ರಾಯಚೂರು(ಡಿ.15): ರಾಜ್ಯದ ಹಲವಡೆ ಫಾಸ್ಟ್‌ಟ್ಯಾಗ್‌ಗೆ ಸಂಬಂಧಿಸಿದಂತೆ ಆಗುತ್ತಿರುವ ತೊಂದರೆಗಳ ಬಗ್ಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದಷ್ಟು ಬೇಗ ಚಿಕ್ಕ -ಪುಟ್ಟ ಸಮಸ್ಯೆಗಳು ಬಗೆಹರಿಸಬೇಕು ಎಂದು ತಿಳಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ. 

ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಫಾಸ್ಟ್‌ಟ್ಯಾಗ್‌ನಿಂದ ವಾಹನ ಸವಾರರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. ಫಾಸ್ಟ್‌ಟ್ಯಾಗ್‌ ವಿಚಾರವಾಗಿ ಇರುವ ಗೊಂದಲಗಳ ಬಗ್ಗೆ ಚರ್ಚೆ ಮಾಡಲು ಡಿ.22ರಂದು ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ಫಾಸ್ಟ್‌ಟ್ಯಾಗ್‌ಗೊಂದಲ ದೂರ ಮಾಡುತ್ತೇವೆ ಎಂದು ಸವದಿ ಭರವಸೆ ನೀಡಿದ್ದಾರೆ. 

ಫಾಸ್ಟ್ಯಾಗ್ ಅಳವಡಿಕೆ ಮುಂದೂಡಿಕೆ : ಸವಾರರು ನಿರಾಳ!

ರಾಜ್ಯದ ಹಲವಡೆ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್‌ಟ್ಯಾಗ್‌ ಸಂಪೂರ್ಣವಾಗಿ ಜಾರಿಯಾಗಿಲ್ಲ. ಹೀಗಾಗಿ ಕೆಲವು ಕಡೆ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.