ಮೃತ ಪತ್ರಕರ್ತನ ಕುಟುಂಬಕ್ಕೆ 5 ಲಕ್ಷ ರೂ., ಪತ್ನಿಗೆ KMFನಲ್ಲಿ ಉದ್ಯೋಗ: DCM ಅಶ್ವತ್ಥನಾರಾಯಣ
ಅಪಘಾತದಲ್ಲಿ ಮೃತಪಟ್ಟ ಖಾಸಗಿ ಸುದ್ದಿ ವಾಹಿನಿಯ ಪತ್ರಕರ್ತ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಾ. ಅಶ್ವತ್ಥನಾರಾಯಣ| ಕೆಎಂಎಫ್‌ನಲ್ಲಿ ಹನಮಂತು ಅವರ ಪತ್ನಿ ಎನ್. ಶಶಿಕಲಾ ಅವರಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದರು. ಜತೆಗೆ, ಸರ್ಕಾರದ ಕಡೆಯಿಂದ ಬರಬೇಕಿರುವ 5 ಲಕ್ಷ ರೂ. ಪರಿಹಾರ ಕೊಡಿಸುವುದಾಗಿ ಹೇಳಿದ್ದಾರೆ|
ರಾಮನಗರ(ಮೇ.11): ಅಪಘಾತದಲ್ಲಿ ಮೃತಪಟ್ಟ ಖಾಸಗಿ ಸುದ್ದಿ ವಾಹಿನಿಯ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು, ಪತ್ರಕರ್ತನ ಪತ್ನಿಗೆ ಕೆಎಂಎಫ್ ಜಿಲ್ಲಾ ಒಕ್ಕೂಟದಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
ಹಾರೋಹಳ್ಳಿಯ ಪಡುವಣಗೆರೆಯಲ್ಲಿರುವ ಹನುಮಂತು ಅವರ ನಿವಾಸಕ್ಕೆ ಇಂದು(ಸೋಮವಾರ) ಭೇಟಿ ನೀಡಿ ವೈಯಕ್ತಿಕವಾಗಿ 5 ಲಕ್ಷ ರೂ. ಚೆಕ್‌ಅನ್ನು ಕುಟುಂಬದವರಿಗೆ ನೀಡಿದ್ದಾರೆ.
ಕೆಎಂಎಫ್ ಅಧ್ಯಕ್ಷರಿಗೆ ಪತ್ರ ಬರೆದು, ಅವರ ಜತೆ ಮಾತನಾಡಿ ಜಿಲ್ಲಾ ಹಾಲು ಒಕ್ಕೂಟದಲ್ಲಿ ಹನಮಂತು ಅವರ ಪತ್ನಿ ಎನ್. ಶಶಿಕಲಾ ಅವರಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದರು. ಜತೆಗೆ, ಸರ್ಕಾರದ ಕಡೆಯಿಂದ ಬರಬೇಕಿರುವ 5 ಲಕ್ಷ ರೂ. ಪರಿಹಾರ ಕೊಡಿಸುವುದಾಗಿ ಹೇಳಿದ್ದಾರೆ.
ರಾಮನಗರ: ಮಲಗಿದ್ದ ಮಗು ಹೊತ್ತೊಯ್ದು ತಿಂದು ಭಕ್ಷಿಸಿದ ಚಿರತೆ..!
ಕಳೆದ ಏಪ್ರಿಲ್ 21 ರಂದು ರಾಮನಗರದಲ್ಲಿ ವರದಿಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಖಾಸಗಿ ಸುದ್ದಿ ವಾಹಿನಿಯ ಜಿಲ್ಲಾ ವರದಿಗಾರ ಹನುಮಂತು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು. ಅಂದೇ ಡಾ. ಅಶ್ವತ್ಥನಾರಾಯಣ ಅವರು 5 ಲಕ್ಷ ರೂ.ಗಳ ವೈಯಕ್ತಿಕ ಪರಿಹಾರ ನೀಡುವುದಾಗಿ ಪ್ರಕಟಿಸಿದ್ದರು.
ಈ ಮಧ್ಯೆ, ಬೆಂಗಳೂರಿನ ಖಾಸಗಿ ವಾಹಿನಿಯ ವಾಹಿನಿಯ ಕೊರೋನಾ ಸೋಂಕಿತ ಸಿಬ್ಬಂದಿಯ ಸಂಪರ್ಕಕ್ಕೆ ಬಂದಿದ್ದ ಈ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತರಾಗಿ ಹೋಂ ಕ್ವಾರಂಟೈನ್ ಆಗಿದ್ದರು. ಹೀಗಾಗಿ ಉಪಮುಖ್ಯಮಂತ್ರಿಯವರ ರಾಮನಗರ ಭೇಟಿಯನ್ನು ಅನಿವಾರ್ಯವಾಗಿ ಮುಂದೂಡಲಾಗಿತ್ತು.