Asianet Suvarna News Asianet Suvarna News

ಮೊಸರಲ್ಲಿ ಕಲ್ಲು ಹುಡುಕುತ್ತಿರುವ ಸಿದ್ದರಾಮಯ್ಯ: ಕಾರಜೋಳ

* ಕಾಂಗ್ರೆಸ್‌ ಆಡಳಿತದಲ್ಲಿ ರಾಜ್ಯದ ಎಷ್ಟು ಜನರಿಗೆ ಸಚಿವ ಸ್ಥಾನ ಸಿಕ್ಕಿತ್ತು?
* ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಅವಕಾಶ ಸಿಕ್ಕಿದೆ
* ರಾಜ್ಯದ ಸಂಸದರಿಗೆ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ಸಿಕ್ಕಿರುವುದು ಖುಷಿ ತಂದಿದೆ  

DCM Govind Karjol Talks Over Siddaramaiah grg
Author
Bengaluru, First Published Jul 9, 2021, 1:35 PM IST

ಬೆಳಗಾವಿ(ಜು.09): ಹಣಕಾಸು ಸೇರಿ ಪ್ರಮುಖ ಇಲಾಖೆಗಳು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಸಚಿವರ ಕೈಯಲ್ಲಿವೆ. ಕಾಂಗ್ರೆಸ್‌ ಆಡಳಿತದಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಸಿಕ್ಕಿತ್ತು? ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದರು.

ಸುವರ್ಣವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಸ್ಥಾನ ನೀಡಿರುವುದು ಕರ್ನಾಟಕಕ್ಕೆ ಊಟದಲ್ಲಿ ಉಪ್ಪಿನಕಾಯಿ ಸಿಕ್ಕಂತಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸುವ ಮೂಲಕ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಆಡಳಿತದಲ್ಲಿ ರಾಜ್ಯದ ಎಷ್ಟು ಜನರಿಗೆ ಸಚಿವ ಸ್ಥಾನ ಸಿಕ್ಕಿತ್ತು ಎಂಬುದನ್ನು ಮೊದಲು ಸಿದ್ದರಾಮಯ್ಯ ಹೇಳಲಿ. ಹಣಕಾಸು, ಗಣಿ ಮತ್ತು ಭೂವಿಜ್ಞಾನ ಇಲಾಖೆ ರಾಜ್ಯದವರ ಕೈಯಲ್ಲಿದೆ. ರಾಜ್ಯಕ್ಕೆ ಸಿಕ್ಕ ಎಲ್ಲ ಇಲಾಖೆಗಳು ಮಹತ್ವದಾಗಿವೆ ಎಂದರು.

ಎಲ್ಲಾ ಹುದ್ದೆಗೂ ಡೀಲ್ ಮಾಡಿ ಹಣ ಮಾಡುತ್ತಿದ್ದಾರೆ : ಸಿದ್ದರಾಮಯ್ಯ

ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಅವಕಾಶ ಸಿಕ್ಕಿದೆ. ಇದನ್ನು ಬಳಸಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ. ರಾಜ್ಯದಿಂದ ಆಯ್ಕೆಯಾದ ಸಂಸದರಿಗೆ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ಸಿಕ್ಕಿರುವುದು ಖುಷಿ ತಂದಿದೆ ಎಂದು ಅವರು ಹೇಳಿದರು.
 

Follow Us:
Download App:
  • android
  • ios