ಶೀಘ್ರದಲ್ಲಿ 1750 ಉಪನ್ಯಾಸಕರ ನೇಮಕ: DCM ಅಶ್ವತ್ಥ ನಾರಾಯಣ

ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕೇಂದ್ರೀಯ ಗ್ರಂಥಾಲಯ ಉದ್ಘಾಟಿಸಿದ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ|ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಗುಣಮಟ್ಟ ತರುವುದು ಬಹುದೊಡ್ಡ ಸವಾಲು| ಸವಾಲು ನಾವು ಸಮರ್ಥವಾಗಿ ನಿಭಾಯಿಸಲು ಸಿದ್ಧರಿದ್ದೇವೆ|

DCM C N Ashwath Narayan Talks Over Appointment of Lecturers

ಬಳ್ಳಾರಿ(ಫೆ.27): ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರ ಕೊರತೆ ನೀಗಿಸಲು ಹೊಸದಾಗಿ 1750 ಉಪನ್ಯಾಸಕರನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.  

ಬುಧವಾರ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕೇಂದ್ರೀಯ ಗ್ರಂಥಾಲಯ ಉದ್ಘಾಟನೆ ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಗುಣಮಟ್ಟ ತರುವುದು ಬಹುದೊಡ್ಡ ಸವಾಲಾಗಿದೆ. ಆ ಸವಾಲನ್ನು ನಾವು ಸಮರ್ಥವಾಗಿ ನಿಭಾಯಿಸಲು ಸಿದ್ಧರಿದ್ದೇವೆ. ವರ್ಗಾವಣೆ ನೀತಿಯ ಗೊಂದಲಕ್ಕೆ ತೆರೆ ಎಳೆಯಲು ಹೊಸದಾಗಿ ಕಾನೂನು ಜಾರಿಗೊಳಿಸುತ್ತಿದ್ದೇವೆ. ಎಲ್ಲ ಕಾಲೇಜುಗಳಿಗೆ ಉಪನ್ಯಾಸಕರ ಹಂಚಿಕೆಯಾಗಬೇಕು. ಎಲ್ಲೂ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂಬ ಉದ್ದೇಶದಿಂದ ಕಾನೂನಿನಲ್ಲಿ ತಿದ್ದುಪಡಿಯನ್ನು ಸಹ ತರಲಿದ್ದೇವೆ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನಮ್ಮ ರಾಜ್ಯದ ಶಿಕ್ಷಣದ ಗುಣಮಟ್ಟ ಬೇರೆ ರಾಜ್ಯಗಳಿಗಿಂತ ಉನ್ನತವಾಗಿರಬೇಕು. ಈ ದಿಕ್ಕಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ. ಉಪನ್ಯಾಸಕರ ಕೊರತೆ ನೀಗಿಸುವುದು ಸೇರಿದಂತೆ ಕಾಲೇಜುಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಸಿದ್ಧವಿದ್ದು, ಶೀಘ್ರವೇ ನಿರ್ದಿಷ್ಟ ಕಾರ್ಯಕ್ರಮಗಳು ಅನುಷ್ಠಾನಗೊಳ್ಳಲಿವೆ ಎಂದರು.
 

Latest Videos
Follow Us:
Download App:
  • android
  • ios