ಶಿರಾ(ಜೂ.11): ಕೋವಿಡ್‌-19 ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿದ್ದ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಪ್ರಥಮ ಎಂಬಂತೆ 10000 ರೂಪಾಯಿಗಳನ್ನು ಸಾಲವಾಗಿ ವಿತರಿಸಲಾಗುತ್ತಿದೆ ಎಂದು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಜಿ.ಎಸ್‌.ರವಿ ತಿಳಿಸಿದರು.

ನಗರದ ಡಿಸಿಸಿ ಬ್ಯಾಂಕ್‌ ಆವರಣದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ನೀಡಲು ಉದ್ದೇಶಿಸಲಾಗಿರುವ ತಲಾ 10000 ರು.ಗಳ ಸಾಲ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡಿ ಮರು ವ್ಯವಹಾರಕ್ಕೆ ಜೀವ ತುಂಬುವ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯ ಅಪೆಕ್ಸ್‌ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ರಾಜಣ್ಣ ಅವರ ನಿರ್ದೇಶನದಲ್ಲಿ ಇಡೀ ಜಿಲ್ಲೆಯ ಎಲ್ಲಾ ಬೀದಿಬದಿ ವ್ಯಾಪಾರಿಗಳ ಸಂಕಷ್ಟಕ್ಕೆ ಸ್ಪಂದಿಸಿ ಸಾಲ ನೀಡುವ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಮುಂದೆ ಮಹಾ ಚಾಲೆಂಜ್..!

ಬೀದಿಬದಿ ವ್ಯಾಪಾರಿಗಳಿಗೆ ರಾಜ್ಯದಲ್ಲಿ ಯಾವುದೇ ಬ್ಯಾಂಕುಗಳು ಆಧಾರವಿಲ್ಲದೆ ಸಾಲ ನೀಡಿದ ಪ್ರಕರಣಗಳು ಇಲ್ಲ. ಆದರೆ ಡಿಸಿಸಿ ಬ್ಯಾಂಕ್‌ ಪ್ರಥಮವಾಗಿ ಸಾಲ ನೀಡುವ ಪ್ರಕ್ರಿಯೆ ಪ್ರಾರಂಭಿಸಿದೆ. ಇದೇ ರೀತಿ ಸಣ್ಣ ಹಿಡುವಳಿದಾರಿಗೆ ಮೇಕೆ, ಕುರಿ ಹಾಗೂ ಹಸು ಸಾಕಾಣಿಕೆಗೆ 65000 ರೂಗಳ ಸಾಲ ನೀಡಲಾಗುವುದು. ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

8 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ

ಬ್ಯಾಂಕಿನ ವ್ಯವಸ್ಥಾಪಕ ಹನುಮಂತರಾಜು, ಮೇಲ್ವಿಚಾರಕ ಜನಾರ್ಧನ್‌, ವಿಠಲ್‌, ಮಾಗೋಡು ವಿಎಸ್‌ಎಸ್‌ಎನ್‌ ಅಧ್ಯಕ್ಷ ಶ್ರೀರಂಗಪ್ಪ, ದೊಡ್ಡಗೂಳ ವಿಎಸ್‌ಎಸ್‌ಎನ್‌ ಅಧ್ಯಕ್ಷ ಗಿರೀಶ್‌ ಸೇರಿದಂತೆ ಬ್ಯಾಂಕಿನ ಸಿಬ್ಬಂದಿ ಹಾಜರಿದ್ದರು.