ಎಂಇಎಸ್‌ನವರು ಪ್ರತಿವರ್ಷ ಕರಾಳ ದಿನ ಆಚರಿಸಿಕೊಂಡು ಬರುತ್ತಿದ್ದಾರೆ. ಅವರಿಗೂ ಸ್ವಾತಂತ್ರ್ಯವಿದೆ, ಅವರ ಭಾವನೆ ವ್ಯಕ್ತಪಡಿಸಲು ಹಕ್ಕಿದೆ. ಆದರೆ ನಾವು ಕನ್ನಡತನವನ್ನ ಹೆಚ್ಚಿಸುವ ಪ್ರಯತ್ನ ಮಾಡುತ್ತಿದ್ದೇವೆ: ಅಶ್ವತ್ಥ್‌ ನಾರಾಯಣ್ 

ರಾಮನಗರ(ನ.01): ಎಂಇಎಸ್‌ನವರು ಪ್ರತಿವರ್ಷ ಕರಾಳ ದಿನ ಆಚರಿಸಿಕೊಂಡು ಬರುತ್ತಿದ್ದಾರೆ. ಅವರಿಗೂ ಸ್ವಾತಂತ್ರ್ಯವಿದೆ, ಅವರ ಭಾವನೆ ವ್ಯಕ್ತಪಡಿಸಲು ಹಕ್ಕಿದೆ. ಆದರೆ ನಾವು ಕನ್ನಡತನವನ್ನ ಹೆಚ್ಚಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ್‌ ನಾರಾಯಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

Add Asianetnews Kannada as a Preferred SourcegooglePreferred

ಇಂದು(ಭಾನುವಾರ) ರಾಮನಗರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಅಶ್ವತ್ಥ್‌ ನಾರಾಯಣ್ ಅವರು, ಎಂಇಎಸ್‌ ಮಾಡುತ್ತಿರುವ ಪುಂಡಾಟವನ್ನ ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಮಾತನಾಡಿದ್ದಾರೆ. 

ಬೆಳಗಾವಿಯಲ್ಲಿ MES ಪುಂಡರ ಉದ್ಧಟತನ: ಕನ್ನಡ ಪರ ಹೋರಾಟಗಾರನ ಬಂಧನ, ಭುಗಿಲೆದ್ದ ಆಕ್ರೋಶ

ಕನ್ನಡ ರಾಜ್ಯೋತ್ಸವ ದಿನದಂದು ಎಂಇಎಸ್‌ ಪುಂಡರು ಬೆಳಗಾವಿಯಲ್ಲಿ ಕರಾಳ ದಿನ ಅಚರಿಸಿಕೊಂಡು ಬರುತ್ತಿದ್ದಾರೆ. ಈ ಬಾರಿ ಕರಾಳ ದಿನ ಆಚರಿಸಲು ಬೆಳಗಾವಿ ಜಿಲ್ಲಾಡಳಿತ ಪರವಾನಗಿ ನೀಡಿಲ್ಲ. ಹೀಗಾಗಿ ಕುಂದಾನಗರಿಯಲ್ಲಿ ನಾಡದ್ರೋಹಿ ಎಂಇಎಸ್‌ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಓರ್ವ ಕನ್ನಡಪರ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.