ಪಿಪಿಎ ಕಿಟ್‌ ಧರಿಸಿ ವಾರ್ಡ್‌ನಲ್ಲಿದ್ದ ಸೋಂಕಿತರನ್ನು ಭೇಟಿ ಮಾಡಿ ಚಿಕಿತ್ಸೆ ಕುರಿತು ಮಾಹಿತಿ ಪಡೆದ ಉಭಯ ನಾಯಕರು| ಆಸ್ಪತ್ರೆಯಲ್ಲಿ ಸ್ಥಾಪಿಸಿದ ಹೊಸ ‘ಮಾಡ್ಯೂಲರ್‌ ಕೋವಿಡ್‌ ಐಸಿಯು ಘಟಕ’ಗಳು, ಅಲ್ಲಿನ ವ್ಯವಸ್ಥೆ ಕುರಿತು ಪರಿಶೀಲಿಸಿದ ಡಾ.ಅಶ್ವತ್ಥನಾರಾಯಣ ಮತ್ತು ಪಿ.ಸಿ.ಮೋಹನ್‌| 

ಬೆಂಗಳೂರು(ಏ.26): ಉಪ ಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಮತ್ತು ಸಂಸದ ಪಿ.ಸಿ.ಮೋಹನ್‌ ಅವರು ಭಾನುವಾರ ನಗರದ ಕೆ.ಸಿ.ಜನರಲ್‌ ಆಸ್ಪತ್ರೆಯ ಕೋವಿಡ್‌ ಚಿಕಿತ್ಸಾ ಘಟಕಗಳಿಗೆ ಭೇಟಿ ನೀಡಿ ಸೋಂಕಿತರ ಯೋಗ ಕ್ಷೇಮ ವಿಚಾರಿಸಿದ್ದಾರೆ.

ಉಭಯ ನಾಯಕರು ಪಿಪಿಎ ಕಿಟ್‌ ಧರಿಸಿ ವಾರ್ಡ್‌ನಲ್ಲಿದ್ದ ಸೋಂಕಿತರನ್ನು ಭೇಟಿ ಮಾಡಿ ಚಿಕಿತ್ಸೆ ಕುರಿತು ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ಸ್ಥಾಪಿಸಿದ ಹೊಸ ‘ಮಾಡ್ಯೂಲರ್‌ ಕೋವಿಡ್‌ ಐಸಿಯು ಘಟಕ’ಗಳು, ಅಲ್ಲಿನ ವ್ಯವಸ್ಥೆ ಕುರಿತು ಪರಿಶೀಲಿಸಿದರು.

ರಾಜ್ಯದಲ್ಲಿ ಆಕ್ಸಿಜನ್​​ ಕೊರತೆ: ಅನುಮಾನ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ

ಈ ವೇಳೆ ಮಾತನಾಡಿದ ಅಶ್ವತ್ಥನಾರಾಯಣ, ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್‌ ಕೀ ಬಾತ್‌’ ಭಾಷಣದಲ್ಲಿ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ಸುರೇಖಾ ಎಂಬ ನರ್ಸ್‌ ಹೆಸರನ್ನು ಪ್ರಸ್ತಾಪಿಸಿದ್ದು ಸಂತಸ ತಂದಿದೆ. ಸುರೇಖಾರಂತೆ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿರುವ ಆಸ್ಪತ್ರೆಯ ಎಲ್ಲ ವೈದ್ಯರು, ನರ್ಸ್‌ಗಳು ಹಾಗೂ ಪ್ಯಾರಾ ಮಡಿಕಲ್‌ ಸಿಬ್ಬಂದಿ ಕಾರ್ಯ ಶ್ಲಾಘಿಸಿದರು. ನಗರದಲ್ಲಿ ಸೋಂಕಿತರಿಗೆ ಹಾಸಿಗೆ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.