ಬೆಳಗಾವಿ(ಜು.18): ಮುಂಬರುವ ಆಗಸ್ಟ 27ಕ್ಕೆ ನಿಗದಿಯಾಗಿದ್ದ ಜಿಲ್ಲಾ ಕೇಂದ್ರ ಸಹಕಾರಿ (ಡಿ.ಸಿ.ಸಿ) ಬ್ಯಾಂಕಿನ ಚುನಾವಣೆಯ ಎಲ್ಲ ಪ್ರಕ್ರಿಯೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಸರ್ಕಾರದ ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಡಿಸಿಸಿ ಬ್ಯಾಂಕಿನ ಆಡಳಿತಾಧಿಕಾರಿ ಎಂ.ಜಿ. ಹಿರೇಮಠ ಅವರು ತಿಳಿಸಿದ್ದಾರೆ. 

ಈ ಕುರಿತು ಪ್ರಕಟಣೆ ನೀಡಿರುವ ಅವರು ಡಿಸೆಂಬರ್‌ 2020ರ ಅಂತ್ಯದವರೆಗೆ ಚುನಾವಣೆಯ ಎಲ್ಲ ಪ್ರಕ್ರಿಯೆಗಳನ್ನು ಸರ್ಕಾರ ಮುಂದೂಡಿದೆ ಎಂದು ತಿಳಿಸಿದ್ದಾರೆ. 

ಅಥಣಿ: ಕೊರೋನಾ ಭಯದಿಂದ ಬಾರದ ಜನ, ತಳ್ಳು ಗಾಡಿಯಲ್ಲಿ ಶವ ಸಾಗಿಸಿ ಅಂತ್ಯಕ್ರಿಯೆ!

ಬೆಳಗಾವಿ ಜಿಲ್ಲೆಯ ಕೇಂದ್ರ ಸಹಕಾರಿ ಬ್ಯಾಂಕಿನ ಚುನಾವಣೆಯ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಬ್ಯಾಂಕಿನ ಎಲ್ಲಾ ಸದಸ್ಯ ಸಹಕಾರಿ ಸಂಘಗಳಿಗೆ, ಬ್ಯಾಂಕುಗಳಿಗೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.