ಕ್ರಮ| ಪರೀಕ್ಷೆ ಬರೆಯುವ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಮುಗಿಯುವವರೆಗೂ ಪ್ರತಿನಿತ್ಯ ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಜರ್ ನೀಡಬೇಕು| ಪ್ರತಿಯೊಬ್ಬ ವಿದ್ಯಾರ್ಥಿಗೂ ಥರ್ಮಲ್ ಸ್ಕ್ಯಾನರ್‌ನಿಂದ ತಪಾಸಣೆಗೆ ಮಾಡಬೇಕು|
ರಾಯಚೂರು(ಜೂ.06): ಜೂ.25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಡಿಸ್‌ಇನ್‌ಫೆಕ್ಟಡ್ ಔಷಧಿಯನ್ನು ಸಿಂಪಡಿಸುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ನಿರ್ದೇಶಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆಗಳ ಕುರಿತು ತಾಲೂಕು ಅಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಶುಕ್ರವಾರ ಮಾತನಾಡಿದರು. ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಜಿಲ್ಲೆಯಲ್ಲಿ ಸ್ಥಾಪಿಸಲಾದ ಒಟ್ಟು 77 ಪರಿಕ್ಷಾ ಕೇಂದ್ರಗಳ ಎಲ್ಲ ಕೊಠಡಿಗಳಿಗೆ ಡಿಸ್‌ಇನ್‌ಫೆಕ್ಟೆಡ್ ದ್ರಾವಣ ಸಿಂಪಡಿಸಲು ಕ್ರಮ ಕೈಗೊಳ್ಳಬೇಕು, ಪರೀಕ್ಷೆ ಬರೆಯುವ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಮುಗಿಯುವವರೆಗೂ ಪ್ರತಿನಿತ್ಯ ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಜರ್ ನೀಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗೂ ಥರ್ಮಲ್ ಸ್ಕ್ಯಾನರ್‌ನಿಂದ ತಪಾಸಣೆಗೆ ಮಾಡಬೇಕು ಎಂದರು.
ದೇವದುರ್ಗ: ಕ್ವಾರಂಟೈನ್ ಕೇಂದ್ರದಲ್ಲಿ ಮೃತ ಬಾಲಕನಿಗೆ ಕೊರೋನಾ ಪಾಸಿಟಿವ್
ಪರೀಕ್ಷಾ ಕೇಂದ್ರಗಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು, ಮಕ್ಕಳು ಮಾಸ್ಕ್ ಧರಿಸಿ ಪರೀಕ್ಷೆ ಕೇಂದ್ರ ಪ್ರವೇಶಿಸಬೇಕು. ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಪ್ರತಿ ಕೋಣೆಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಬೇಕು, ಕಂಟೈನ್ಮೆಂಟ್ ವಲಯದಲ್ಲಿರುವ ಮಕ್ಕಳಿಗೆ ಪರೀಕ್ಷೆ ಸಮಯದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಎನ್-95 ಮಾಸ್ಕ್‌ಗಳನ್ನು ವಿತರಿಸಬೇಕು ಹಾಗೂ ಪ್ರತ್ಯೇಕ ಕೊಠಡಿಗಳಲ್ಲಿ ಬರೆಯಲು ವ್ಯವಸ್ಥೆ ಮಾಡಲು ತಿಳಿಸಿದರು. ಕುಡಿಯುವ ನೀರನ್ನು ಮಕ್ಕಳೇ ತರಬೇಕು. ಪೆನ್, ಕಂಪಾಸ್ ಪೆಟ್ಟಿಗೆಯಂತಹ ಇತರ ಸಾಮಗ್ರಿಗಳನ್ನು ಬೇರೆಯವರಿಂದ ಪಡೆಯುವಂತಿಲ್ಲವೆಂದು ತಿಳಿಸಿದರು.
ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶಿಸುವಾಗ, ಮರಳಿ ಹೋಗುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಂದ ಜಿಲ್ಲಾ ಸ್ಟ್ರಾಂಗ್ ರೂಂಗಳಿಗೆ ಪಶ್ನೆ ಪತ್ರಿಕೆ, ಉತ್ತರ ಪತ್ರಿಕೆಗಳ ಸಾಗಾಣಿಕೆಗೆ ಸೂಕ್ತ ಭದ್ರತೆಯನ್ನು ಒದಗಿಸಲಾಗುತ್ತದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಸಿಆರ್‌ಪಿಸಿ ಕಲಂ ನಿಷೇಧಾಜ್ಞೆ ಜಾರಿಮಾಡಲಾಗುವುದು. ಜೆರಾಕ್ಸ ಅಂಗಡಿಗಳನ್ನು ಮುಚ್ಚಿಸಲು ಆದೇಶಿಸುವುದಾಗಿ ತಿಳಿಸಿದರು.