Asianet Suvarna News

ಶ್ಯಾಮಪ್ರಸಾದ್ ಮುಖರ್ಜಿ ಸ್ಮರಣಾರ್ಥ 11 ಲಕ್ಷ ಸಸಿ ನೆಡುವ ಕಾರ್ಯಕ್ರಮ

  • ಡಾ.ಶ್ಯಾಮಪ್ರಸಾದ್‌ ಮುಖರ್ಜಿ ಸ್ಮರಣಾರ್ಥ ರಾಜ್ಯದಲ್ಲಿ 11 ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮ
  • ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ  ಮಾಹಿತಿ
  • ಬೀಜದ ಉಂಡೆ ತಯಾರಿಸುವ ಕಾರ್ಯಕ್ರಮಕ್ಕೆ ಚಾಲನೆ
DCM Ashwath Narayan launches seed Ball preparing Programme  in bengaluru snr
Author
Bengaluru, First Published Jun 29, 2021, 1:41 PM IST
  • Facebook
  • Twitter
  • Whatsapp

ಬೆಂಗಳೂರು (ಜೂ.29): ಜನಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಡಾ.ಶ್ಯಾಮಪ್ರಸಾದ್‌ ಮುಖರ್ಜಿ ಸ್ಮರಣಾರ್ಥ ರಾಜ್ಯದಲ್ಲಿ 11 ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನ ಬಿಜೆಪಿ ಹಮ್ಮಿಕೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. 

ಬೆಂಗಳೂರಿನ ಬಿಜೆಪಿ ನಗರ ಕಚೇರಿಯಲ್ಲಿ ಮಂಗಳವಾರ ಡಾ.ಶ್ಯಾಮಪ್ರಸಾದ್ ಮುಖರ್ಜಿ ಜಯಂತಿ ಪ್ರಯುಕ್ತ ಸಸಿಗಳ ಬೀಜದ ಉಂಡೆ ತಯಾರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಕ್ಷದ ಯುವಮೋರ್ಚಾ ಕಾರ್ಯಕರ್ತರು ಬೀಜದ ಉಂಡೆಗಳನ್ನು ತಯಾರು ಮಾಡುತ್ತಿದ್ದು, ರಾಜ್ಯದೆಲ್ಲೆಡೆ ಬಹಳ ಉತ್ಸಹಾದಿಂದ ಈ ಕಾರ್ಯ ನಡೆಯುತ್ತಿದೆ ಎಂದರು. 

ಕೆಂಪೇಗೌಡ ಜಯಂತಿಯನ್ನು 3 ದಿನ ಬೆಂಗಳೂರು ಹಬ್ಬವನ್ನಾಗಿ ಆಚರಣೆ: ಡಿಸಿಎಂ ಘೋಷಣೆ .

ಎಲ್ಲೆಲ್ಲಿ ಸಸಿಗಳನ್ನು ನೆಡಬೇಕು ಎಂಬುದನ್ನು ಗುರುತಿಸಲಾಗುವುದು. ಗಿಡವನ್ನು ನೆಟ್ಟ ನಂತರ ಸ್ಥಳೀಯ ಮಟ್ಟದಲ್ಲೇ ಅದನ್ನು ಆರೈಕೆ ಮಾಡುವ ಕೆಲಸವನ್ನೂ ಮಾಡಲಾಗುವುದು ಎಂದು ಡಿಸಿಎಂ ಹೇಳಿದರು. 

ಶಿಕ್ಷಣ ನೀತಿಯಲ್ಲಿ ಪರಿಸರ ವಿಷಯವನ್ನು ಈ ವರ್ಷದಿಂದಲೇ ಜಾರಿಗೆ ಬರುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪರಿಸರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಎಲ್ಲ ಶೈಕ್ಷಣಿಕ ಹಂತಗಳಲ್ಲೂ ಪರಿಸರವನ್ನು ವಿಶೇಷ ಒತ್ತು ನೀಡಿ ಬೋಧಿಸಲಾಗಿದೆ ಎಂದು ತಿಳಿಸಿದರು. 

 

ಭಾರತವು ಕೈಗಾರಿಕೆ ಇನ್ನಿತರೆ ಕ್ಷೇತ್ರಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ಪೂರಕವಾಗಿ ಹಸಿರನ್ನು ಹೆಚ್ಚಿಸುವ ಕೆಲಸಮಾಡಲಾಗುತ್ತಿದೆ. ಜಾಗತಿಕ ಹವಾಮಾನದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶ್ವಕ್ಕೆ ನಾಯಕತ್ವ ವಹಿಸಿ ಕೆಲಸ ಮಾಡುತ್ತಿದ್ದಾರೆ. ಕಳೆದ 7 ವರ್ಷಗಳಲ್ಲಿ ದೇಶಾದ್ಯಂತ ಅರಣ್ಯದ ಪ್ರಮಾಣ ಶೇ.24ಕ್ಕೆ ವಿಸ್ತರಿಸಲಾಗಿದೆ. ಜತೆಗೆ, ವನ್ಯಜೀವಿಗಳನ್ನು ರಕ್ಷಿಸಿ ಅವುಗಳ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಈ ನಿಟ್ಟಿನಲ್ಲಿ ಪಕ್ಷವೂ ಕಾರ್ಯೋನ್ಮುಖವಾಗಿದೆ ಎಂದರು. 

ಡಿಸಿಎಂ ಅಶ್ವತ್ಥ್ ನಾರಾಯಣ ಕ್ಷೇತ್ರ ಮಲ್ಲೇಶ್ವರಂನಲ್ಲಿ ಮನೆ-ಮನೆಗೂ ತೆರಳಿ ಲಸಿಕೆ

ರಾಜ್ಯದಲ್ಲಿ ಮಾಲಿನ್ಯ ನಿಯಂತ್ರಕ್ಕೆ ಹೆಚ್ಚು ಹೆಚ್ಚಾಗಿ ಅಸಂಪ್ರದಾಯಿಕ ಇಂಧನ ಮೂಲಗಳನ್ನು ಬಳಕೆ ಮಾಡುವುದು, ಸೌರಶಕ್ತಿ ಉತ್ಪಾದನೆಗೆ ಒತ್ತು ಹಾಗೂ ಎಲೆಕ್ಟ್ರಿಕ್‌ ವಾಹನಗಳ ಬಳಕೆ ಭಾರೀ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. 

ಯುವಮೋರ್ಚಾ ಅಧ್ಯಕ್ಷ ಡಾ.ಸಂದೀಪ್‌, ಪಕ್ಷದ ಕೇಂದ್ರ ವಿಭಾಗದ ಅಧ್ಯಕ್ಷ ಮಂಜುನಾಥ್‌, ಬೆಂಗಳೂರು ಉತ್ತರ ಅಧ್ಯಕ್ಷ ನಾರಾಯಣ ಗೌಡ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ದಶರಥ್‌, ಪ್ರಶಾಂತ್‌, ಅಭಿಲಾಶ್‌ ರೆಡ್ಡಿ, ಪುನೀತ್‌, ಗಂಗಾಧರ್‌, ಅನಿಲ್‌ ಶೆಟ್ಟಿ ಸೇರಿ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Follow Us:
Download App:
  • android
  • ios